ಬ್ರೇಕಿಂಗ್ ನ್ಯೂಸ್
02-11-23 03:43 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮಗಳಲ್ಲಿ ಮಾರಕ ಎಂದು ಹೇಳಲಾಗುವ ಜಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಹೈಅಲರ್ಟ್ ಹೊರಡಿಸಿದೆ.
ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಆದರೆ ಯಾವುದೇ ವ್ಯಕ್ತಿಗೆ ಜಿಕಾ ವೈರಸ್ ಸೋಂಕು ಉಂಟು ಮಾಡಿಲ್ಲ. ಆದರೆ ಆರೋಗ್ಯ ಇಲಾಖೆ ಸೂಚನೆ ಬೆನ್ನಲ್ಲೇ ಜನರಲ್ಲಿ ತೀವ್ರ ಆತಂಕ ಉಂಟು ಮಾಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳ ರಕ್ತದಲ್ಲಿ ಅಪಾಯಕಾರಿ ಜಿಕಾ ವೈರಸ್ ಇರುವುದು ಪತ್ತೆಯಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ಶಿಡ್ಲಘಟ್ಟ ಸೇರಿದಂತೆ ವಿವಿಧೆಡೆ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಮೂಲಗಳ ಪ್ರಕಾರ ರಾಜ್ಯದ 68 ಕಡೆಗಳಲ್ಲಿ ಸೊಳ್ಳೆಗಳನ್ನು ಸಂಗ್ರಹಿಸಿ ಅವುಗಳಲ್ಲಿ ಮಾರಣಾಂತಿಕ ವೈರಸ್ ಇದೆಯೇ ಎಂದು ಪರಿಣತರು ಪರೀಕ್ಷೆ ನಡೆಸಿದ್ದರು. ಅದರಂತೆ ಚಿಕ್ಕಬಳ್ಳಾಪುರದ ಆರು ಪ್ರದೇಶಗಳಲ್ಲಿ ಸೊಳ್ಳೆಗಳನ್ನು ಹಿಡಿದು ಪರೀಕ್ಷಿಸಲಾಗಿತ್ತು. ಸದ್ಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದ ಸೊಳ್ಳೆಗಳಲ್ಲಿ ಮಾರಕ ವೈರಸ್ ಪತ್ತೆಯಾಗಿದೆ. ಮಾರಕ ವೈರಸ್ ಪತ್ತೆಯಾಗುತ್ತಿದ್ದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ವಿಶೇಷ ಸಭೆ ನಡೆಸಿ, ವೈರಸ್ ಹರಡದಂತೆ ತಡೆಯಬೇಕಾದ ಕ್ರಮಗಳ ಬಗ್ಗೆ ಚರ್ಚ ನಡೆಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿಕ್ಕಬಳ್ಳಾಪುರ ಡಿಹೆಚ್ಒ ಡಾ.ಮಹೇಶ್ ಕುಮಾರ್, ಅಕ್ಟೋಬರ್ 27ರಂದು ಈ ಭಾಗದ ಸೊಳ್ಳೆಗಳಲ್ಲಿ ಜಿಕಾ ವೈರಸ್ ಇರುವುದು ಪತ್ತೆಯಾಗಿದೆ. ಆದರೆ ಈವರೆಗೂ ಮನುಷ್ಯನ ರಕ್ತದಲ್ಲಿ ಜಿಕಾ ವೈರಸ್ ಕಂಡುಬಂದಿಲ್ಲ. ಪರೀಕ್ಷೆಗಾಗಿ ಮನುಷ್ಯರ ರಕ್ತದ ಮಾದರಿಯನ್ನು ಪಡೆದು ಲ್ಯಾಬ್ಗೆ ಕಳಿಸಲಾಗಿದೆ. ಮನುಷ್ಯರಲ್ಲಿ ಜಿಕಾ ವೈರಸ್ ಪತ್ತೆಯಾದರೆ ವೇಗವಾಗಿ ಹರಡುತ್ತದೆ. ಜಿಕಾ ವೈರಸ್ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದರು.
ತಲಕಾಯಲಬೆಟ್ಟದ ಸುತ್ತಮುತ್ತ 5 ಗ್ರಾಮಗಳಿವೆ. 5 ಗ್ರಾಮಗಳಲ್ಲಿ ಸೊಳ್ಳೆಗಳ ನಾಶ, ಜನಜಾಗೃತಿ ಕೈಗೊಳ್ಳಲಾಗಿದೆ. ಮನೆ ಮನೆಗೆ ತೆರಳಿ ಸೊಳ್ಳೆ ಪತ್ತೆ ಹಾಗೂ ಜಾಗೃತಿ ಮೂಡಿಸುತ್ತಿದ್ದೇವೆ. 5 ಗ್ರಾಮದಲ್ಲಿ 40 ಜನ ಗರ್ಭಿಣಿಯರು ಇದ್ದಾರೆ. ಅದರಲ್ಲಿ 30 ಜನರನ್ನು ಪತ್ತೆ ಹಚ್ಚಿ ಮುಂಜಾಗ್ರತೆ ವಹಿಸಲಾಗಿದೆ. 3 ಜ್ವರ ಪ್ರಕರಣಗಳು ಕಂಡುಬಂದಿವೆ. ಎಲ್ಲರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಜಿಕಾ ವೈರಸ್ ನಿಂದ ಪ್ರಾಣಾಪಾಯವಿಲ್ಲ. ಆದರೆ ಗರ್ಭಿಣಿಯರಿಗೆ ವೈರಸ್ ತಗುಲಿದ್ರೆ ಹುಟ್ಟುವ ಮಕ್ಕಳಿಗೆ ನರದೌರ್ಬಲ್ಯ ಆಗುತ್ತೆ. ಸದ್ಯಕ್ಕೆ ಜಿಕಾ ವೈರಸ್ ಗೆ ಸೂಕ್ತ ಚಿಕಿತ್ಸೆ ಇಲ್ಲ. ಸೊಳ್ಳೆ ಪರದೆ ಹಾಗೂ ಮೈತುಂಬ ಬಟ್ಟೆ ಬಳಸುವಂತೆ ಸೂಚಿಸಿದ್ದಾರೆ.
A Zika virus case has been detected near Bengaluru in a mosquito in Chikkaballapur after it was examined in August. Following this, all fever cases are being analyzed and an alert has been issued around Talkaebetta from where the sample belonged.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am