ಬ್ರೇಕಿಂಗ್ ನ್ಯೂಸ್
08-11-23 12:00 pm HK News Desk ಕರ್ನಾಟಕ
ತುಮಕೂರು, ನ.8: ಚಿರತೆ ದಾಳಿಗೆ ಸಿಲುಕಿದ ಮಗಳನ್ನು ತಂದೆ ರಕ್ಷಿಸಿರುವ ಘಟನೆ ತುಮಕೂರು ತಾಲೂಕಿನ ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಲೇಖನ (7) ಚಿರತೆ ದಾಳಿಯಿಂದ ಪಾರಾದ ಬಾಲಕಿ. ಬಾಲಕಿ ಮೇಲೆ ದಾಳಿ ನಡೆಸಿ ಹೊತ್ತೊಯ್ಯಲು ಯತ್ನಿಸುತ್ತಿದ್ದಂತೆ, ತಂದೆ ರಾಕೇಶ್ ಬೆದರಿಸಿ ಓಡಿಸಿದ್ದಾರೆ.
ಸಂಜೆಯ ವೇಳೆ ರಾಕೇಶ್ ಮತ್ತು ಹರ್ಷಿತಾ ದಂಪತಿಯ ಮಗಳು ಲೇಖನ ಮನೆ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಚಿರತೆ ದಿಢೀರ್ ಮೈಮೇಲೆರಗಿದೆ. ಸ್ಥಳದಲ್ಲೇ ಇದ್ದ ರಾಕೇಶ್ ಜೋರಾಗಿ ಕೂಗಿದ್ದು, ದೊಣ್ಣೆಯಿಂದ ಬೆದರಿಸಿದ್ದಾರೆ. ಆಗ ಚಿರತೆ ಮಗುವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದೆ.
ಬಾಲಕಿಯ ಕಾಲಿಗೆ ಪರಚಿದ ಗಾಯಗಳಾಗಿದ್ದು ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು:
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು ವರದಿಯಾಗುತ್ತಲೇ ಇದೆ. ಇದರೊಂದಿಗೆ ಜನವಸತಿ ಪ್ರದೇಶಗಳಲ್ಲಿ ಚಿರತೆ, ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿರುವ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರು ಹೊರವಲಯದ ಕೆಲವೆಡೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಚಿರತೆ, ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಗುಂಡೇಟಿಗೆ ಬಲಿಯಾಗಿತ್ತು. ಚಿರತೆಯನ್ನು ಬೊಮ್ಮನಹಳ್ಳಿಯ ಕುಡ್ಲುಗೇಟ್ ಬಳಿ ಸೆರೆ ಹಿಡಿಯಲಾಗಿತ್ತು. ಆದರೆ ಕಾರ್ಯಾಚರಣೆ ವೇಳೆ ಗುಂಡು ತಗುಲಿದ್ದರಿಂದ ಮೃತಪಟ್ಟಿತ್ತು.
Leopard attacks seven year old play outside house at Tumakuru. She has undergoing treatment at hospital.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm