ಹೈಕೋರ್ಟ್ ಗ್ರೀನ್ ಸಿಗ್ನಲ್ ; ಡಿಸೆಂಬರ್ ಕೊನೆಗೆ ಗ್ರಾಪಂ ಚುನಾವಣೆ ?

14-11-20 12:34 pm       Bangalore Correspondent   ಕರ್ನಾಟಕ

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಚುನಾವಣಾ ಆಯೋಗ ಡಿಸೆಂಬರ್ ಕೊನೆಯ ವಾರದಲ್ಲಿ ಅಥವಾ ಜನವರಿ ಆರಂಭದಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಸಿದೆ.

ಬೆಂಗಳೂರು, ನವೆಂಬರ್ 14: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಚುನಾವಣಾ ಆಯೋಗ ಡಿಸೆಂಬರ್ ಕೊನೆಯ ವಾರದಲ್ಲಿ ಅಥವಾ ಜನವರಿ ಆರಂಭದಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಸಿದೆ.

ಮೀಸಲು ನಿಗದಿ ವಿಚಾರದಲ್ಲಿ ಗ್ರಾಪಂ ಚುನಾವಣೆ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಕೋರ್ಟ್, ಸರಕಾರ ಮತ್ತು ಆಯೋಗದ ನಡುವಿನ ಹಗ್ಗಜಗ್ಗಾಟಕ್ಕೆ ತೆರೆ ಹಾಕಿದೆ. ಚುನಾವಣಾ ಆಯೋಗ ಗ್ರಾಪಂ ಚುನಾವಣೆ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದರೂ, ಸರಕಾರ ಕೊರೊನಾ ಕಾರಣದಿಂದ ಮುಂದೂಡಲು ಒತ್ತಡ ಹೇರಿತ್ತು.

ಇದೀಗ ಹೈಕೋರ್ಟ್ ಮೂರು ವಾರಗಳ ಒಳಗೆ ಚುನಾವಣೆಗೆ ಅಧಿಸೂಚನೆ ಹೊರಡಿಸಲು ಸೂಚನೆ ನೀಡಿದೆ. ಹೀಗಾಗಿ ರಾಜ್ಯದಲ್ಲಿ ಇರುವ 5800ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.

ಅತ್ತ ಕೇರಳದಲ್ಲಿಯೂ ಡಿಸೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಈಗಾಗ್ಲೇ ಕರ್ನಾಟಕದಲ್ಲಿ ಪ್ರಮುಖ ಪಕ್ಷಗಳು ಚುನಾವಣೆಗೆ ಸಿದ್ಧತೆ ಮಾಡಿಕೊಂಡಿವೆ. 

The Karnataka High Court on Friday directed the State Election Commission (SEC) to finalise the schedule of gram panchayat (GP) elections and announce the calendar of events within three weeks.