ಬ್ರೇಕಿಂಗ್ ನ್ಯೂಸ್
09-11-23 02:32 pm Bangalore Correspondent ಕರ್ನಾಟಕ
ಬೆಂಗಳೂರು, ನ 09: ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ ಕೂದಲು ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನೆಲಗದರನಹಳ್ಳಿಯ ಶ್ರೀ ಪೇಯಿಂಟ್ಸ್ ಕಾರ್ಖಾನೆಯಲ್ಲಿ ನಡೆದ ಘಟನೆಯಲ್ಲಿ ಶ್ವೇತಾ (34) ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಇದೊಂದು ಪೈಂಟ್ ಮಿಕ್ಸಿಂಗ್ ಕಾರ್ಖಾನೆಯಾಗಿದ್ದು, ಇಲ್ಲಿ ಒಂದು ಗ್ರೈಂಡರ್‌ನಲ್ಲಿ ಪೌಡರ್ ಮತ್ತು ಇತರ ಸಾಮಗ್ರಿಗಳನ್ನು ಹಾಕಿ ಬಣ್ಣವನ್ನು ತಯಾರಿಸಲಾಗುತ್ತದೆ. ಈ ಸಂದರ್ಭದಲ್ಲಿ ಗ್ರೈಂಡರ್‌ಗೆ ಜಡೆ ಸಿಲುಕಿ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ.
ಗ್ರೈಂಡರ್‌ನ ಒಳಗೆ ಬಣ್ಣ ಗಟ್ಟಿಯಾಗಿತ್ತು. ಅದನ್ನು ಚೆಕ್ ಮಾಡಲೆಂದು ಒಳಗೆ ಬಗ್ಗಿದಾಗ ಒಮ್ಮೆಗೇ ತಲೆಕೂದಲು ಸಿಕ್ಕಿಹಾಕಿಕೊಂಡಿದೆ. ಆಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಆದರೆ, ಗ್ರೈಂಡರ್ ಸದ್ದಿನಿಂದಾಗಿ ಅವರ ಕೂಗು ಯಾರಿಗೂ ಕೇಳಿಸಲಿಲ್ಲ. ಕೊನೆಗೆ ಉಳಿದ ಕೆಲಸಗಾರರು ಬಂದು ನೋಡಿದಾಗ ಶ್ವೇತಾ ದಾರುಣವಾಗಿ ಮೃತಪಟ್ಟಿರುವುದು ಕಂಡುಬಂದಿದೆ. ತಲೆಕೂದಲು ಸಿಕ್ಕಿಕೊಂಡ ಬಳಿಕ ಬ್ಲೇಡ್‌ಗಳು ಆಕೆಯ ಕೊರಳನ್ನೇ ಕತ್ತರಿಸಿದ್ದವು.
ಶ್ವೇತಾ ಅವರು ತಮ್ಮ ಗಂಡ ಮತ್ತು ಮಗನ ಜೊತೆ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ಈ ಘಟನೆಯಿಂದ ಕಾರ್ಖಾನೆ ಕಾರ್ಮಿಕರಲ್ಲಿ ಸೂತಕದ ಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಇಂಥ ಅಪಾಯ ಯಾವಾಗ ಬೇಕಾದರೂ ಸಂಭವಿಸಬಹುದು ಎಂಬ ಆತಂಕ ಕೂಡಾ ಕಾಡುತ್ತಿದೆ. ಪ್ರಕರಣ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Bangalore woman dies in paint mixing factory after hair stucks inside machine.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am