Priyank Kharge Cm:  ಹೈಕಮಾಂಡ್ ಸೂಚಿಸಿದರೆ ನಾನೂ ಸಿಎಂ ಆಗ್ತೀನಿ, ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪಿಪಿಲ್ ಲೆಸ್ ಎಂದ ಪ್ರಿಯಾಂಕ್ ಖರ್ಗೆ

03-11-23 02:33 pm       HK News Desk   ಕರ್ನಾಟಕ

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕು. ಈ ನಡುವೆ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂಬ ಹೇಳಿಕೆ ವೈಯಕ್ತಿಕವಾದುದು. ಯಾರು ಸಿಎಂ ಆಗಬೇಕು, ಯಾರು ಮುಂದುವರೆಯಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ.

ಮೈಸೂರು, ನ.03: ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕು. ಈ ನಡುವೆ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂಬ ಹೇಳಿಕೆ ವೈಯಕ್ತಿಕವಾದುದು. ಯಾರು ಸಿಎಂ ಆಗಬೇಕು, ಯಾರು ಮುಂದುವರೆಯಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಎಂದರೆ ನಾನೂ ಸಿಎಂ ಆಗಲು ಸಿದ್ಧ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮೈಸೂರಿನಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಪ್ರಿಯಾಂಕ್ ಖರ್ಗೆ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದರು.

ಸಿಎಂ ಅಧಿಕಾರ ಹಂಚಿಕೆ ವಿಚಾರ ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದಲ್ಲಿ ಸ್ಪಷ್ಟತೆ ಇದೆ. ಸಿಎಂ ಅವರ ನಿನ್ನೆ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ, ಜಿಲ್ಲಾ ಪಂಚಾಯತ್ ಸದಸ್ಯರಿಂದ ಹಿಡಿದು ಶಾಸಕರವರೆಗೆ ಎಲ್ಲರಿಗೂ ತಮ್ಮ ಅಭಿಪ್ರಾಯವನ್ನು ಹೇಳಲು ಸ್ವಾತಂತ್ರ್ಯವಿದೆ. ಇದರಲ್ಲಿ ತಪ್ಪೇನೂ ಇಲ್ಲ. ಆದರೆ ಹೇಳಿಕೆಗಳು ಕಲ್ಲಿನಿಂದ ಬರೆದ ಶಾಸನವಲ್ಲ. ಎಲ್ಲವೂ ಪಕ್ಷದ ಹೈ ಕಮಾಂಡ್​​ಗೆ ಬಿಟ್ಟದ್ದು ಎಂದು ಸಚಿವ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ-ಜೆಡಿಎಸ್ ವಿರುದ್ಧ ವಾಗ್ಧಾಳಿ

ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ. ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪಿಪಿಲ್ ಲೆಸ್ ಪಾರ್ಟಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು. ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಯಡಿಯೂರಪ್ಪ ಅವರು ಇಲ್ಲಿ ಕಾಂಗ್ರೆಸ್ ವಿರುದ್ದ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರು ಸಿಗುತ್ತಿತ್ತು. ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ. ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದಾರೆ. ಈಗ ಮಾತನಾಡಿದರೆ ಮಗನಿಗೆ ಸ್ಥಾನ ಸಿಗಬಹುದು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಕುರಿತು ಹೇಳಿದರು.

Karnataka IT minister and Congress chief Mallikarjun Kharge's son Priyank Kharge has said he would agree to take the chief ministerial post in the state if the party high command asks him to.