ಬ್ರೇಕಿಂಗ್ ನ್ಯೂಸ್
17-11-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ನ.17: ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ್ದರೂ ತಾನೇ ಒರಿಜಿನಲ್ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಂದು ಹೇಳಿಕೆ ನೀಡುತ್ತಿದ್ದ ಸಿ.ಎಂ. ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದಲೇ ಅಮಾನತುಗೊಳಿಸಲಾಗಿದೆ.
ಈ ಬಗ್ಗೆ ಜನತಾದಳ (ಎಸ್) ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಹೆಸರಿನಲ್ಲಿಯೇ ಪತ್ರಿಕಾ ಹೇಳಿಕೆ ನೀಡಲಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜೊತೆಗೆ ಮೈತ್ರಿ ನಿರ್ಧಾರ ಮಾಡಲಾಗಿದೆ. ಸೆಪ್ಟಂಬರ್ 6, 10 ಮತ್ತು ಅಕ್ಟೋಬರ್ 1ರಂದು ಪಕ್ಷದ ಸಭೆಗಳಲ್ಲಿ ಈ ಬಗ್ಗೆ ಸಿಎಂ ಇಬ್ರಾಹಿಂ ಉಪಸ್ಥಿತಿಯಲ್ಲೇ ಎನ್ ಡಿಎ ಮೈತ್ರಿಕೂಟ ಸೇರುವ ಬಗ್ಗೆ ನಿರ್ಧಾರ ಮಾಡಲಾಗಿತ್ತು. ಆದರೆ ಸಭೆಯ ಬಳಿಕ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಭಿನ್ನ ರೀತಿಯ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅ.19ರಂದು ಜೆಡಿಎಸ್ ಪಕ್ಷದ ರಾಜ್ಯ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಆದೇಶ ಮಾಡಲಾಗಿತ್ತು.
ಈ ನಡುವೆ, ಚಿಂತನ- ಮಂಥನ ಹೆಸರಲ್ಲಿ ಪಕ್ಷದ ಸಮಾನ ಮನಸ್ಕರ ಸಭೆಯನ್ನು ಕರೆದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ವಿರೋಧಾಭಾಸದ ಹೇಳಿಕೆಯನ್ನು ನೀಡಿದ್ದರು. ಪಕ್ಷದ ನಾಯಕರ ವಿರುದ್ಧವೇ ಬೇಜವಾಬ್ದಾರಿಯುತ ಹೇಳಿಕೆಯನ್ನ ನೀಡತೊಡಗಿದ್ದರು. ಆನಂತರ, ನ.15ರಂದು ತಿರುವನಂತಪುರದಲ್ಲಿ ಪಕ್ಷದ ಹೆಸರಿನಲ್ಲಿ ಅನಧಿಕೃತವಾಗಿ ನಡೆದ ಸಭೆಯಲ್ಲಿ ಸಿಎಂ ಇಬ್ರಾಹಿಂ ಪಾಲ್ಗೊಂಡು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆ. ಈಮೂಲಕ ಪಕ್ಷದ ಶಾಸಕಾಂಗ ಸಭೆ, ಪಕ್ಷದ ರಾಜ್ಯ ಪರಿಷತ್, ಪಕ್ಷದ ಸಭೆ, ಕೋರ್ ಕಮಿಟಿಗಳಲ್ಲಿ ಒಮ್ಮತದ ನಿರ್ಣಯವಾಗಿದ್ದರೂ ಬಹಿರಂಗವಾಗಿ ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Chief Minister C.M. Shivakumar, who has been claiming that he is the state president of the original JD(S) despite being removed from the post of state president, has said that he is the state president of the party. Ibrahim has been suspended from the JD(S).
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm