ಬ್ರೇಕಿಂಗ್ ನ್ಯೂಸ್
15-11-23 10:11 pm HK News Desk ಕರ್ನಾಟಕ
ಮೈಸೂರು, ನ 15: ರೈಲ್ವೆ ಹಳಿಗಳ ಮೇಲೆ ಕಬ್ಬಿಣದ ಸ್ಲೀಪರ್ ಮತ್ತು ಮರದ ದಿಮ್ಮಿಗಳನ್ನು ಇರಿಸಿ ವಿಧ್ವಂಸಕ ಕೃತ್ಯ ನಡೆಸಲು ಯತ್ನಿಸಿದ ಪ್ರಕರಣವನ್ನು ರೈಲ್ವೆ ರಕ್ಷಣಾ ಪಡೆ ಪತ್ತೆ ಹಚ್ಚುವ ಮೂಲಕ ಸಂಭವಿಸಬಹುದಾದ ಅನಾಹುತವನ್ನು ತಪ್ಪಿಸಿದೆ.
ಚಾಮರಾಜನಗರದಿಂದ ಮೈಸೂರಿಗೆ ಬರುತ್ತಿದ್ದ ಎಕ್ಸ್ ಪ್ರೆಸ್ ರೈಲು ಗಾಡಿ ಸಂ. 06275 ರ ಲೋಕೋ ಪೈಲಟ್ (ಚಾಲಕ) ನಂಜನಗೂಡು ಮತ್ತು ಕಡಕೊಳ ರೈಲ್ವೆ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ಸಂಭಾವ್ಯ ಅನಾಹುತವನ್ನು ತಪ್ಪಿಸಿ ಅತ್ಯಂತ ಜಾಗರೂಕವಾದ ಶ್ಲಾಘನೀಯವಾದ ಕಾರ್ಯ ಮಾಡಿದ್ದಾರೆ. ರೈಲ್ವೆ ಎಂಜಿನ್ ನ ಚಾಲಕನ ತ್ವರಿತ ಪ್ರತಿಕ್ರಿಯೆಯ ಕಾರಣವಾಗಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕಾಪಾಡಲಾಗಿದ್ದು ರೈಲನ್ನು ಧ್ವಂಸಗೊಳಿಸುವ ದುರುದ್ದೇಶಪೂರಿತ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸೋಮಯ್ ಮರಾಂಡಿ, ಭಜನು ಮುರ್ಮು ಮತ್ತು ದಸಮತ್ ಮರಾಂಡಿ ಎಂದು ಗುರುತಿಸಲಾದ ಮೂವರು ವ್ಯಕ್ತಿಗಳನ್ನು ರೈಲ್ವೆ ಸಂರಕ್ಷಣಾ ಪಡೆ ಮತ್ತು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಮೂವರೂ ಆರೋಪಿಗಳು ಉದ್ದೇಶಪೂರ್ವಕವಾಗಿ ಕಿಲೋ ಮೀಟರ್. ನಂ 19/200-300ರಲ್ಲಿ ಹಳಿಗಳ ಮೇಲೆ ಕಬ್ಬಿಣದ ಸ್ಲೀಪರ್ ಮತ್ತು ಮರದ ದಿಮ್ಮಿಗಳನ್ನು ಇರಿಸಿದ್ದರು. ಇದರಿಂದಾಗಿ ರೈಲು ಗಾಡಿ ಸಂಖ್ಯೆ 06275 ಅನ್ನು ಬಲವಂತವಾಗಿ ನಿಲ್ಲಿಸಬೇಕಾಯಿತು.
ಈ ಕುರಿತು ಮಾಹಿತಿ ಪಡೆದ ಮೈಸೂರಿನ ರೈಲ್ವೆ ಸಂರಕ್ಷಣಾ ದಳದ ಸಹಾಯಕ ರಕ್ಷಣಾ ಆಯುಕ್ತ ಎಂ.ಎನ್.ಎ.ಖಾನ್, ಪೋಸ್ಟ್ ಕಮಾಂಡರ್ ಲ ಕೆ.ವಿ.ವೆಂಕಟೇಶ ಮತ್ತು ಅವರ ತಂಡ, ಆರ್‌ಪಿಎಫ್ ನ ಶ್ವಾನ ದಳ ಘಟನಾ ಸ್ಥಳಕ್ಕೆ ಕ್ಷಿಪ್ರವಾಗಿ ತೆರಳಿ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಒಡಿಶಾದ ಮಯೂರ್‌ಬಂಜ್ ನ ಬಂಗಿರಿಪೋಸಿದ ಜಲ್ದಿಹಾ ಮೂಲದ ಸೋಮಯ್ ಮರಾಂಡಿ ಎಂಬಾತ ಸ್ಥಳದಲ್ಲಿ ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ, ತನ್ನ ಸಹಚರರೊಂದಿಗೆ
ವಿಧ್ವಂಸಕ ಕೃತ್ಯದ ಯತ್ನವನ್ನು ಒಪ್ಪಿಕೊಂಡಿದ್ದಾನೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಮೈಸೂರಿನ ರೈಲ್ವೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಆರೋಪಿಗಳವಿರುದ್ದ ರೈಲ್ವೆ ಕಾಯಿದೆ-1989ರ ಅನ್ವಯ Cr.No.39/2023 U/s 150(1)(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಕುರಿತಂತೆ ತನಿಖೆಯು ನಡೆಯುತ್ತಿದ್ದು ಜೀವಾವಧಿವರೆಗಿನ ಶಿಕ್ಷೆಗೆ ಗುರಿಯಾಗಬಹುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ
ಘಟನೆಯ ಕಾರಣಕ್ಕಾಗಿ ರೈಲು ಸಂಖ್ಯೆ 06275ರ ಸಂಚಾರವನ್ನು ತಡೆಹಿಡಿದಿದ್ದ ಹಿನ್ನೆಲೆಯಲ್ಲಿ ಆ ಮಾರ್ಗದ ರೈಲುಗಳ ಸಂಚಾರದಲ್ಲಿ ಕೆಲ ನಿಮಿಷಗಳ ಕಾಲ ವ್ಯತ್ಯಯ ಉಂಟಾಗಿತ್ತು.
ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್ ರವರು ರೈಲಿನ ಚಾಲಕನ ಸಮಯೋಚಿತ ಕ್ರಮ ಮತ್ತು ಭದ್ರತಾ ಪಡೆಗಳ ತ್ವರಿತ ಪ್ರತಿಕ್ರಿಯೆ ಶ್ಲಾಘಿಸಿ, ಪ್ರಯಾಣಿಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ವಿಚಾರಿಸಿಕೊಂಡು ಕೃತಜ್ಞತೆ ಸಲ್ಲಿಸಿದರು.
ಹಳಿಗಳ ಮೇಲೆ ಇಂತಹ ಕೃತ್ಯದಲ್ಲಿ ತೊಡಗಿ ಪ್ರಯಾಣಿಕರಿಗೆ ದೊಡ್ಡ ಆಪತ್ತು ತರುವ ಮತ್ತು ಜೀವಹಾನಿ ಉಂಟುಮಾಡುವ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಂತಹ ಚಟುವಟಿಕೆಗಳಲ್ಲಿ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದರೆ ಅವರ ವಿರುದ್ಧ ರೈಲ್ವೆ ಆಡಳಿತವು ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
The Loco Pilot of Train No. 06275, running between Chamarajanagar and Mysuru has averted a potential disaster on the railway route between Nanjangud and Kadakola Railway Stations on Nov. 12 evening. The quick response of the Loco Pilot ensured the safety of passengers and prevented a malicious attempt to wreck the train.
20-02-25 10:06 pm
Bangalore Correspondent
Kalaburagi farmers protest, crocodile: ಕಲಬುರಗ...
20-02-25 08:59 pm
Chikkamagaluru Car Murder, Body Found; ಚಿಕ್ಕಮ...
20-02-25 06:59 pm
Chikkaballapur, Muzrai scam, Revenue Inspecto...
20-02-25 04:45 pm
ಉದಯಗಿರಿ ಗಲಭೆ ಪ್ರಕರಣ ; ಪ್ರಚೋದನಕಾರಿ ಭಾಷಣ ಮಾಡಿದ್...
20-02-25 02:47 pm
19-02-25 11:00 pm
HK News Desk
ಬಾಲಕನಿದ್ದಾಗ ನುಂಗಿದ್ದ ಪೆನ್ ಕ್ಯಾಪ್ ; 21 ವರ್ಷ ಕಳ...
19-02-25 06:41 pm
Maha Kumbh river, NGT Board: ಕುಂಭಮೇಳ ನದಿ ನೀರು...
19-02-25 01:54 pm
ಇಬ್ಬರು ಹೆಂಡಿರ ಮುದ್ದಿನ ಗಂಡ ; ವಾರದ 3 ದಿನ ಅಲ್ಲಿ....
18-02-25 10:49 pm
Hindu idols Bishop House, Pala diocese, Kera...
18-02-25 10:45 pm
21-02-25 12:40 am
Giridhar Shetty, Mangaluru
Protest Mangalore, 400 KV, Catholic sabha: ಉಡ...
20-02-25 06:48 pm
Kmc Mangalore, hospital: 2 ವರ್ಷದ ಮಗುವಿನ ಗಂಟಲಲ...
19-02-25 01:56 pm
Satish Jarkiholi, Mangalore: ಕೆಪಿಸಿಸಿ ಅಧ್ಯಕ್ಷ...
18-02-25 12:36 pm
Dinesh Gundurao, Munner katipalla, Sand Mafia...
17-02-25 10:56 pm
20-02-25 01:22 pm
Mangalore Correspondent
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm
Madikeri police, Fake Scheme, Mangalore crime...
18-02-25 06:04 pm
Mangalore Crime, Surathkal, Car: ಮದುವೆ ಸಮಾರಂಭ...
18-02-25 12:11 pm