ಬ್ರೇಕಿಂಗ್ ನ್ಯೂಸ್
12-11-20 11:53 am Mysore Correspondent ಕರ್ನಾಟಕ
ಮೈಸೂರು, ನವೆಂಬರ್ 12: ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಜೀಪ್ ನಲ್ಲಿದ್ದ ಎಎಸ್ಐ ಹಾಗೂ ಹೆಡ್ ಕಾನ್ಸ್ಟೇಬಲ್ ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಸಿದ್ದನಕೊಪ್ಪಲು ಗೇಟ್ ಬಳಿ ರಾತ್ರಿ ನಡೆದಿದೆ.
ಮೃತ ಪೊಲೀಸರನ್ನು ಕೆ.ಆರ್.ನಗರ ಪೊಲೀಸ್ ಠಾಣೆಯ ಎಎಸ್ಐ ಮೂರ್ತಿ ಹಾಗೂ ಹೆಡ್ ಕಾನ್ಸಟೇಬಲ್ ಶಾಂತಕುಮಾರ್ ಎಂದು ಗುರುತಿಸಲಾಗಿದೆ.

ಪೊಲೀಸ್ ಇಲಾಖೆಯ ಜೀಪಿನಲ್ಲಿ ನೈಟ್ ರೌಂಡ್ ಕರ್ತವ್ಯ ನಿರ್ವಹಿಸಿಕೊಂಡು, ಸಾಲಿಗ್ರಾಮ ಪೊಲೀಸ್ ಠಾಣೆಯ ಕಡೆಯಿಂದ ಕೆ.ಆರ್.ನಗರದ ಕಡೆಗೆ ಬರುತ್ತಿರುವಾಗ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಸಿದ್ದನಕೊಪ್ಪಲು ಗೇಟ್ ಸಮೀಪ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ಕೆ.ಆರ್.ನಗರ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.
ಶವಾಗಾರ ಮತ್ತು ಘಟನಾ ಸ್ಥಳಕ್ಕೆ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಸೌತ್ ಡಿವೈಎಸ್ಪಿ ಸುಮಿತ್ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Police Inspector and Constable we're found dead after the jeep lost control and hit the tree in Mysore.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm