Tiger clave, Actors: ಹುಲಿ ಉಗುರಿಗಾಗಿ ಹುಡುಕಾಟ ; ನಟ ಜಗ್ಗೇಶ್‌, ರಾಕ್‌ಲೈನ್‌ ವೆಂಕಟೇಶ್‌, ವಿನಯ್ ಗುರೂಜಿ, ದರ್ಶನ್‌ ಮನೆಯಲ್ಲಿ ಅರಣ್ಯಾಧಿಕಾರಿಗಳ ಶೋಧ

25-10-23 09:34 pm       Bangalore Correspondent   ಕರ್ನಾಟಕ

ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗುತ್ತಿದ್ದಂತೆ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ಕಾರಣ ದರ್ಶನ್, ರಾಕ್‌ಲೈನ್ ವೆಂಕಟೇಶ್, ಜಗ್ಗೇಶ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಈ ಹಿಂದೆ ಹುಲಿ ಉಗುರು ಧರಿಸಿ ಫೋಟೋಗಳಿಗೆ ಪೋಸ್ ಕೊಟ್ಟಿರುವುದು. 

ಬೆಂಗಳೂರು, ಅ 25: ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗುತ್ತಿದ್ದಂತೆ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ಕಾರಣ ದರ್ಶನ್, ರಾಕ್‌ಲೈನ್ ವೆಂಕಟೇಶ್, ಜಗ್ಗೇಶ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಈ ಹಿಂದೆ ಹುಲಿ ಉಗುರು ಧರಿಸಿ ಫೋಟೋಗಳಿಗೆ ಪೋಸ್ ಕೊಟ್ಟಿರುವುದು. 

ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಲವು ತಂಡಗಳನ್ನು ರಚಿಸಿ ಸೆಲೆಬ್ರಿಟಿಗಳ ಮನೆ ಮೇಲೆ ಶೋಧ ನಡೆಸುತ್ತಿದ್ದಾರೆ. ಅದರಂತೆ ಆರ್ ಆರ್ ನಗರದಲ್ಲಿರುವ ನಟ ದರ್ಶನ್ ಮನೆಯಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

Tiger -claw- case- Search - residence - actor –Darshan-Jaggesh-rock line  Venkatesh. Archives - Just Kannada | Online Kannada News | Breaking Kannada  News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಇನ್ನು ಮಲ್ಲೇಶ್ವರಂನಲ್ಲಿರುವ ನಟ ಜಗ್ಗೇಶ್, ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ನಿವಾಸದಲ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಇದೇ ವೇಳೆ, ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿರುವ ಶನೈಶ್ವರ ದೇವಸ್ಥಾನದ ಧರ್ಮದರ್ಶಿ ಧನಂಜಯ ಗುರೂಜಿ ನಿವಾಸದ ಮೇಲೂ ಅಧಿಕಾರಿಗಳು ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ. ಮತ್ತೊಂದೆಡೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪದ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದ ಫೋಟೋ ವೈರಲ್ ಆಗಿತ್ತು. ಆ ಹಿನ್ನೆಲೆಯಲ್ಲಿ ಅವರ ಆಶ್ರಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು.

Forest officers search houses of Actor Darshan, Jaggesh, Vinay guruji, rockline venkatesh over tiger claw pendant.