ಬ್ರೇಕಿಂಗ್ ನ್ಯೂಸ್
25-10-23 06:01 pm Bangalore Correspondent ಕರ್ನಾಟಕ
ಬೆಂಗಳೂರು, ಅ 25: ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಂತಹದ್ದೇ ಪೆಂಡೆಂಟ್ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವಂತೆ ಹಲವರು ಒತ್ತಾಯಿಸಿದ್ದಾರೆ ಮತ್ತು ಈ ಸಂಬಂಧ ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ದೂರು ಸಹ ದಾಖಲಾಗಿದೆ.
ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ತನಿಖೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದು, ತನಿಖೆಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಈಗಾಗಲೇ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದ ಧರ್ಮಗುರು ವಿನಯ್ ಗುರೂಜಿ ವಿರುದ್ಧ ಹುಲಿ ಚರ್ಮದ ಮೇಲೆ ಕುಳಿತ ಆರೋಪ ಕೇಳಿಬಂದಿದ್ದು, ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ.
ಇಬ್ಬರ ವಿರುದ್ಧ ನಮಗೆ ಯಾವುದೇ ದೂರು ಬಂದಿಲ್ಲವಾದರೂ, ಅವರು ವನ್ಯಜೀವಿ ದೇಹದ ಭಾಗಗಳನ್ನು ಹೊಂದಿದ್ದಾರೆ ಎಂಬ ಮಾಹಿತಿ ಇದೆ. ಸಂಬಂಧಪಟ್ಟ ಅರಣ್ಯ ಅಧಿಕಾರಿಗಳು ತಮ್ಮಲ್ಲಿರುವ ಮಾಹಿತಿಯ ಆಧಾರದ ಮೇಲೆ ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಮುಖ್ಯ ವನ್ಯಜೀವಿ ವಾರ್ಡನ್‌ನಿಂದ ಪೂರ್ವಾನುಮತಿ ಪಡೆಯದೆ ಹುಲಿ ಚರ್ಮ ಅಥವಾ ಉಗುರು ಹೊಂದಿರುವುದು ಕಂಡುಬಂದರೆ, ಕಾನೂನು ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ಲಾಸ್ಟಿಕ್‌ನಿಂದ ತಯಾರಿಸಿದ ವಸ್ತುಗಳು ಮಾರುಕಟ್ಟೆಯಲ್ಲಿ ಲಭ್ಯವಿರುವುದರಿಂದ ನಟ 'ಹುಲಿ ಉಗುರಿನ' ಪೆಂಡೆಂಟ್ ಧರಿಸಿದ್ದಾರೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಖಚಿತವಾಗಿ ಹೇಳಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
"ಸಂತೋಷ್ ಕುಮಾರ್ ಪ್ರಕರಣದಲ್ಲಿ ನಾವು ಹೇಗೆ ಮಾಡಿದ್ದೇವೆಯೋ ಹಾಗೆಯೇ ಅವರಲ್ಲಿನ ಪೆಂಡೆಂಟ್ ಅನ್ನು ವಿಧಿವಿಜ್ಞಾನ ಪರೀಕ್ಷೆಯ ಮೂಲಕ ಪರಿಶೀಲಿಸಬೇಕು ಮತ್ತು ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು" ಎಂದು ಅಧಿಕಾರಿ ಹೇಳಿದ್ದಾರೆ.
ಸಂತೋಷ್ ಕುಮಾರ್ ಪ್ರಕರಣದ ಕುರಿತು ತನಿಖೆ ಮುಗಿದ ನಂತರ ಮುಂದಿನ ಕ್ರಮಕ್ಕಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಜಗ್ಗೇಶ್ ವಿರುದ್ಧ MLC ಪಿ.ಆರ್ ರಮೇಶ್ ದೂರು ;
ಸ್ಯಾಂಡಲ್‌ವುಡ್ ನಟ, ನವರಸ ನಾಯಕ ಬಿಜೆಪಿಯ ರಾಜ್ಯಸಭಾ ಸದಸ್ಯ ಜಗ್ಗೇಶ್ ಸಹ ತಮ್ಮ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ ಹಾಕಿಕೊಂಡಿದ್ದಾರೆ. ಹಾಗೇ ಧರಿಸಿದ ಅವರ ಸಾಕಷ್ಟು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ನಾನು ಧರಿಸಿದ್ದು ಹುಲಿಯ ಉಗುರೇ ಎಂದು ಈ ಹಿಂದೆಯೂ ಜಗ್ಗೇಶ್ ಹೇಳಿಕೊಂಡಿದ್ದಾರೆ. ಅದರ ವಿಡಿಯೋ ಸಹ ಅರಣ್ಯಾಧಿಕಾರಿಗಳ ಖಯ ತಲುಪಿದೆ. ಇತ್ತ ಇದೇ ಹುಲಿ ಉಗುರಿನ ಬಗ್ಗೆ ಜಗ್ಗೇಶ್ ವಿರುದ್ಧ MLC ಪಿ.ಆರ್ ರಮೇಶ್ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳು ಸಾಧ್ಯತೆಯಿದೆ.
ಈಗಾಗಲೇ ಜಗ್ಗೇಶ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಆ ಪ್ರಕರಣವನ್ನು ನಾವು ಪರಿಗಣನೆಗೆ ತೆಗೆದುಕೊಳ್ಳುತ್ತೇವೆ. ನಟ ದರ್ಶನ್ ವಿರುದ್ಧವೂ ಈಗಾಗಲೇ ದೂರು ಬಂದಿದೆ. ಅವರ ವಿರುದ್ಧವೂ ನಾವು ಕ್ರಮಕ್ಕೆ ಮುಂದಾಗುವ ಅವಕಾಶವಿದೆ. ಅವರು ಧರಿಸಿದ ಉಗುರಿನ ಬಗ್ಗೆ ಮೊದಲು ಅದರ ನೈಜತೆ ಖಚಿತಪಡಿಸಿಕೊಳ್ಳಬೇಕಿದೆ. ಇದೀಗ ಹಬ್ಬದ ನಿಮಿತ್ತ ಎರಡು ದಿನ ರಜೆ ಇದ್ದ ಹಿನ್ನೆಲೆಯಲ್ಲಿ ಸಾಧ್ಯವಾಗಿರಲಿಲ್ಲ. ಇನ್ನು ಮುಂದೆ ಅದು ಚುರುಕು ಪಡೆದುಕೊಳ್ಳಲಿದೆ ಎಂದು ವನ್ಯಜೀವಿ ಅರಣಾಧಿಕಾರಿ ರವೀಂದ್ರಕುಮಾರ್ TV9ಗೆ ತಿಳಿಸಿದ್ದಾರೆ.
ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಜೆಡಿಎಸ್ ಯುವ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು, ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.
ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ನಿಖಿಲ್ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ವಿನಂತಿ ಮಾಡಿದ್ದಾರೆ.
ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ ಎಂದು ಟ್ವೀಟ್ ಮಾಡಿದ್ದಾರೆ.
Tiger claw pendant Actor Darshan, Jaggesh, Rockline Venkatesh and Nikhil Kumaraswamy in big trouble were found wearing a locket made of tiger claw. Forest Department officials recently arrested Kannada Bigg Boss contestant Varthur Santhosh for wearing a locket made of tiger claw. Forest Department officer Ravindra Kumar said that four teams have been formed to issue notices and investigate the complaints.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am