ಬ್ರೇಕಿಂಗ್ ನ್ಯೂಸ್
28-10-23 12:38 pm Bangalore Correspondent ಕರ್ನಾಟಕ
ಬೆಂಗಳೂರು, ಅ 28: ಯಾವುದೇ ಕಾಂಗ್ರೆಸ್ ಶಾಸಕರು ಪಕ್ಷದ ಆಂತರಿಕ ವಿಚಾರಗಳ ಕುರಿತು ಹೇಳಿಕೆ ನೀಡಬಾರದು. ಇದು ಲಾಸ್ಟ್ ವಾರ್ನಿಂಗ್ ಎಂದು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ನ ಮೂವರು ಶಾಸಕರಿಗೆ 50 ಕೋಟಿ ರೂಪಾಯಿ ಮತ್ತು ಮಂತ್ರಿ ಸ್ಥಾನದ ಆಫರ್ ನೀಡಲಾಗಿದೆ ಎಂಬ ವಿಚಾರದ ಕುರಿತು ಸದಾಶಿವನಗರದ ನಿವಾಸದ ಬಳಿ ಪ್ರತಿಕ್ರಿಯಿಸಿದ ಡಿಕೆಶಿ, ಭಾರೀ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ದೊಡ್ಡವರು ಇದರಲ್ಲಿ ಪ್ರಯತ್ನ ಮಾಡ್ತಿದ್ದಾರೆ. ಬಹಳ ಪ್ರಯತ್ನ ಮಾಡ್ತಿದ್ದಾರೆ. ಆದರೆ, ಯಾವುದೂ ಫಲ ಕೊಡಲ್ಲ ಎಂದಿದ್ದಾರೆ.
ಪಕ್ಷದ ಆಂತರಿಕ ವಿಚಾರಗಳ ಕುರಿತು ಯಾವುದೇ ಶಾಸಕರು ಹೇಳಿಕೆ ನೀಡಬಾರದು ಎಂದು ಈ ಹಿಂದೆ ಡಿಕೆಶಿ ಎಚ್ಚರಿಕೆ ಕೊಟ್ಟಿದ್ದರು. ಆದರೆ, ಶಾಸಕರು ಅಲ್ಲಲ್ಲಿ ವಿವಿಧ ಹೇಳಿಕೆಗಳನ್ನು ಕೊಡ್ತಿದ್ದಾರೆ. ಈ ಹಿನ್ನೆಲೆ ಡಿಕೆಶಿ ಇಂದು ಮತ್ತೊಮ್ಮೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
‘ನಾನು ನಮ್ಮ ಪಕ್ಷದ ಶಾಸಕರಲ್ಲಿ ಮತ್ತೊಮ್ಮೆ ಮನವಿ ಮಾಡುತ್ತೇನೆ, ಯಾರೂ ಕೂಡ ಪಕ್ಷದ ವಿಚಾರಗಳ ಕುರಿತು ಹೇಳಿಕೆ ಕೊಡಬೇಡಿ. ಇದನ್ನು ಮೀರಿ ಹೇಳಿಕೆ ಕೊಟ್ಟರೆ ನೋಟಿಸ್ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಆಪರೇಷನ್ ಹಸ್ತದ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಕಮಲ ತೀವ್ರಗೊಂಡಿದೆ. ಆಪರೇಷನ್ ಕಮಲದ ಹಿಂದಿನ ಗ್ಯಾಂಗ್ ಮತ್ತೆ ಸಕ್ರಿಯವಾಗಿದೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಆರೋಪ ಮಾಡಿದ್ದರು. ನಿಮ್ಮನ್ನು ಅಮಿತ್ ಷಾ ಬಳಿ ಭೇಟಿ ಮಾಡಿಸ್ತೇವೆ. ಚಾರ್ಟರ್ ಫ್ಲೈಟ್ ಬುಕ್ ಮಾಡಿದ್ದೇವೆ ಎಂದೆಲ್ಲಾ ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದರು.
ಎನ್. ಆರ್ ಸಂತೋಷ್ 10 ದಿನದ ಹಿಂದೆ ನನ್ನನ್ನು ಭೇಟಿ ಮಾಡಿದ್ದರು. ನಮ್ಮ ಶಾಸಕರನ್ನ ಗೋಲ್ಡ್ ಪಿಂಚ್ ಹೊಟೇಲ್ ನಲ್ಲಿ ಭೇಟಿ ಮಾಡಿದ್ರು. ಮತ್ತೊಬ್ಬರು ಮಾಜಿ ಎಂಎಲ್ ಸಿ, ಇನ್ನೊಬ್ಬರು ಬೆಳಗಾವಿ ನಾಯಕರು ಇದ್ದಾರೆ. ಸಮಯ ಬರಲಿ ಎಲ್ಲವನ್ನೂ ಬಿಚ್ಚಿಡ್ತೇವೆ ಎಂದಿದ್ದರು.
Conspiracy to topple Karnataka Congress govt won’t work by BJP says DyCM Shivakumar. Karnataka Congress MLA Ganiga Ravi on Friday alleged that attempts are on to destabilise the Congress government in the state and his colleagues are being offered Rs 50 crore and a minister portfolio.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm