ಬ್ರೇಕಿಂಗ್ ನ್ಯೂಸ್
04-11-23 11:57 am Bangalore Correspondent ಕರ್ನಾಟಕ
ಬೆಂಗಳೂರು, ನ 04: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಜಾತಿ ನಿಂದನೆ ಮಾಡಿರುವ ಆರೋಪ ಸಂಬಂಧ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕನ್ನಡಪರ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ನೀಡಿರುವ ದೂರಿನನ್ವಯ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನೆಲೆ ಶುಕ್ರವಾರ ಸಂಜೆ ಸಂಪಿಗೆಹಳ್ಳಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ.
ಹಿಂದೂಪರ ಕಾರ್ಯಕರ್ತನಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಇತ್ತೀಚಿಗೆ ರೌಡಿಪಟ್ಟಿ ತೆರೆದು ಬಂಧಿಸಲಾಗಿತ್ತು. ಆ ಸಂದರ್ಭದಲ್ಲಿ ಪೊಲೀಸರು ಸಲ್ಲಿಸಿದ್ದ ಚಾರ್ಜ್ಶೀಟ್ ಆಧರಿಸಿ ಮಾಧ್ಯಮಗಳಲ್ಲಿ ವರದಿಯಾದದ್ದನ್ನು ಭೈರಪ್ಪ ಹರೀಶ್ ಕುಮಾರ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಬಿಡುಗಡೆಯಾದ ಬಳಿಕ ತಮ್ಮ ವಿರುದ್ಧ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಪುನೀತ್ ಕೆರೆಹಳ್ಳಿ ತಮ್ಮನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿ ಅವಾಚ್ಯವಾಗಿ ನಿಂದಿಸಿದ್ದಾನೆ ಎಂದು ದೂರಿದ್ದರು.
ಅಕ್ಟೋಬರ್ 17 ಹಾಗೂ 18ರಂದು ತನ್ನ ಫೇಸ್‌ಬುಕ್ ಖಾತೆಯಲ್ಲಿ ವಿವಿಧ ಪೋಸ್ಟ್ ಮಾಡಿರುವ ಪುನೀತ್ ಕೆರೆಹಳ್ಳಿ ತಮ್ಮ ವಿರುದ್ಧ ಅವಾಚ್ಯವಾಗಿ ನಿಂದಿಸಿ, ತಮ್ಮ ಕುಟುಂಬ ಹಾಗೂ ಮಕ್ಕಳನ್ನು ಉದ್ದೇಶಿಸಿ ಸಮಾಜದಲ್ಲಿ ತಲೆ ಎತ್ತಿಕೊಂಡು ತಿರುಗಾಡದಂತೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಹಾಗೂ ದಲಿತ ಸಮುದಾಯದವರಾದ ತಮ್ಮನ್ನು ಉದ್ದೇಶಿಸಿ ಜಾತಿನಿಂದನೆ ಮಾಡಲಾಗಿದೆ ಎಂದು ಭೈರಪ್ಪ ಹರೀಶ್ ಕುಮಾರ್ ತಮ್ಮ ದೂರಿನಲ್ಲಿ ಆರೋಪಿಸಿದ್ದರು. ಈ ದೂರಿನನ್ವಯ ಪುನೀತ್ ಕೆರೆಹಳ್ಳಿ ವಿರುದ್ಧ ಜಾತಿ ನಿಂದನೆ, ಬೆದರಿಕೆ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಆರೋಪದಡಿ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ರದ್ದು:ಕಳೆದ ಆಗಸ್ಟ್ 11ರಂದು ಪೊಲೀಸರು ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆದರೆ, ಗೂಂಡಾ ಕಾಯ್ದೆಗೆ ಸಂಬಂಧಿಸಿಂತೆ ರಚಿಸಲಾಗಿದ್ದ ಸಲಹಾ ಮಂಡಳಿಯು ಕೆರೆಹಳ್ಳಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ವರದಿ ನೀಡಿತ್ತು. ಹೀಗಾಗಿ ಪುನೀತ್ ವಿರುದ್ಧ ದಾಖಲಾಗಿದ್ದ ಗೂಂಡಾ ಕಾಯ್ದೆ ರದ್ದುಪಡಿಸಿ ಪರಪ್ಪನ ಅಗ್ರಹಾರದಿಂದ ಬಿಡುಗಡೆ ಮಾಡಲಾಗಿತ್ತು.
ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ, ರಾಮನಗರ ಹಾಗೂ ವಿಜಯನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಗಲಭೆ, ದೊಂಬಿ, ಕೊಲೆ ಬೆದರಿಕೆ ಹಾಗೂ ಹಲ್ಲೆ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿತ್ತು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟ್ ತೆರೆದಿದ್ದರು.
Puneeth Kerehalli, a pro-Hindu activist, has been taken into custody by the Sampigehalli police for allegedly making casteist remarks on social networking site Facebook. Puneeth Kerehalli was taken into custody by the Sampigehalli police on Friday evening after a case was registered at Sampigehalli police station on the complaint of pro-Kannada activist Bhyrappa Harish Kumar.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm