ಬ್ರೇಕಿಂಗ್ ನ್ಯೂಸ್
19-10-23 12:32 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ರಾಜ್ಯದಲ್ಲಿನ ಭ್ರಷ್ಟಾಚಾರದ ಇತಿಹಾಸವನ್ನು ತಿರುವಿಹಾಕಿದರೆ ಪುಟ ಪುಟಗಳಲ್ಲಿಯೂ ಬಿಜೆಪಿ ನಾಯಕರ ಮುಖಾರವಿಂದಗಳನ್ನು ಕಾಣಬಹುದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಮಾಜಿ ಮುಖ್ಯಮಂತ್ರಿಗಳಾಧ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ಮಾಜಿ ಶಾಸಕ ಸಂಪಂಗಿಯಿಂದ ಹಿಡಿದು ಇತ್ತೀಚಿನ ಮಾಡಾಳು ವಿರೂಪಾಕ್ಷಪ್ಪನವರ ವರೆಗೆ ಬಿಜೆಪಿ ನಾಯಕರೆಲ್ಲರೂ ಭ‍್ರಷ್ಟಾಚಾರದ ಆರೋಪದಲ್ಲಿ ಜೈಲು ಸೇರಿದವರಾಗಿದ್ದಾರೆ. ಇವರು ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ, ನಗೆಪಾಟಲಿಗೀಡಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮುನಿರತ್ನ, ಡಾ.ಸುಧಾಕರ್ ಮತ್ತು ಬಿ.ಸಿ.ಪಾಟೀಲ್ ಮೇಲೆ 40% ಕಮಿಷನ್ ಆರೋಪ ಇದೆ. ಬಿಟ್ ಕಾಯಿನ್ ಹಗರಣದದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರು ಕೇಳಿಬಂದಿದೆ. ಪಿಎಸ್ ಐ ನೇಮಕಾತಿ ಹಗರಣದಲ್ಲಿ ಡಾ.ಅಶ್ವತ್ಥನಾರಾಯಣ, ಬಿ.ವೈ.ವಿಜಯೇಂದ್ರ ಮತ್ತು ಆರಗ ಜ್ಞಾನೇಂದ್ರ ಶಾಮೀಲಾಗಿರುವ ಆರೋಪ ಎದುರಿಸುತ್ತಿದ್ದಾರೆ. ಚೈತ್ರಾ ಚುನಾವಣಾ ಟಿಕೆಟ್ ವಂಚನೆ ಪ್ರಕರಣದಲ್ಲಿ ಬಿ.ಎಲ್.ಸಂತೋಷ್, ಸುನಿಲ್ ಕುಮಾರ್ ಕಾರ್ಕಳ ಮತ್ತು ಸಿ.ಟಿ.ರವಿ ಅವರ ಹೆಸರುಗಳನ್ನು ಆರೋಪಿಗಳೇ ಉಲ್ಲೇಖಿಸಿದ್ದಾರೆ. ಇವರೆಲ್ಲರೂ ಸೇರಿ ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ.
ಗುತ್ತಿಗೆದಾರರೊಬ್ಬರನ್ನು ಹಣಕ್ಕಾಗಿ ಪೀಡಿಸಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಮತ್ತು ಭ್ರಷ್ಟಾಚಾರದ ಆರೋಪದ ಮೇಲೆಯೇ ಜೈಲಿಗೆ ಹೋಗಿ ಬಂದಿರುವ ಬಿ.ಎಸ್.ಯಡಿಯೂರಪ್ಪನವರು ಮತ್ತು ಅವರ ಮಗ ಕೂಡ ಸತ್ಯಹರಿಶ್ಚಂದ್ರನಂತೆ ಮಾತನಾಡುತ್ತಿರುವುದು ತಮಾಷೆಯಾಗಿ ಕಾಣುತ್ತಿದೆ.
ಕೋಟ್ಯಂತರ ರೂಪಾಯಿ ಲಂಚ ಹೊಡೆಯುತ್ತಿದ್ದಾಗಲೆ ಸಿಕ್ಕಿಬಿದ್ದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಜಾಮೀನು ಮೇಲೆ ಜೈಲಿನಿಂದ ಬಿಡುಗಡೆಯಾದಾಗ ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ನಡೆಸಿದ್ದ ಬಿಜೆಪಿ ನಾಯಕರು ಈಗ ಯಾವುದೋ ಖಾಸಗಿ ಗುತ್ತಿಗೆದಾರನ ಮನೆಯಲ್ಲಿ ಸಿಕ್ಕ ಹಣಕ್ಕಾಗಿ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ಈ ನೈತಿಕತೆ ಬಿಜೆಪಿಗೆ ಇದೆಯೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಚುನಾವಣಾ ರಾಜಕೀಯಕ್ಕಾಗಿ ಯಾವ ಪಕ್ಷ ಹಣ ದೋಚುವುದರಲ್ಲಿ ತೊಡಗಿದೆ ಎನ್ನುವುದು ಚುನಾವಣಾ ಬಾಂಡ್ ಗಳ ಮೂಲಕ ಬಿಜೆಪಿ ಸಂಗ್ರಹಿಸಿದ ಹಣದ ವಿವರವೇ ಸಾಕ್ಷಿಯಾಗಿದೆ. ಮಾರ್ಚ್ 2018ರಿಂದ ಜನವರಿ 2023ರ ವರೆಗಿನ ಅವಧಿಯಲ್ಲಿ 12,008 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಗಳು ಮಾರಾಟವಾಗಿದ್ದು ಅದರಲ್ಲಿ ಬಿಜೆಪಿಗೆ ಸೇರಿರುವ ಬಾಂಡ್ ಗಳ ಒಟ್ಟು ಮೌಲ್ಯ 5272 ಕೋಟಿ ರೂಪಾಯಿ. ಈ ಹಣವನ್ನು ಉದ್ಯಮಿಗಳು ಸ್ವಯಿಚ್ಚೆಯಿಂದ ನೀಡಿದರೇ? ಇಲ್ಲವೇ ಬ್ಲಾಕ್ ಮೇಲ್ ನಡೆಸಲಾಗಿತ್ತೇ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಬೇಕು.
ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಶತಸಿದ್ದ. ತನ್ನ ಸೋಲಿಗೆ ಕಾರಣ ಹೇಳಲು ಬಿಜೆಪಿ ಈಗಲೇ ಕುಂಟುನೆಪಗಳನ್ನು ಹುಡುಕುತ್ತಿದೆ. ಕಾಂಗ್ರೆಸ್ ಪಕ್ಷದ ದುಡ್ಡಿನಬಲದಿಂದಾಗಿ ನಾವು ಸೋತುಹೋದೆವು ಎಂದು ಚುನಾವಣೆಯ ಮರುದಿನ ಬಿಜೆಪಿಯಿಂದ ಹೇಳಿಕೆ ಬಂದರೆ ಯಾರೂ ಆಶ್ಚರ್ಯಪಡಬೇಕಾಗಿಲ್ಲ.
ಪಂಚರಾಜ್ಯಗಳಲ್ಲಿ ಮಾತ್ರವಲ್ಲ ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಯ ಸೋಲು ಬಹುತೇಕ ಖಾತರಿಯಾಗಿರುವ ಕಾರಣ ಬಿಜೆಪಿಗೆ ಹಿಂದಿನಂತೆ ಹಣ ಸಂಗ್ರಹವಾಗುತ್ತಿಲ್ಲ, ಕರ್ನಾಟಕದಲ್ಲಿ 40% ಕಮಿಷನ್ ನ ಬಹುದೊಡ್ಡ ಮೂಲ ಕೂಡ ನಿಂತುಹೋಗಿದೆ. ಇದಕ್ಕಾಗಿ ಶ್ರೀಮಂತ ಉದ್ಯಮಿಗಳು ಮತ್ತು ಗುತ್ತಿಗದಾರರನ್ನು ಬ್ಲಾಕ್ ಮೇಲ್ ಮಾಡಿ ಬೆದರಿಸಿ ಹಣ ವಸೂಲಿ ಮಾಡಲು ಐಡಿ-ಇಡಿ ದಾಳಿ ನಡೆಸಲಾಗುತ್ತಿದೆ.
ಗುತ್ತಿಗೆದಾರರು ಖೊಟ್ಟಿ ಖರೀದಿ ರಸೀದಿಗಳು ಮತ್ತು ಉಪಗುತ್ತಿಗೆದಾರರಿಂದ ಅಪ್ರಾಮಾಣಿಕವಾದ ಖರ್ಚು ವೆಚ್ಚದ ದಾಖಲೆಗಳ ಮೂಲಕ ಅದಾಯವನ್ನು ಕಡಿಮೆಗೊಳಿಸಿ ತೆರಿಗೆ ವಂಚನೆ ಮಾಡಿರುವುದು ದಾಳಿಯಲ್ಲಿ ಪತ್ತೆಯಾಗಿದೆ ಎಂದು ಐಟಿ ಇಲಾಖೆಯೇ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಯಾವುದೇ ರಾಜಕೀಯ ಪಕ್ಷದ ಜೊತೆಗಿನ ವ್ಯವಹಾರದ ಬಗ್ಗೆ ಉಲ್ಲೇಖವನ್ನು ಇಲಾಖೆಯೇ ಮಾಡದೆ ಇರುವಾಗ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಎದೆ ಬಡಿದುಕೊಂಡು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿರುವುದು ಯಾಕೆ? ಇವರದ್ದೇ ಸರ್ಕಾರದ ವರಮಾನ ತೆರಿಗೆ ಇಲಾಖೆಯ ಮೇಲೆಯೂ ಇವರಿಗೆ ನಂಬಿಕೆ ಇಲ್ಲವೇ?
ಕಾರ್ಪೊರೆಟ್ ಭ್ರಷ್ಟಾಚಾರದ ಮೂಲಕ ಲಕ್ಷಾಂತರ ಕೋಟಿ ರೂಪಾಯಿ ಲೂಟಿ ಹೊಡೆದು ದೇಶವನ್ನೇ ಅದಾನಿ ಕೈಗೆ ಒತ್ತೆಯಿಟ್ಟಿರುವ ಈ ಬಿಜೆಪಿಗರು ಇಂದು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ದೊಡ್ಡ ಕುಚೋದ್ಯ, ಅದಾನಿ ಎನ್ನುವ ಉದ್ಯಮಿಯ ಒಂದೊಂದು ಹಗರಣಗಳು ಲಕ್ಷ ಕೋಟಿಗಳನ್ನು ದಾಟುತ್ತಿವೆ. ಸಾವಿರ ಕೋಟಿಗಳ ಅವ್ಯವಹಾರಕ್ಕೆ ಲೆಕ್ಕವೇ ಇಲ್ಲವಾಗಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಕೇಳಿರುವ ನೂರು ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಹೇಳಲು ಬಿಜೆಪಿಯ ನಾಯಕರಿಗೆ, ವಿಶೇಷವಾಗಿ ಮೋದಿಯವರಿಗೆ ಈವರೆಗೆ ಸಾಧ್ಯವಾಗಿಲ್ಲ ಎಂದು ಆರೋಪಿಸಿದ್ದಾರೆ.
The BJP is not being able to mobilise funds like before as it is almost certain about their defeat in the upcoming five state elections as well as in the 2024 Lok Sabha elections. Moreover, its biggest source of 40% commission in Karnataka has also stopped now. Hence, ID-ED… pic.twitter.com/SjYrToBLNJ
— Siddaramaiah (@siddaramaiah) October 17, 2023
CM Siddaramaiah mocks Nalin Kateel, Bommai and BL Santosh over various scams on Twitter.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am