ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟದ ಸುದ್ದಿ ಸುಳ್ಳು : ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

06-08-20 09:36 am       Headline Karnataka News Network   ಕರ್ನಾಟಕ

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ. ನಾಳೆ SSLC ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ.

ಬೆಂಗಳೂರು, ಆ. 06: ಬಹುದೊಡ್ಡ ಸವಾಲನ್ನು ಎಳೆದುಕೊಂಡು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮಾಡಿ ಮುಗಿಸಿದ್ದಾರೆ. ಕೊರೊನಾ ವೈರಸ್ ಹರಡುವ ಭಯದಲ್ಲಿ ಸುರಕ್ಷಿತವಾಗಿ ಪರೀಕ್ಷೆಗಳು ಮುಗಿದಿದ್ದವು. ಜೊತೆಗೆ ಪರೀಕ್ಷಾ ಮೌಲ್ಯಮಾಪನ ಕೂಡ ಶುರುವಾಗಿತ್ತು. ಇದೀಗ ನಾಳೆ ಎಸ್‌ಎಸ್‌ಎಲ್ ಪರೀಕ್ಷಾ ಫಲಿತಾಂಶ ಬರಲಿದೆ ಎಂಬ ಸುದ್ದಿ ಬಂದಿದೆ.

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಾರಿ ಕೊರೊನಾ ವೈರಸ್‌ನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿತ್ತು. ಇನ್ನೇನು 10ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆ ಆರಂಭವಾಗಬೇಕು ಎಂಬ ಸಮಯದಲ್ಲಿ ಕೋವಿಡ್-19 ದಿಢೀರ್ ಹಾವಳಿ ಶುರುಮಾಡಿತ್ತು. ಮುಂದುವರೆದ ಅಮೆರಿಕ, ಇಟಲಿ, ಚೀನಾ ಹಾಗೂ ಇಂಗ್ಲಂಡ್ ನಂತಹ ದೇಶಗಳೇ ಕೊರೊನಾ ವೈರಸ್ ಹಾವಳಿಗೆ ತತ್ತರಿಸಿ ಹೋಗಿದ್ದವು. ಆತಂಕದ ಮಧ್ಯೆ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಮುಗಿಸಿದ್ದಾರೆ.

ರಾಜ್ಯಾದ್ಯಂತ ಒಟ್ಟು 7.5 ಲಕ್ಷ ವಿದ್ಯಾಥಿಗಳು ಪರೀಕ್ಷೆಯನ್ನು ಬರೆದಿದ್ದರು. ಪರೀಕ್ಷಾ ಸಂದರ್ಭದಲ್ಲಿ 33 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿತ್ತು. ಹೀಗಾಗಿ ಅವರಿಗೆ ಪರೀಕ್ಷೆಯನ್ನು ನಿರಾಕರಿಸಿ ಮುಂದಿನ ಪೂರಕ ಪರೀಕ್ಷೆಗಳಲ್ಲಿ ಅವಕಾಶವನ್ನ ಕಲ್ಪಿಸಲಾಗುತ್ತಿದೆ.

ನಾಳೆ SSLC ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ:

ಇದೀಗ ನಾಳೆ (ಆ. 07) ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿ ಬಂದಿದೆ. ಅದಕ್ಕೆ ಸ್ಪಷ್ಟನೆ ಕೊಟ್ಟಿರುವ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುತ್ತಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ನಾಳೆ SSLC ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಫಲಿತಾಂಶ ಪ್ರಕಟ ಮಾಡಲು ಇನ್ನೂ ದಿನಾಂಕ ನಿಶ್ಚಯವಾಗಿಲ್ಲ. ಅಧಿಕೃತವಾಗಿ ಶಿಕ್ಷಣ ಇಲಾಖೆ ಸಮಗ್ರ ಮಾಹಿತಿಯನ್ನು ಕೊಡಲಿದೆ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟದ ಸುದ್ದಿ ಸುಳ್ಳು ಎಂದಿದ್ದಾರೆ.