ಚಿಕ್ಕಬಳ್ಳಾಪುರ ; ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ, ಆಂಧ್ರದಿಂದ ಬೆಂಗಳೂರಿಗೆ ಬರುತ್ತಿದ್ದ 13 ಜನ ಸಾವು 

26-10-23 10:06 pm       HK News Desk   ಕರ್ನಾಟಕ

ರಸ್ತೆ ಬದಿ ನಿಂತಿದ್ದ ಕ್ಯಾಂಟರ್ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಹದಿಮೂರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರು. ಪರಿಹಾರ ಘೋಷಿಸಿದ್ದಾರೆ. 

ಚಿಕ್ಕಬಳ್ಳಾಪುರ, ಅ.26: ರಸ್ತೆ ಬದಿ ನಿಂತಿದ್ದ ಕ್ಯಾಂಟರ್ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಹದಿಮೂರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರು. ಪರಿಹಾರ ಘೋಷಿಸಿದ್ದಾರೆ. 

ಚಿಕ್ಕಬಳ್ಳಾಪುರ ನಗರದ ಮೂಲಕ ಹಾದು ಹೋಗುವ ರಾಷ್ಟೀಯ ಹೆದ್ದಾರಿ 44 ರಲ್ಲಿ ಘಟನೆ ನಡೆದಿದೆ. ಬೆಳಗ್ಗೆ ಮಂಜು ಕವಿದಿದ್ದ ಕಾರಣದಿಂದ ಟಾಟಾ ಸುಮೋ ಚಾಲಕ ಎದುರಿನಲ್ಲಿ ನಿಂತಿದ್ದ ಲಾರಿ ಕಾಣಿಸದೆ ವೇಗವಾಗಿ ಡಿಕ್ಕಿ ಹೊಡೆಸಿದ್ದಾನೆ. 

ಘಟನೆಯಲ್ಲಿ ಮೂವರು ಮಹಿಳೆಯರು, ಒಬ್ಬ ಮಗು, ಏಳು ಮಂದಿ ಪುರುಷರು ಸೇರಿ ಹದಿಮೂರು ಮಂದಿ ಸಾವನ್ನಪ್ಪಿದ್ದಾರೆ, ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. ಮೃತರು ಆಂಧ್ರಪ್ರದೇಶದ ಗೊರೆಂಟ್ಲಾ ಜಿಲ್ಲೆಯ ನಿವಾಸಿಗಳಾಗಿದ್ದು, ಬೆಂಗಳೂರಿನ ಹೊಂಗಸಂದ್ರಲ್ಲಿ ಕೆಲಸದ ನಿಮಿತ್ತ ಪ್ರಯಾಣ ಮಾಡುತ್ತಿದ್ದವರೆಂದು ತಿಳಿದು ಬಂದಿದೆ.

Thirteen people lost their lives and one got badly injured when the SUV they were riding in collided into a stalled tanker in Chikkaballapur on Thursday morning. The incident happened outside Chikkaballapur, the town housing the district headquarters.