ಬ್ರೇಕಿಂಗ್ ನ್ಯೂಸ್
01-11-23 05:09 pm Bangalore Correspondent ಕರ್ನಾಟಕ
ಬೆಂಗಳೂರು, ನ 01: ಬೊಮ್ಮನಹಳ್ಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಪ್ರತ್ಯಕ್ಷವಾಗುತ್ತ ಜನರಲ್ಲಿ ಭೀತಿ ಮೂಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬಂದಿ ಯಶಸ್ವಿಯಾಗಿದ್ದಾರೆ ಆದ್ರೆ ಸೆರೆ ಸಿಕ್ಕ ಚಿರತೆ ಇದೀಗ ಮೃತಪಟ್ಟಿದೆ ಎನ್ನಲಾಗುತ್ತಿದೆ.
ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಅಧಿಕಾರಿಗಳು ಗುಂಡಿನ ದಾಳಿ ನಡೆಸಿದ್ದರು. ಈ ಹಿನ್ನೆಲೆ ಚಿರತೆ ಸಾವನ್ನಪ್ಪಿದೆ ಎಂದು ಶಂಕಿಸಲಾಗಿದೆ.
ಚಿರತೆಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯಲಾಗಿತ್ತು. ಅರವಳಿಕೆ ಮದ್ದು ನೀಡಿದ ನಂತರವೂ ಅರೆಪ್ರಜ್ಞಾವಸ್ಥೆಯಲ್ಲಿದ್ದ ಚಿರತೆ ಪಶುವೈದ್ಯರ ಮೇಲೂ ದಾಳಿ ನಡೆಸಿತ್ತು. ಕೊನೆಗೂ ಹರಸಾಹಸಪಟ್ಟು ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು. ಬಳಿಕ ಅರವಳಿಕೆ ತಜ್ಞ ಕಿರಣ್ ಅವರನ್ನು ಅರಣ್ಯಾಧಿಕಾರಿಗಳು ಆಸ್ಪತ್ರೆಗೆ ಕರೆದೊಯ್ದರು. ನಂತರ ಲೆಪರ್ಡ್ಸ್ ಟಾಸ್ಕ್ಫೋರ್ಸ್ ವಾಹನಕ್ಕೆ ಚಿರತೆಯನ್ನು ಶಿಫ್ಟ್ ಮಾಡಿ ಕರೆದೊಯ್ಯಲಾಯಿತು ಆದ್ರೆ ಚಿರತೆ ಈಗ ಸಾವನ್ನಪ್ಪಿದೆ.
ಇಂದು ಮಧ್ಯಾಹ್ನ ಬೊಮ್ಮನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಅರಣ್ಯ ಇಲಾಖೆ ಹಾಕಿದ್ದ ಬಲೆಗೆ ಚಿರತೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿಯುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಅದರ ಮೇಲೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿದ್ದ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಿರತೆ ಸಾವನ್ನಪ್ಪಿದೆ.
ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಂದಿನಿಂದ ಚಿರತೆ ಕಾಣಿಸಿಕೊಂಡಿರಲಿಲ್ಲ. ಆದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರದಿಂದ ಚಿರತೆಯನ್ನು ಸೆರೆ ಹಿಡಿಯಲು ಆಯಕಟ್ಟಿನ ಸ್ಥಳಗಳಲ್ಲಿ ನಾಲ್ಕು ಬೋನುಗಳನ್ನು ಇಡಲಾಗಿತ್ತು. ಅಲ್ಲದೆ ಚಿರಿತೆ ಸೆರೆಗೆ ಐದು ತಂಡಗಳನ್ನು ನಿಯೋಜಿಸಲಾಗಿತ್ತು.
Leopard captured in Bangalore dies at Hospital, forest officials in trouble. forest officials in Bengaluru captured a wandering leopard who later died while underdoing treatment. The animal was caught in the Kudlu area and reportedly, a strong dose of tranquilizer was shot into him. Local news reports say that the leopard died while undergoing treatment.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 05:18 pm
Mangalore Correspondent
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm