ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಝೆಡ್ ಕೆಟಗರಿ ಭದ್ರತೆ ; ಕೇಂದ್ರ ಗೃಹ ಸಚಿವಾಲಯ ಆದೇಶ 

26-10-23 04:37 pm       Bangalore Correspondent   ಕರ್ನಾಟಕ

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಸಚಿವಾಲಯ ಝೆಡ್ ಕೆಟಗರಿಯ ಕೇಂದ್ರ ಮೀಸಲು ಪೊಲೀಸ್ ಪಡೆಯ ಭದ್ರತೆಯನ್ನು ನೀಡಿದೆ. 

ಬೆಂಗಳೂರು, ಅ.26: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಸಚಿವಾಲಯ ಝೆಡ್ ಕೆಟಗರಿಯ ಕೇಂದ್ರ ಮೀಸಲು ಪೊಲೀಸ್ ಪಡೆಯ ಭದ್ರತೆಯನ್ನು ನೀಡಿದೆ. 

ಯಡಿಯೂರಪ್ಪ ಅವರಿಗೆ ಕರ್ನಾಟಕದಲ್ಲಿ ಮಾತ್ರ ಭದ್ರತೆ ಒದಗಿಸಲಾಗುವುದು. ಕೇಂದ್ರ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಶೀಘ್ರದಲ್ಲೇ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ಸಚಿವಾಲಯದ ಪ್ರಕಟಣೆ ಹೇಳಿದೆ. ಯಡಿಯೂರಪ್ಪ ಅವರಿಗೆ ಬೆದರಿಕೆ ಇರುವ ಬಗ್ಗೆ ವರದಿಯನ್ನು ಗುಪ್ತಚರ ಇಲಾಖೆಯಿಂದ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ಹಂಚಿಕೊಂಡಿದೆ ಎನ್ನುವ ಮಾಹಿತಿಯಿದೆ. 

ಮೂಲಗಳ ಪ್ರಕಾರ, ಕರ್ನಾಟಕದ ಮೂಲಭೂತವಾದಿ ಗುಂಪುಗಳಿಂದ ಯಡಿಯೂರಪ್ಪ ಅವರಿಗೆ ಅಪಾಯವಿದೆ. ಸಿಆರ್‌ಪಿಎಫ್ ಕಮಾಂಡೋಗಳು ಹಿರಿಯ ಬಿಜೆಪಿ ನಾಯಕನಿಗೆ ಕರ್ನಾಟಕದಲ್ಲಿ ಇರುವಾಗ ಮತ್ತು ರಾಜ್ಯಾದ್ಯಂತ ಅವರು ಸಂಚರಿಸುವ ಸಮಯದಲ್ಲಿ ಭದ್ರತೆಯನ್ನು ಒದಗಿಸಲಿದ್ದಾರೆ.

ಇತ್ತೀಚೆಗೆ ಯಡಿಯೂರಪ್ಪ ಅವರು ಇತರ ರಾಜ್ಯ ಬಿಜೆಪಿ ನಾಯಕರೊಂದಿಗೆ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಘೋಷಿಸಿದ್ದರು. 2024ರ ಲೋಕಸಭೆ ಚುನಾವಣೆಗೆ ಪಕ್ಷ ಬಲಪಡಿಸಲು ಸಂಚಾರ ಕೈಗೊಳ್ಳಲಿದ್ದಾರೆ ಎನ್ನಲಾಗಿತ್ತು. ಇದರ ನಡುವೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಬಗ್ಗೆ ಗೊಂದಲ ಎದ್ದಿದೆ. ವಿಜಯೇಂದ್ರ ಬದಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸಲಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಸಿಡಿಮಿಡಿಗೊಂಡಿದ್ದಾರೆ ಎನ್ನಲಾಗುತ್ತಿರುವ ಬಿಎಸ್ ಯಡಿಯೂರಪ್ಪ ಅವರಿಗೆ ಝೆಡ್ ಕೆಟಗರಿ ಭದ್ರತೆಯನ್ನು ನೀಡಲಾಗಿದೆ.

The Ministry of Home Affairs (MHA) has accorded Z category Central Reserve Police Force (CRPF) security cover to BJP leader and former chief minister of Karnataka BS Yediyurappa. Yediyurappa will be provided the security cover only in Karnataka and the CRPF personnel will soon take charge of the new responsibility.