ಬ್ರೇಕಿಂಗ್ ನ್ಯೂಸ್
28-10-23 08:15 pm Bangalore Correspondent ಕರ್ನಾಟಕ
ಬೆಂಗಳೂರು, ಅ.28: ಸಿಎಂ ಸಿದ್ದರಾಮಯ್ಯ ಶುಕ್ರವಾರ ರಾತ್ರಿ ತನ್ನ ಆಪ್ತ ಸಚಿವರ ಜೊತೆ ಡಿನ್ನರ್ ಮೀಟಿಂಗ್ ನಡೆಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪರಮೇಶ್ವರ್ ನಿವಾಸದಲ್ಲಿ ಔತಣ ಕೂಟದ ನೆಪದಲ್ಲಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರಮುಖ ನಾಯಕರು ಚರ್ಚೆ ನಡೆಸಿದ್ದಾರೆ. ಆದರೆ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಿಕೆಶಿ ಅವರನ್ನು ಹೊರಗಿಟ್ಟು ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಅಹಿಂದ ವರ್ಗದ ನಾಯಕ ಸಿದ್ದರಾಮಯ್ಯ ಬಳಿಕ ಮುಂದಿನ ನಾಯಕ ಯಾರು ಎನ್ನುವ ಚರ್ಚೆ ಹುಟ್ಟಿರುವಾಗಲೇ ಸಿಎಂ ಸ್ಥಾನದ ಬದಲಾವಣೆ ವಿಚಾರವೂ ಚರ್ಚೆಗೀಡಾಗಿತ್ತು. ಇಂಥ ಸಂದರ್ಭದಲ್ಲಿಯೇ ಅ.27ರ ಶುಕ್ರವಾರ ರಾತ್ರಿ ಸಿಎಂ ಸಿದ್ದರಾಮಯ್ಯ ತನ್ನ ಆಪ್ತ ಸಚಿವರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಸದಾಶಿವನಗರದ ಗೃಹ ಸಚಿವ ಡಾ.ಜಿ ಪರಮೇಶ್ವರ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಹೆಚ್.ಸಿ ಮಹದೇವಪ್ಪ, ಸತೀಶ್ ಜಾರಕಿಹೊಳಿ ಪಾಲ್ಗೊಂಡಿದ್ದರು. ಮೂರು ತಾಸಿಗೂ ಹೆಚ್ಚು ಕಾಲ ಪರಂ ನಿವಾಸದಲ್ಲಿ ಬಿಸಿ ಬಿಸಿ ಚರ್ಚೆ ನಡೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಹೊರಗಿಟ್ಟು ಕೈ ನಾಯಕರು ಔತಣಕೂಟ ನೆಪದಲ್ಲಿ ರಹಸ್ಯ ಚರ್ಚೆ ನಡೆಸಿದ್ದಾರೆ. ಡಿಕೆಶಿ ಮನೆ ಪಕ್ಕದಲ್ಲಿಯೇ ಇದ್ದರೂ ಅವರಿಗೆ ಆಹ್ವಾನ ನೀಡದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಈ ಮೂಲಕ ಅಧಿಕಾರ ಹಂಚಿಕೆಯ 50-50 ಫಾರ್ಮುಲಾ ಬಗ್ಗೆ ಮಾತನಾಡುತ್ತಿರುವ ಡಿ.ಕೆ. ಶಿವಕುಮಾರ್ ಆಪ್ತ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ ಎನ್ನಲಾಗುತ್ತಿದೆ.
ಸಭೆಯಲ್ಲಿ ಪ್ರಸ್ತುತ ರಾಜಕಾರಣ, ಪಕ್ಷದೊಳಗಿನ ಭಿನ್ನಾಭಿಪ್ರಾಯ, ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ. ಇದಲ್ಲದೆ, ಬೆಳಗಾವಿ ರಾಜಕೀಯಕ್ಕೆ ಕೈ ಹಾಕಿದ್ದಕ್ಕೆ ಡಿಕೆಶಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಮುನಿಸಿಕೊಂಡಿದ್ದಾರೆ. ಹೀಗಾಗಿ ಅವರನ್ನು ಸಮಾಧಾನಪಡಿಸಲು ಔತಣಕೂಟ ಏರ್ಪಡಿಸಲಾಗಿತ್ತು ಎನ್ನಲಾಗುತ್ತಿದೆ. ಮತ್ತೊಂದೆಡೆ 50-50 ಫಾರ್ಮುಲಾ ಎನ್ನುತ್ತಿರುವ ಡಿಕೆಶಿ ಆಪ್ತ ಶಾಸಕರ ಹೇಳಿಕೆಗಳಿಗೆ ಸಭೆ ಮೂಲಕ ಸಿಎಂ ಚೆಕ್‌ಮೇಟ್ ಕೊಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಸಿಎಂ ಬದಲಾವಣೆ ಮಾತು ಬಂದಲ್ಲಿ ಸಿದ್ದರಾಮಯ್ಯ ಮತ್ತು ಇತರೇ ಬೆಂಬಲಿಗ ಶಾಸಕರು ದಲಿತ ದಾಳ ಬೀಸುವ ಬಗ್ಗೆಯೂ ಚರ್ಚಿಸಿರುವ ಸಾಧ್ಯತೆ ಬಗ್ಗೆ ವಿಶ್ಲೇಷಣೆ ನಡೆದಿದೆ.
ಸಭೆಯ ಬಳಿಕ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಊಟಕ್ಕೊಸ್ಕರ ಸೇರಿದ್ವಿ, ಸಿಎಂ ಅವರು ನಮ್ಮ ಮನೆಗೆ ಬಂದಿದ್ದರು ನಾನು ಸತೀಶ್, ಮಹಾದೇವಪ್ಪನವರು ಊಟಕ್ಕೆ ಸೇರಿದ್ದೆವು. ಊಟ ಬಿಟ್ಟು ಬೇರೆ ಏನು ಚರ್ಚೆಯಾಗಿಲ್ಲ. ರಾಜಕೀಯವಾಗಿ ಯಾವುದೇ ಚರ್ಚೆಯಾಗಿಲ್ಲ ಎಂದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಲ್ಲಿ ಕೇಳಿದಾಗಲೂ ಅದೇ ಮಾತು ಹೇಳಿದ್ದಾರೆ. ಊಟಕ್ಕಾಗಿ ಸೇರಿದ್ದೆವು. ಅಲ್ಲಿ ಯಾವುದೇ ರಾಜಕೀಯ ಚರ್ಚೆ ಆಗಿಲ್ಲ ಎಂದಿದ್ದಾರೆ.
Chief Minister Siddaramaiah and his loyalist Ministers attending a dinner party at Home Minister G. Parameshwara’s residence in Bengaluru on Friday has stirred a controversy with sources claiming that Deputy Chief Minister D.K. Shivakumar was “deliberately kept out” of the meeting.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am