CM Ibrahim JDS: ನಮ್ಮದೇ ಒರಿಜಿನಲ್ ಜೆಡಿಎಸ್ ಎಂದಿದ್ದ ಸಿಎಂ ಇಬ್ರಾಹಿಂ ಪಕ್ಷದಿಂದಲೇ ಉಚ್ಚಾಟನೆ ; ಕೋರ್ ಕಮಿಟಿ ಸಭೆಯಲ್ಲಿ ತಿರುಮಂತ್ರ 

19-10-23 04:04 pm       Bangalore Correspondent   ಕರ್ನಾಟಕ

ನಮ್ಮದೇ ಒರಿಜಿನಲ್ ಜೆಡಿಎಸ್ ಎಂದು ಸ್ವಪಪಕ್ಷದ ವಿರುದ್ಧವೇ ಗುಡುಗಿದ್ದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಬೆಂಗಳೂರು, ಅ.19: ನಮ್ಮದೇ ಒರಿಜಿನಲ್ ಜೆಡಿಎಸ್ ಎಂದು ಸ್ವಪಪಕ್ಷದ ವಿರುದ್ಧವೇ ಗುಡುಗಿದ್ದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಬೆಂಗಳೂರಿನ ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. 

ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಅದರ ಅವಶ್ಯಕತೆಯೂ ಇಲ್ಲ, ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆ ಕರೆದು ಚರ್ಚೆ ನಡೆಸಿದ್ದೇವೆ, ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು. 

ನಮ್ಮದೇ ಒರಿಜಿನಲ್ ಜೆಡಿಎಸ್. ನಾನೇ ಪಕ್ಷದ ರಾಜ್ಯಾಧ್ಯಕ್ಷ. ಕುಮಾರಸ್ವಾಮಿ ಅವರನ್ನೇ ಉಚ್ಚಾಟಿಸುವ ಸಾಮರ್ಥ್ಯ ಇದೆ ಎಂದು ಸಿ.ಎಂ.ಇಬ್ರಾಹಿಂ ಗುಡುಗಿದ್ದು ಭಾರೀ ಸಂಚಲನ ಮೂಡಿಸಿತ್ತು. ಇಬ್ರಾಹಿಂ ಮಾತಿಗೆ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಸಿಡಿಮಿಡಿಗೊಂಡಿದ್ದರು.   ಇದೀಗ ಜೆಡಿಎಸ್ ಕೋರ್ ಕಮಿಟಿ ಸಭೆ ಕರೆದು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನೇ ವಜಾ ಮಾಡಿದ್ದಲ್ಲದೆ, ಪಕ್ಷದಿಂದಲೇ ಉಚ್ಚಾಟನೆ ಮಾಡಿದ್ದಾರೆ.

Janata Dal (Secular) Karnataka unit president CM Ibrahim has been removed from the post, party's national president and former prime minister HD Deve Gowda announced Thursday.