ಬ್ರೇಕಿಂಗ್ ನ್ಯೂಸ್
17-11-23 03:21 pm Bangalore Correspondent ಕರ್ನಾಟಕ
ಬೆಂಗಳೂರು, ನ 17: ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನಿಂದ ಪ್ರೀತಿ ಹೆಸರಲ್ಲಿ ವಂಚನೆಯ ಆರೋಪ ಕೇಳಿಬಂದಿದೆ. ಎಂಪಿ ದೇವೆಂದ್ರಪ್ಪ ಅವರ ಮಗನ ವಿರುದ್ಧ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ.
ಮೈಸೂರಿನಲ್ಲಿ ಲೆಕ್ಚರರ್ ಆಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ ಬೆಂಗಳೂರು ಮೂಲದ ಯುವತಿಗೆ ವಂಚಿಸಿರುವುದಾಗಿ ಆರೋಪಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ಸ್ನೇಹಿತರ ಮೂಲಕ 42 ವರ್ಷದ ರಂಗನಾಥ್‌ಗೆ 24 ವರ್ಷದ ಯುವತಿಯ ಪರಿಚಯವಾಗಿತ್ತು. ನಂತರ ಯುವತಿಯೊಂದಿಗೆ ರಂಗನಾಥ್ ಲವ್ವಿಡವ್ವಿ ಶುರುವಾಗಿದೆ.
ಕಳೆದ ಜನವರಿಯಲ್ಲಿ ಮೈಸೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಇಬ್ಬರೂ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಬಳಿಕ ಯುವತಿ ರಂಗನಾಥ್‌ಗೆ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಳು. ಆದರೆ ಬಳಿಕ ರಂಗನಾಥ್ ಯುವತಿಯನ್ನು ಕಡೆಗಣಿಸಲು ಪ್ರಾರಂಭಿಸಿದ್ದರು. ನಿನ್ನನ್ನು ಮದುವೆ ಆಗಲ್ಲ, ಏನು ಮಾಡ್ತೀಯೋ ಮಾಡಿಕೋ ಎಂದು ರಂಗನಾಥ್ ಹೇಳಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ.
ಇದೆಲ್ಲದರ ಬಳಿಕ ಯುವತಿ ರಂಗನಾಥ್ ವಿಚಾರವನ್ನು ದೇವೇಂದ್ರಪ್ಪ ಅವರ ಗಮನಕ್ಕೆ ತಂದಿದ್ದಾಳೆ. ಆದರೆ ಯುವತಿಯ ವಿರುದ್ಧ ಎಂಪಿ ದೇವೇಂದ್ರಪ್ಪ ಗರಂ ಆಗಿದ್ದಾರೆ. ಕೊನೆಗೆ ಬೇರೆ ಯಾವ ದಾರಿಯೂ ಕಾಣದೆ ಸಂತ್ರಸ್ತೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ.
ಇದೀಗ ಎಂಪಿ ದೇವೇಂದ್ರಪ್ಪ ಅವರ ಮಗ ರಂಗನಾಥ್ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
Ballari BJP MP Devendrappa son accused of cheating woman after Sex, case registered in Bengalore. A 24-year-old woman who is a resident of Vijay Nagar in Bengaluru registered an FIR at the Basavanagudi Women’s Police Station. Rangath, 42-year old resident of Mysuru and son of Ballari MP has also registered a counter complaint against the woman in Mysuru alleging that he was blackmailed by the woman
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am