KN Rajanna, CM Siddaramaiah, Parameshwara, CM: ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಅವರೇ ಸಿಎಂ ಆಗಲಿದ್ದಾರೆ ; ಮತ್ತೆ ಕಿಡಿ ಎಬ್ಬಿಸಿದ ಸಚಿವ ಕೆಎನ್ ರಾಜಣ್ಣ 

03-11-23 06:54 pm       HK News Desk   ಕರ್ನಾಟಕ

ಸಚಿವ ಪರಮೇಶ್ವರ್ ಅವರಿಗೆ ಸಿಎಂ ಆಗುವ ಅವಕಾಶವಿದೆ. ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಅವರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ.

ತುಮಕೂರು, ನ.3: ಸಚಿವ ಪರಮೇಶ್ವರ್ ಅವರಿಗೆ ಸಿಎಂ ಆಗುವ ಅವಕಾಶವಿದೆ. ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಅವರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ. 

ಪರಮೇಶ್ವರ್ ಈಗ ಹೋಮ್ ಮಿನಿಸ್ಟರ್ ಆಗಿದ್ದಾರೆ. ಮುಂದೆ ಏನು ಬೇಕಾದ್ರೂ ಆಗಬಹುದು.  ಡಾಕ್ಟರೇ, ನಿಮಗೆ ಅದೃಷ್ಟಯಿದೆ. ಆಡಳಿತ ನಡೆಸುತ್ತೀರಿ ಅಂತ ಹಿಂದೊಮ್ಮೆ ಹೇಳಿದ್ದೆ. ಯಾಕಂದ್ರೆ ಅವರಿಗೆ ಅದೃಷ್ಟ ಇದೆ ಅಂತಾ ನಾನು ಭಾವಿಸಿದ್ದೇನೆ. ನಮ್ಮ ಜಿಲ್ಲೆಯಿಂದ ಒಬ್ಬ ಮುಖ್ಯಮಂತ್ರಿ ಆಗ್ತಾರೆ ಅಂದ್ರೆ ನಾವೆಲ್ಲಾ ಸಂತೋಷ ಪಡುತ್ತೇವೆ. ನಾವೆಲ್ಲಾ ಮುಖ್ಯಮಂತ್ರಿ ಆದಂತೆ ಭಾವಿಸುತ್ತೇವೆ. ಸಿದ್ದರಾಮಯ್ಯ ಇರೊವರೆಗೆ ನಾವೆಲ್ಲಾ ಸಿದ್ದರಾಮಯ್ಯ ಪರ.‌ ನಾವು, ಪರಮೇಶ್ವರ್ ಇಬ್ಬರು ಅವರ ಪರ ಇರುತ್ತೇವೆ. 

Assembly Elections: Karnataka CM Siddaramaiah rejects poll funding claims  after I-T raids unearth Rs 82 cr - The Economic Times

30 properties connected to former DCM G Parameshwar raided by IT department  - Daijiworld.com

ಸಿದ್ದರಾಮಯ್ಯ ಹೊರತು ಪಡಿಸಿದ್ರೆ, ಪರಮೇಶ್ವರ್ ಸಿಎಂ ಆಗಬೇಕು ಅಂತ ಬಯಸುತ್ತೇವೆ. ಎಐಸಿಸಿಯವರು ನಮಗೆ ಏನು ಮಾತನಾಡದಂತೆ ಹೇಳಿದ್ದಾರೆ. ಆದರೆ ಇಷ್ಟು ಮಾತ್ರ ಹೇಳುತ್ತೇನೆ. ಮುಂದೆ ಏನೂ ಹೇಳಲ್ಲ ಎಂದು ಹೇಳಿದರು. ನಾನು, ಪರಮೇಶ್ವರ್ ಒಟ್ಟಿಗೆ ಸಭೆಯಲ್ಲಿ ಕಾಣಿಸಿಕೊಂಡು ತುಂಬಾ ದಿನವಾಗಿತ್ತು.‌ ಹಾಗಾಗಿ ನನ್ನ ಮನಸಿನ ಭಾವನೆ ಹೇಳಿದ್ದೇನೆ. ನಾನು ಯಾರಿಗೂ ಹೆದರಲ್ಲ, ಈಗ ಮಾತನಾಡಿದ್ದು ಆಗೋಯ್ತು, ಮುಂದೆ ಮಾತನಾಡಲ್ಲ ಅಂತ ಹೇಳ್ತೀವಿ. ನಾನಂತೂ ಮುಂದೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ತುಮಕೂರಿನಲ್ಲಿ ನಡೆದ ನೂತನ ಪೊಲೀಸ್ ಸಮುಚ್ಚಯ ಉದ್ಘಾಟನೆ ಸಮಾರಂಭದಲ್ಲಿ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ. 

ರಾಜಣ್ಣ ಅವರ ಈ ಹೇಳಿಕೆ ವಿವಾದಕ್ಕೆ ಒಳಗಾಗುತ್ತಿದ್ದಂತೆ ಮತ್ತೆ ಸ್ಪಷ್ಟನೆ ನೀಡಿದ ರಾಜಣ್ಣ, ನಾನು ಹೇಳಿದ್ದರಲ್ಲಿ ತಪ್ಪಿಲ್ಲ. ಇರೋದನ್ನು ಹೇಳಿದ್ದೇನೆ. ಮುಂದೆ ಪರಮೇಶ್ವರ್ ಅವರೇ ಸಿಎಂ ಆಗುತ್ತಾರೆ ಎಂದು ಪುನರುಚ್ಚರಿಸಿದ್ದಾರೆ.

Minister Parameshwara has the opportunity to become the CM. Co-operation Minister K N Rajanna has said that Parameshwara will be the chief minister after Siddaramaiah.