Bigg Boss kannada, Varthur Santhosh arrest, Judicial Custody: ಹುಲಿ ಉಗುರಿನ ಚೈನ್ ಎಡವಟ್ಟು ;  ವರ್ತೂರು ಸಂತೋಷ್ ಗೆ 14 ದಿನ ನ್ಯಾಯಾಂಗ ಬಂಧನ, ಬಿಗ್ ಬಾಸ್ ಮನೆಯಿಂದ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ !

23-10-23 07:05 pm       Bangalore Correspondent   ಕರ್ನಾಟಕ

ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ.6 ರವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಂಗಳೂರು, ಅ 23: ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ.6 ರವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು 2ನೇ ಎಸಿಜೆಎಂ ಕೋರ್ಟ್ ನ ಮ್ಯಾಜಿಸ್ಟ್ರೇಟ್ ನಿವಾಸಕ್ಕೆ ಇಂದು ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಎಸಿಜೆಎಂ ನ್ಯಾಯಧೀಶರು ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹಬ್ಬದ ಹಿನ್ನೆಲೆ ಎರಡು ದಿನ ಕೋರ್ಟ್ ರಜೆ ಇದ್ದ ಕಾರಣ ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆದೊಯ್ದು ಸಂತೋಷ್‌ರನ್ನು ಹಾಜರು ಪಡಿಸಲಾಯಿತು. 

ವರ್ತೂರು ಸಂತೋಷ್ ಗೆ ನ.6 ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಪರಪ್ಪನ ಅಗ್ರಹಾರಕ್ಕೆ ರವಾನೆ ಮಾಡಲಾಗಿದೆ.

In the latest development surrounding Varthur Santhosh's arrest case, the Bigg Boss Kannada 10 contestant has been sent to 14 days of judicial custody. This decision came after Varthur Santhosh was produced before the Additional Chief Judicial Magistrate (ACJM) court in Koramangala, Bengaluru