ಬ್ರೇಕಿಂಗ್ ನ್ಯೂಸ್
02-11-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ರಾಜ್ಯದಲ್ಲಿ ಕಾಂಗ್ರೆಸ್ ಆಂತರಿಕ ಭಿನ್ನಮತ ತೀವ್ರಗೊಂಡ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರು ದಿಢೀರ್ ಎಂಟ್ರಿ ಕೊಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದ್ದು ರಾಜ್ಯ ಕಾಂಗ್ರೆಸ್ ನಾಯಕರಿಗೆ ವಾರ್ನಿಂಗ್ ಮಾಡಿದ್ದಾರೆ.
ಸರ್ಕಾರ ರಚನೆಯಾಗಿ ಐದು ತಿಂಗಳಾಗುತ್ತಿದ್ದಂತೆ ನಾಯಕರು ಬಣಗಳನ್ನು ಸೃಷ್ಟಿಸಿಕೊಂಡಿದ್ದು ಸಂಪುಟ ಪುನಾರಚನೆ ಬೇಡಿಕೆ ತೀವ್ರಗೊಳಿಸಿದ್ದು ಮತ್ತೊಂದೆಡೆ ಸಿಎಂ ಬದಲಾವಣೆ ವಿಚಾರದಲ್ಲಿ ಚರ್ಚೆಗಳು ಮುನ್ನೆಲೆಗೆ ಬಂದಿರುವುದು ಹೈಕಮಾಂಡ್ ತಲೆನೋವಿಗೆ ಕಾರಣವಾಗಿತ್ತು. ಇದಲ್ಲದೆ, ಬೆಳಗಾವಿ ರಾಜಕಾರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಸ್ತಕ್ಷೇಪ ವಿಚಾರವಾಗಿ ಸತೀಶ್ ಜಾರಕಿಹೊಳಿ ಮತ್ತು ಬೆಂಬಲಿಗರ ಅಸಮಾಧಾನ ತೀವ್ರಗೊಂಡಿತ್ತು.
ಇದರ ಜೊತೆಗೆ ನಿಗಮ ಮಂಡಳಿ ನೇಮಕಾತಿ ಕುರಿತಾಗಿಯೂ ಒಮ್ಮತದ ಅಭಿಪ್ರಾಯ ಸಿಎಂ ಹಾಗೂ ಡಿಸಿಎಂ ನಡುವೆ ಬರಲು ಸಾಧ್ಯವಾಗಿಲ್ಲ. ಈ ಎಲ್ಲಾ ಬೆಳವಣಿಗೆಗಳ ನಡುವೆ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಸಿ ವೇಣುಗೋಪಾಲ್ ದಿಢೀರ್ ರಾಜ್ಯಕ್ಕೆ ಆಗಮಿಸಿ ಚರ್ಚೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆಗೆ ಸಭೆ ನಡೆಸಿದ್ದು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ಪಕ್ಷ ಮತ್ತು ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವಂತೆ ಮಾತನಾಡಿದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವುದಾಗಿ ಎಂದು ಸಂದೇಶ ರವಾನಿಸಿದ್ದಾರೆ. ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರಕಾರದ ಕಾರ್ಯ ವೈಖರಿ ಬಗ್ಗೆ ಮಾತನಾಡಲೇ ಬೇಕಾದ ಸಂಗತಿಗಳಿದ್ದರೆ ಸಿಎಂ ಅಥವಾ ಡಿಸಿಎಂ ಅಥವಾ ನನ್ನ ಜೊತೆಗೆ ನೇರವಾಗಿ ಚರ್ಚಿಸಿ. ಸಾರ್ವಜನಿಕವಾಗಿ ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ ಕ್ರಮ ನಿಶ್ಚಿತ ಎಂದು ರಣದೀಪ್ ಸುರ್ಜೇವಾಲಾ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಆಮೂಲಕ ಲೋಕಸಭೆ ಚುನಾವಣೆಗೆ ತಯಾರಾಗುತ್ತಿರುವ ಸಂದರ್ಭದಲ್ಲಿ ನಾಯಕರ ಎಡವಟ್ಟಿನ ಹೇಳಿಕೆಗಳು ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ನೋಡಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.
The Congress high command stepped in Wednesday to de-escalate the camp war between Chief Minister Siddaramaiah and his deputy DK Shivakumar by sternly asking Cabinet members and MLAs to stop commenting on the party’s internal matters.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm