ಬ್ರೇಕಿಂಗ್ ನ್ಯೂಸ್
06-11-23 07:17 pm Bangalore Correspondent ಕರ್ನಾಟಕ
ಬೆಂಗಳೂರು, ನ 06: ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರ್ ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನರ ಹೆಸರು ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುನಿರತ್ನರನ್ನು ವಿಚಾರಣೆ ನಡೆಸುವಂತೆ ವಕೀಲ ಹಾಗೂ ಕೆಪಿಸಿಸಿ ಕಾನೂನು ಘಟಕದ ಮುಖಂಡ ಸೂರ್ಯ ಮುಕುಂದರಾಜ್ ಒತ್ತಾಯಿಸಿದ್ದಾರೆ.
ವಿಜ್ಞಾನಿ ಪ್ರತಿಮಾ ಅವರು ಪ್ರಭಾವಿ ರಾಜಕಾರಣಿ ಮಾಜಿ ಸಚಿವ ಶಾಸಕ ಸಿಡಿ ಕಂಪನಿಗಳ ಮಾಲೀಕ ಮುನಿರತ್ನ ವಿರುದ್ಧ ಅಕ್ರಮ ಸ್ಪೋಟಕ ಬಳಕೆ ಮಾಡಿ ಕಲ್ಲು ಶಿಲೆಗಳನ್ನು ಪುಡಿ ಮಾಡಿದ್ದ ಸಂಬಂಧ ಹಾಗೂ ಸರ್ಕಾರಕ್ಕೆ 25 ಲಕ್ಷ ರಾಯಧನ ನಷ್ಟ ಮಾಡಿದ್ದ ಕಾರಣಕ್ಕೆ ಹುಣಸಮಾರನಹಳ್ಳಿ ಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿದ್ದರು. ಬಹುಶಃ ಇವರ ಸಹೋದರನ ಹಳೆ ನಂಟು ಈ ಕೊಲೆ ಪ್ರಕರಣದಲ್ಲಿ ಏನಾದರೂ ಹಸ್ತಕ್ಷೇಪ ಮಾಡಿರಬಹುದು ಪೊಲೀಸರು ತನಿಖೆ ನಡೆಸಬಹುದು'' ಎಂದು ಸೂರ್ಯ ಮುಕುಂದರಾಜ್ ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನ ತಿಹಾರ್ ಜೈಲಿಗೆ ಕಳುಹಿಸಲು ಪಿತೂರಿ ;
ಗಣಿ-ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಆರ್ಆರ್ ನಗರ ಶಾಸಕ ಮುನಿರತ್ನ ಅವರ ಹೆಸರು ತಳುಕು ಹಾಕಿಕೊಂಡಿದೆ ಎನ್ನಲಾಗಿದ್ದು, ಪ್ರಕರಣದಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಮುನಿರತ್ನ ಆರೋಪಿಸಿದ್ದಾರೆ.
ಕೊಲೆ ಪ್ರಕರಣ ಬೆಳಕಿಗೆ ಬಂದ ನಂತರ, ಕೇಸ್ ನಲ್ಲಿ ಮುನಿರತ್ನ ಅವರ ಕೈವಾಡವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಮುನಿರತ್ನ ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ತಿಹಾರ್ ಜೈಲಿಗೆ ಕಳುಹಿಸಲು ವ್ಯವಸ್ಥಿತ ಪಿತೂರಿ ನಡೆಯುತ್ತಿದೆ ಎಂದು ದೂರಿದ್ದಾರೆ.
ನನ್ನ ನಿವಾಸದ ಮುಂದೆ ಸಂಭವಿಸುವ ಅಪಘಾತಗಳಿಗೆ ನಾನೇ ಹೊಣೆಯಾಗಿದ್ದೇನೆಯೇ ಎಂದು ಪ್ರಶ್ನಿಸಿದ ಅವರು, ಪ್ರತಿಮಾ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ, ಅದರ ಬಗ್ಗೆ ಪ್ರತಿಕ್ರಿಯಿಸುವುದು ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ. ತನಿಖೆ ಮುಗಿದ ನಂತರ, ರಾಜಕೀಯವಾಗಿ ನನ್ನನ್ನು ಮುಗಿಸಲು ಬಯಸುವವರಿಗೆ ಉತ್ತರ ಕೊಡುತ್ತೇನೆ ಎಂದು ಮುನಿರತ್ನ ತಿಳಿಸಿದ್ದಾರೆ.
ಪ್ರತಿಮಾ ಕೊಲೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರ ಪಾತ್ರದ ಬಗ್ಗೆ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ವಕ್ತಾರ ಮತ್ತು ಕಾನೂನು ವಿಭಾಗದ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಒತ್ತಾಯಿಸಿದ್ದಾರೆ.
ಬೆಂಗಳೂರಿನ ಹುಣಸಮಾರನಹಳ್ಳಿ ಹಾಗೂ ಸೊಣ್ಣಪ್ಪನಹಳ್ಳಿ ಗ್ರಾಮಗಳ 4 ಎಕರೆ 5 ಗುಂಟೆ ಜಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಕಾರಿಗೆ ನಡೆದ ಬಗ್ಗೆ ವರದಿ ಸಿದ್ಧಪಡಿಸಿದ್ದ ಕೊಲೆಯಾದ ಅಧಿಕಾರಿ ಪ್ರತಿಮಾ, ಜಿಲ್ಲಾಧಿಕಾರಿಗೆ ನೀಡಿದ್ದರು. ಅಕ್ರಮ ಕಲ್ಲು ಗಣಿಗಾರಿಕೆಯಿಂದ ಸರ್ಕಾರಕ್ಕೆ 25.35 ಲಕ್ಷ ರು. ರಾಜಸ್ವಧನ ನಷ್ಟ ಆಗಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಿದ್ದರು.
ಪರವಾನಗಿ ಪಡೆಯದೇ ಹುಣಸಮಾರನಹಳ್ಳಿಯಲ್ಲಿ ಬಂಡೆಗಳನ್ನು ಸಿಡಿಸಿದ್ದಾರೆ.ಮೃತ ಅಧಿಕಾರಿ ವರದಿ ಸಿದ್ಧಪಡಿಸಿ ಜಿಲ್ಲಾಧಿಕಾರಿಗೆ ಸಲ್ಲಿಸಿದ್ದಾರೆ. ಬೆಂಗಳೂರಿನ ಚಿಕ್ಕಜಾಲ ಠಾಣೆಗೂ ದೂರು ನೀಡಲಾಗಿದ್ದು, ಪ್ರಕರಣದಲ್ಲಿ ಶಾಸಕ ಮುನಿರತ್ನ ಎರಡನೇ ಆರೋಪಿಯಾಗಿದ್ದಾರೆ.ಸೂರ್ಯಮುಕುಂದರಾಜ್ ಕೊಲೆಯನ್ನು ಎಲ್ಲಾ ಕೋನಗಳಿಂದಲೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು ಮತ್ತು ಮುನಿರತ್ನ ಅವರು ನೋಟಿಸ್ ಜಾರಿಗೊಳಿಸಿ ತನಿಖೆ ನಡೆಸಬೇಕು ಎಂದು ಅವರು ಹೇಳಿದ್ದಾರೆ.
ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಶಾಸಕ ಮುನಿರತ್ನ 4ನೇ ಆರೋಪಿಯಾಗಿದ್ದಾರೆ. ಇದೀಗ ಅಧಿಕಾರಿ ಪ್ರತಿಮಾ ನಿಗೂಢವಾಗಿ ಕೊಲೆಯಾದ ಬೆನ್ನಲ್ಲೇ ಅಕ್ರಮ ಗಣಿಕಾರಿಕೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಪ್ರತಿಮಾ ಪ್ರಕರಣದಲ್ಲಿ ಮುನಿರತ್ನ ಏನಾದರೂ ಹಸ್ತಕ್ಷೇಪ ಮಾಡಿರಬಹುದು. ಪೊಲೀಸರು ತನಿಖೆ ನಡೆಸಬಹುದು ಎಂದು ಭಾವಿಸುತ್ತೇನೆ ಎಂದು ಸೂರ್ಯ ಮುಕುಂದರಾಜ್ ಹೇಳಿದ್ದಾರೆ.
ಶನಿವಾರ (ನವೆಂಬರ್ 4) ರಾತ್ರಿ ಕೆಲಸ ಮುಗಿಸಿ ಕಚೇರಿಯಿಂದ ಮನೆಗೆ ಮರಳಿದ್ದ ಅಧಿಕಾರಿ ಪ್ರತಿಮಾ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮೊದಲು ಉಸಿರುಗಟ್ಟಿಸಿ ಬಳಿಕ ಚಾಕುವಿನಿಂದ ಪ್ರತಿಮಾ ಅವರ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಪ್ರತಿಮಾ ಅವರ ಮಾಜಿ ಕಾರು ಚಾಲಕನನ್ನು ಬಂಧಿಸಲಾಗಿದೆ.
Woman Mines officer Prathima Murder case, BJP MLA Munirathna says am targeted as a case has been filed by Congress Law person that MLA has to be inquired. The senior geologist with the Department of Mines and Geology, who was found murdered at her residence in Bengaluru, is said to have prepared a report against illegal quarrying in which BJP MLA Munirathna was also named.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm