ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಖಾತೆ ; ಅಶ್ಲೀಲ ವಿಡಿಯೋ ಅಪ್ಲೋಡ್ !

14-11-20 12:18 pm       Bangalore Correspondent   ಕರ್ನಾಟಕ

ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಅಶ್ಲೀಲ ವಿಡಿಯೋಗಳನ್ನು ಅಪ್ಲೋಡ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು, ನವೆಂಬರ್ 14: ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಅಶ್ಲೀಲ ವಿಡಿಯೋಗಳನ್ನು ಅಪ್ಲೋಡ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ನಟ ವಿನೋದ್ ರಾಜ್ ಪೊಲೀಸರಿಗೆ ದೂರು ನೀಡಿದ್ದು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ನಕಲಿ ಖಾತೆಗಳನ್ನು ತೆರೆದು ಅಸಭ್ಯ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ. ಪ್ರತಿದಿನ ವಿಡಿಯೋ, ಫೋಟೋಗಳನ್ನು ಅಪ್ಲೋಡ್ ಮಾಡಿ, ಮಾನಹಾನಿ ಮಾಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿನೋದ್ ರಾಜ್ ಮನವಿಯಲ್ಲಿ ಒತ್ತಾಯಿಸಿದ್ದಾರೆ. ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. 

A Fake account has been created in the name of Kannada actor Vinod Raj and obscene videos are being uploaded in the profile.