Actor Darshan Dog News: ನಾಯಿ ಕಚ್ಚಿದಕ್ಕೆ ನಟ ದರ್ಶನ್ ಗೆ ನೋಟಿಸ್ ; ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಪೋಲೀಸರ ಬುಲಾವ್ 

11-11-23 02:19 pm       Bangalore Correspondent   ಕರ್ನಾಟಕ

ಸ್ಯಾಂಡಲ್ ವುಡ್ ಹೆಸರಾಂತ ನಟ ದರ್ಶನ್ ಮನೆಯ ನಾಯಿ ಮಹಿಳೆಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಬೆಂಗಳೂರಿನ ಆರ್ ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಬೆಂಗಳೂರು, ನ 11: ಸ್ಯಾಂಡಲ್ ವುಡ್ ಹೆಸರಾಂತ ನಟ ದರ್ಶನ್ ಮನೆಯ ನಾಯಿ ಮಹಿಳೆಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಬೆಂಗಳೂರಿನ ಆರ್ ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್  ಪೊಲೀಸರು ತಿಳಿಸಿದ್ದಾರೆ. ಈಗಾಗಲೇ ನಾಯಿಯ ಕೇರ್ ಟೇಕರ್ ಹೇಮಂತ್ ಅವರ ವಿಚಾರಣೆ ಮಾಡಿರುವ ಪೊಲೀಸರು, ನಂತರ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಈ ಹಿಂದೆ ದರ್ಶನ್ ವಿರುದ್ಧ ಆರ್‌ಆರ್ ನಗರದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.

ಈ ಬಗ್ಗೆ ಸ್ವತಃ ದೂರುದಾರರಾದ ಅಮಿತಾ ಜಿಂದಾಲ್ ಪ್ರತಿಕ್ರಿಯೆ ನೀಡಿದ್ದರು. ಆರ್‌ಆರ್ ನಗರದಲ್ಲಿ ಆಸ್ಪತ್ರೆ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದೆ. ದರ್ಶನ್ ಮನೆಯ ಬಳಿ ಖಾಲಿ ಜಾಗದಲ್ಲಿ ಕಾರನ್ನು ಪಾರ್ಕ್ ಮಾಡಿದ್ದು, ಕಾರ್ಯಕ್ರಮ ಮುಗಿಸಿ ಮರಳಿ ಬಂದಾಗ ಕಾರು ನಿಲ್ಲಿಸಿದ್ದ ಜಾಗದಲ್ಲಿ ಮೂರು ನಾಯಿಗಳು ಇದ್ದವು. ದರ್ಶನ್‌ರ ಮನೆ ಸಿಬ್ಬಂದಿಗೆ ನಾಯಿಗಳನ್ನು ಪಕ್ಕಕ್ಕೆ ಕರೆದುಕೊಳ್ಳುವಂತೆ ಕೇಳಿದೆ, ಆಗ ಈ ಜಾಗದಲ್ಲಿ ನೀವು ಕಾರು ಪಾರ್ಕ್ ಮಾಡುವಂತಿಲ್ಲ ಎಂದು ಸಿಬ್ಬಂದಿ ಹೇಳಿದ್ದರು ಎಂದು ಅಮಿತಾ ಮಾತನಾಡಿದ್ದರು.

ಮಾತಿನ ಚಕಮಕಿಯ ಬಳಿಕ ನಾಯಿಗಳು ತನ್ನ ಮೇಲೆ ದಾಳಿ ನಡೆಸಿ ಹೊಟ್ಟೆ ಹಾಗೂ ಕೈಗೆ ಕಡಿದು ಗಾಯಗೊಳಿಸಿವೆ. ಅವರ ಸಿಬ್ಬಂದಿ ನಾಯಿಗೆ ಇಂಜೆಕ್ಷನ್ ಆಗಿದೆ ಹೋಗಿ ಎಂದು ಕಳುಹಿಸಿಬಿಟ್ರು. ಸ್ನೇಹಿತರ ಮಗನ ಸಹಾಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಆರ್‌ಆರ್ ನಗರ ಪೊಲೀಸ್ ಠಾಣೆಗೆ ಹೋಗಿ ಘಟನೆ ಸಂಬಂಧ ದೂರು ನೀಡಿದ್ದೇನೆ ಎಂದು ಅವರು ವಿವರಿಸಿದ್ದರು.

ಸಿಬ್ಬಂದಿಯನ್ನ ಮೊದಲ ಆರೋಪಿ, ದರ್ಶನ್‌ರನ್ನು ಎರಡನೇ ಆರೋಪಿಯನ್ನಾಗಿಸಿ ಪ್ರಕರಣ ದಾಖಲಾಗಿತ್ತು. ದರ್ಶನ್ ಅವರು ಯಾವುದೇ ಕರೆ ಮಾಡಿಲ್ಲ ಮತ್ತು ಭೇಟಿ ಮಾಡಲಿಲ್ಲ. ಯಾರೋ ವ್ಯಕ್ತಿಯೊಬ್ಬರು ಆಸ್ಪತ್ರೆಯ ಖರ್ಚು ಭರಿಸೋದಾಗಿ ತಿಳಿಸಿದ್ದರು. ಅವರು ಯಾರು ಎಂದು ತಿಳಿದು ಬಂದಿಲ್ಲ. ಪೊಲೀಸರು ನಮಗೆ ಉತ್ತಮ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೇಸ್ ದಾಖಲಾಗಿದೆ, ತನಿಖೆ ನಡೆಯಲಿ ಎಂದು ಗಾಯಗೊಂಡ ಮಹಿಳೆ ಅಮಿತಾ ತಿಳಿಸಿದ್ದರು. ಈಗ ನೋಟಿಸ್ ನೀಡುವ ಮೂಲಕ ಪೊಲೀಸರು ತನಿಖೆಗೆ ಇಳಿದಿದ್ದಾರೆ.

The RR Nagar police have issued a notice to actor Darshan in connection with the incident in which a dog bit a woman at his house. The notice police have asked him to appear for questioning within three days. The police have already questioned the dog's caretaker Hemanth and later issued a notice to Darshan.