ಬ್ರೇಕಿಂಗ್ ನ್ಯೂಸ್
20-10-23 04:07 pm Bangalore Correspondent ಕರ್ನಾಟಕ
ಬೆಂಗಳೂರು, ಅ.20: ''ರಾಜ್ಯ ಸರ್ಕಾರದ ಎಟಿಎಂ ಕಲೆಕ್ಷನ್ನ ಕೇಂದ್ರ ಬಿಂದು ದೆಹಲಿಯ ಹೈಕಮಾಂಡ್. ರಾಹುಲ್ ಗಾಂಧಿ ಅವರೇ ಈ ಕಲೆಕ್ಷನ್ ಸರ್ಕಾರದ ಮುಖ್ಯಸ್ಥ, ಎಲ್ಲ ವಸೂಲಿ ಹಣದ ನಿರ್ವಹಣೆ ಮಾಡೋದು ರಾಹುಲ್ ಗಾಂಧಿ ಅವರೇ'' ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಗಂಭೀರ ಆರೋಪ ಮಾಡಿದರು. ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ ಹೆಸರಿನ ದೊಡ್ಡ ಪೋಸ್ಟರ್ ರಿಲೀಸ್ ಮಾಡಿದರು.
ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹೊಸ ಪೋಸ್ಟರ್ ರಿಲೀಸ್ ಮಾಡಿದರು. ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ ಹೆಸರಿನ ದೊಡ್ಡ ಪೋಸ್ಟರ್ ರಿಲೀಸ್ ಮಾಡಿದರು. ರಾಹುಲ್ ಗಾಂಧಿ- ವೇಣುಗೋಪಾಲ್- ಸುರ್ಜೇವಾಲಾ- ಸಿದ್ದರಾಮಯ್ಯ- ಡಿ.ಕೆ. ಶಿವಕುಮಾರ್- ಯತೀಂದ್ರ ಸಿದ್ದರಾಮಯ್ಯ- ಸಚಿವ ಬೈರತಿ ಸುರೇಶ್- ಗುತ್ತೆಗಾರರಾದ ಅಂಬಿಕಾಪತಿ- ಕೆಂಪಣ್ಣ ಸೇರಿದಂತೆ ಕೆಲ ಗುತ್ತಿಗೆದಾರರ ಫೊಟೋಗಳಿರುವ ಪೋಸ್ಟರ್ ಬಿಡುಗಡೆ ಮಾಡಿದರು.
ಪೋಸ್ಟರ್ ಬಿಡುಗಡೆ ಮಾಡಿದ ಮಾಜಿ ಸಿಎಂ:
ಮಾಜಿ ಸಿಎಂಡಿ.ವಿ. ಸದಾನಂದ ಗೌಡ ಮಾತನಾಡಿ, ''ಕಳೆದ ಐದು ತಿಂಗಳಿಂದ ಈ ಸರ್ಕಾರದ ಆಡಳಿತವೇನು ಅಂತ ಜನರಿಗೆ ಗೊತ್ತಾಗಿದೆ. ಇದು ಕಲೆಕ್ಷನ್ ಸರ್ಕಾರ ಅಂತ ಜನಕ್ಕೆ ಅರ್ಥ ಆಗಿದೆ. ಈ ಸರ್ಕಾರದ ಕಲೆಕ್ಷನ್ನ ಕೇಂದ್ರ ಬಿಂದು ದೆಹಲಿಯ ಹೈಕಮಾಂಡ್. ರಾಹುಲ್ ಗಾಂಧಿ ಅವರೆಡ ಈ ಕಲೆಕ್ಷನ್ ಸರ್ಕಾರದ ಮುಖ್ಯಸ್ಥ ಎಲ್ಲ ವಸೂಲಿ ಹಣದ ನಿರ್ವಹಣೆ ಮಾಡೋದು ರಾಹುಲ್ ಗಾಂಧಿ ಅವರೇ'' ಎಂದು ಗಂಭೀರ ಆರೋಪ ಮಾಡಿದರು.
ಕಮೀಷನ್ ಪಡೆಯುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಇದೆ. ನಾವು ಇವತ್ತು ಈ ಸರ್ಕಾರದ ಕಲೆಕ್ಷನ್ ವಂಶಾವಳಿ ಬಿಡುಗಡೆ ಮಾಡಿದ್ದೇವೆ. ರಾಹುಲ್ ಗಾಂಧಿಗೆ ಎರಡು ಕಡೆಯಿಂದ ಕಲೆಕ್ಷನ್ ಹೋಗುತ್ತಿದೆ. ಒಂದು ಸುರ್ಜೇವಾಲಾ ಕಡೆಯಿಂದ ಮತ್ತೊಂದು ವೇಣುಗೋಪಾಲ್ ಕಡೆಯಿಂದ ಕಲೆಕ್ಷನ್ ಹೋಗುತ್ತಿದೆ. ಸುರ್ಜೇವಾಲಾಗೆ ಸಿಎಂ ಮತ್ತು ಪುತ್ರ ಯತೀಂದ್ರ ಕಲೆಕ್ಷನ್ ಕಲೆಕ್ಟ್ ಮಾಡಿ ಕೊಡ್ತಾರೆ. ವೇಣುಗೋಪಾಲ್ಗೆ ಡಿಕೆ ಶಿವಕುಮಾರ್ ಕಲೆಕ್ಷನ್ ಸಂಗ್ರಹಿಸಿ ಕೊಡುತ್ತಿದ್ದಾರೆ. ಸಿಎಂ, ಡಿಸಿಎಂ ಗುಂಪುಗಳಿಗೆ ಅವರರವರ ಬಣದ ಗುತ್ತಿಗೆದಾರರು ಕಮೀಷನ್ ಸಂಗ್ರಹಿಸಿ ಕೊಡುತ್ತಿದ್ದಾರೆ. ಕೆಂಪಣ್ಣ ಸಿದ್ದರಾಮಯ್ಯ ಗುಂಪಿನಲ್ಲಿದ್ದರೆ, ಅಂಬಿಕಾಪತಿ ಡಿಕೆ ಶಿವಕುಮಾರ್ ಗುಂಪಿನಲ್ಲಿದ್ದು, ಹಣ ಸಂಗ್ರಹ ಮಾಡಿಕೊಡುತ್ತಿದ್ದಾರೆ'' ಎಂದು ಆರೋಪಿಸಿದರು.
"The centre of the state government's ATM collection is the Delhi high command. Rahul Gandhi is the head of this collection government and it is Rahul Gandhi who manages all the collections," he said. Sadananda Gowda made serious allegations. The ATM released a big poster titled 'Collection Genealogy' of the government.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 12:24 pm
Mangalore Correspondent
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
25-02-25 01:37 pm
HK News Desk
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm