ಬ್ರೇಕಿಂಗ್ ನ್ಯೂಸ್
02-11-23 08:35 pm HK News Desk ಕರ್ನಾಟಕ
ಹೊಸಪೇಟೆ, ನ.2: ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಬದಲಾವಣೆ ಇತ್ಯಾದಿ ವಿಚಾರದಲ್ಲಿ ಯಾರು ಕೂಡ ಮಾತನಾಡಬಾರದು ಎಂದು ಕಾಂಗ್ರೆಸ್ ಹೈಕಮಾಂಡ್ ನಾಯಕರು ಸೂಚಿಸಿದ ಒಂದೇ ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಹೇಳಿಕೆ ನೀಡಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.
ವಿಜಯನಗರ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಗುರುವಾರ ಹೊಸಪೇಟೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುವಾಗ, ‘ಐದು ವರ್ಷ ನೀವೇನಾ ಸಿಎಂ’ ಎನ್ನುವ ಪ್ರಶ್ನೆಗೆ ಉತ್ತರಿಸಿ ‘ನಾನೇ ಮುಂದುವರೆಯುವೆ’ ಎಂದು ಹೇಳಿದ್ದಾರೆ. ‘ಐದು ವರ್ಷ ನಮ್ಮದೇ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿ. ನಾನೇ ಮುಂದುವರಿಯುವೆ’ ಎಂದರು.
ಡಿಸಿಎಂ ವಿಚಾರ ತಿರ್ಮಾನ ಮಾಡುವುದು ಹೈಕಮ್ಯಾಂಡ್‌ಗೆ ಬಿಟ್ಟದ್ದು. ನಮ್ಮದು ರಾಷ್ಟ್ರೀಯ ಪಕ್ಷ. ಏನೆ ತೀರ್ಮಾನವಾದರೂ ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ತೆಗೆದುಕೊಳ್ಳುವುದು ಎಂದರು.
ಸರ್ಕಾರ ಬೀಳುತ್ತದೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರು ಸೋತಿದ್ದಾರೆ. ಆತನಿಗೆ ಬೇರೆ ಕೆಲಸ ಇಲ್ಲದೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾನೆ. ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ನಾವು ಐದು ವರ್ಷ ಸುಭದ್ರ ಸರ್ಕಾರ ಕೊಡುತ್ತೇವೆ ಎಂದರು
ಬಿಜೆಪಿಗರು ಭ್ರಮನಿರಸನಗೊಂಡಿದ್ದಾರೆ. ಅವರಿಗೆ ಅಧಿಕಾರ ಇಲ್ಲದೆ ಇರಲು ಆಗುವುದಿಲ್ಲ. ಮತ್ತೆ ಅಪರೇಷನ್ ಮಾಡಲು ಪ್ರಯತ್ನ ಮಾಡ್ತಾರೆ. ಅದು ಸಾಧ್ಯವಾಗಲ್ಲ ಎಂದು ಅವರು ತಿಳಿಸಿದರು. ಸಚಿವರಾದ ಜಮೀರ್ ಅಹಮ್ಮದ್ ಖಾನ್, ಶಿವರಾಜ್ ತಂಗಡಗಿ, ಭೈರತಿ ಸುರೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್, ಪಕ್ಷೇತರ ಶಾಸಕಿ ಎಂ.ಪಿ.ಲತಾ ಇತರರಿದ್ದರು.
Karnataka Chief Minister Siddaramaiah on Thursday asserted that he would hold the office for a full five years. The clarification came in the wake of speculation within a section of the ruling Congress about a change in leadership after two-and-half years of this government’s tenure.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm