ಡೀಪ್‌ಫೇಕ್ ಮಹಾಮಾರಿಗೆ ಎಚ್ಚೆತ್ತ ಬೆಂಗಳೂರು ಪೊಲೀಸರು ; 1930 ಸಂಖ್ಯೆಗೆ ಕರೆ ಮಾಡಿ, ನಿಮ್ಮನ್ನು ರಕ್ಷಿಸಲು ನಾವು ನಿಮ್ಮೊಂದಿಗಿದ್ದೇವೆ ಎಂದು ಟ್ವೀಟ್ 

18-11-23 05:50 pm       Bangalore Correspondent   ಕರ್ನಾಟಕ

ನಟಿಯರಾದ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‍, ಕಾಜೋಲ್ ಸೇರಿದಂತೆ ಅನೇಕ ಕಲಾವಿದರ ಮತ್ತು ಸಾಮಾನ್ಯ ಮಹಿಳೆಯರ ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ.

ಬೆಂಗಳೂರು, ನ 18: ನಟಿಯರಾದ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‍, ಕಾಜೋಲ್ ಸೇರಿದಂತೆ ಅನೇಕ ಕಲಾವಿದರ ಮತ್ತು ಸಾಮಾನ್ಯ ಮಹಿಳೆಯರ ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಡೀಪ್‌ಫೇಕ್ ಕಾಟಕ್ಕೆ ಬೇಸತ್ತ ಪ್ರತಿಯೊಬ್ಬರೂ ದುರುಳರಿಗೆ ಅತೀ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇದನ್ನು ಕೂಡಲೇ ತಡೆಗಟ್ಟಬೇಕು ಎನ್ನುವ ಆಗ್ರಹ ಕೂಡ ಮಾಡಿದ್ದರು.

ಇದೀಗ ಬೆಂಗಳೂರು ಪೊಲೀಸರು  ಡೀಪ್‌ಫೇಕ್ ವಿರುದ್ಧ ತೊಡೆತಟ್ಟಿದ್ದಾರೆ. ಇಂತಹ ವಿಡಿಯೋಗಳಿಂದ ನೀವು ಸಂಕಷ್ಟಕ್ಕೆ ಸಿಲುಕಿದ್ದರೆ, ಸಹಾಯವಾಣಿಗೆ ಕರೆ ಮಾಡುವಂತೆ ಮನವಿ ಮಾಡಿದ್ದಾರೆ. ಕರೆ ಮಾಡಬೇಕಾದ ಹೆಲ್ಪ್ ಲೈನ್ ನಂಬರ್ ಕೂಡ ನೀಡಿದ್ದಾರೆ. ಯಾರಾದರೂ ಅಂತಹ ವಿಡಿಯೋಗಳಿಂದ ನೊಂದಿದ್ದೀರಾ? 1930 ಸಂಖ್ಯೆಗೆ ಕರೆ ಮಾಡಬಹುದು.

Rashmika Mandanna, Katrina Kaif, now Kajol: Why are we seeing sudden uptick  in deepfake videos

ಏನಿದು ಡೀಪ್‌ಫೇಕ್‌ ತಂತ್ರಜ್ಞಾನ?

ಒಬ್ಬರ ದೇಹಕ್ಕೆ ಇನ್ನೊಬ್ಬರ ತಲೆಯನ್ನು ಜೋಡಿಸಿ ಎಡಿಟಿಂಗ್‌ ಮಾಡುತ್ತಿದ್ದ ಫೋಟೋ, ವೀಡಿಯೋಗಳು ಸಾಮಾನ್ಯವಾಗಿದ್ದವು. ಇವು ಎಡಿಟಿಂಗ್‌ ಆಗಿರುವ ಫೋಟೋ/ವೀಡಿಯೋ ಎಂಬುದು ನೋಡಿದಾಕ್ಷಣ ತಿಳಿಯುತ್ತಿತ್ತು. ಇಲ್ಲವೇ ಸ್ವಲ್ಪವಾದರೂ ಅನುಮಾನ ಮೂಡುತ್ತದೆ. ಆದರೆ ಡೀಪ್‌ಫೇಕ್‌ ತಂತ್ರಜ್ಞಾನದಲ್ಲಿ ಆ ಯಾವುದೇ ಅನುಮಾನ ಬರುವುದಿಲ್ಲ. ಆ ರೀತಿ ಫೋಟೋ/ವೀಡಿಯೋ ಎಡಿಟ್‌ ಮಾಡಲಾಗುತ್ತದೆ. ವ್ಯಕ್ತಿಯ ದೇಹ ಮತ್ತು ಮುಖಕ್ಕೆ ಕೊಂಚವೂ ವ್ಯತ್ಯಾಸ ಇಲ್ಲದಂತೆ ವೀಡಿಯೋಗಳನ್ನ ಸೃಷ್ಟಿಸಲಾಗುತ್ತದೆ. ವೀಡಿಯೋ ನೋಡಿದರೆ ‘ಇದು ಬೇರೆ ಯಾರೂ ಅಲ್ಲ.. ಅವರೇ’ ಎನ್ನುವಷ್ಟು ನಿಖರತೆಯಿಂದ ಕೂಡಿರುತ್ತದೆ.

Katrina Kaif Falls Prey To Deepfake, Morphed Towel Scene From Tiger 3 Goes  Viral

Rashmika Mandanna Breaks Silence On Her Viral Deepfake Video

ಎಐ (ಕೃತಕ ಬುದ್ದಿಮತ್ತೆ) ಮಷಿನ್‌ ಲರ್ನಿಂಗ್‌ ಸಹಾಯದಿಂದ ಮಾರ್ಫಿಂಗ್‌ ವೀಡಿಯೋ, ಫೋಟೋ ಸೃಷ್ಟಿಸುವುದಕ್ಕೆ ಡೀಪ್‌ಫೇಕ್‌ ಎಂದು ಕರೆಯಲಾಗುತ್ತದೆ. ಒಬ್ಬ ವ್ಯಕ್ತಿಯಂತೆಯೇ ಸೇಮ್‌ ಟು ಸೇಮ್‌ ಡೂಪ್‌ ಸೃಷ್ಟಿಸಬಹುದು. ವೀಡಿಯೋ/ಫೋಟೋ ನೋಡಿದಾಗ ಇದು ಅಸಲಿಯೇ ಅಥವಾ ನಕಲಿಯೇ ಎಂಬುದು ತಿಳಿಯುವುದೇ ಇಲ್ಲ. ಈ ತಂತ್ರಜ್ಞಾನ ಬಳಸಿ ಯಾರನ್ನು ಬೇಕಾದರೂ ಸ್ಕ್ರೀನ್‌ ಮೇಲೆ ತೋರಿಸಬಹುದು. ಹಿಂದಿ, ಇಂಗ್ಲಿಷ್‌ ಅಷ್ಟೇ ಬರುವ ವ್ಯಕ್ತಿ ಕನ್ನಡದಲ್ಲಿ ಮಾತನಾಡಿದಂತೆಯೂ, ಹಾಡಿದಂತೆಯೂ ತೋರಿಸಬಹುದು. ಕೆಲವೊಮ್ಮೆ ಈ ತಂತ್ರಜ್ಞಾನ ಲಾಭದಾಯಕ ಎನಿಸುತ್ತದೆ. ಆದರೆ ಅಷ್ಟೇ ದುರ್ಬಳಕೆ ಕೂಡ ಆಗುತ್ತಿದೆ. ಅದಕ್ಕೆ ಉತ್ತಮ ಉದಾಹರಣೆ ರಶ್ಮಿಕಾ ಮಂದಣ್ಣ ಪ್ರಕರಣ.

Deepfake Viral Video Featuring Kajol Surfaces; Police Questions Bihar Youth  Over Rashmika Mandanna's Video

ಡೀಪ್‌ಫೇಕ್‌ ಅಪರಾಧಕ್ಕೆ ಶಿಕ್ಷೆ ಏನು?

ಡೀಪ್‌ಫೇಕ್ ಸೈಬರ್‌ ಅಪರಾಧಕ್ಕೆ ಸಂಬಂಧಿಸಿದಂತೆ ಭಾರತ ಕಾನೂನಿನಲ್ಲಿ ಸ್ಪಷ್ಟವಾದ ವ್ಯಾಖ್ಯಾನ ಇಲ್ಲ. ಆದರೆ ಈ ಅಪರಾಧದ ವಿರುದ್ಧ ಇತರ ಹಲವಾರು ಕಾನೂನು ಕ್ರಮಗಳನ್ನು ಬಳಸಿಕೊಳ್ಳಬಹುದು.

  • ಮಾಹಿತಿ ತಂತ್ರಜ್ಞಾನ ಕಾಯಿದೆ 2000 ಸೆಕ್ಷನ್‌ 66ರ ಪ್ರಕಾರ, ಐಡೆಂಟಿಫಿಕೇಷನ್‌ ಥೆಫ್ಟ್‌ (ಗುರುತು ಕಳವು) ಮಾಡಿ ಅದನ್ನು ಅನ್ಯ ಉದ್ದೇಶಗಳಿಗೆ ಬಳಸಿದರೆ ಅದಕ್ಕೆ 3 ವರ್ಷ ಜೈಲು ಶಿಕ್ಷೆ. ಜೊತೆಗೆ 1 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ.
  • ಐಟಿ ಕಾಯಿದೆ ಸೆಕ್ಷನ್‌ 66ಇ ಪ್ರಕಾರ, ಖಾಸಗಿ ಹಕ್ಕು ಉಲ್ಲಂಘನೆಗಾಗಿ 3 ವರ್ಷ ಜೈಲು ಮತ್ತು 2 ಲಕ್ಷದ ವರೆಗೆ ದಂಡ ವಿಧಿಸಲಾಗುವುದು.

 

Deepfake effect, Bangalore Police release helpline number for victims for help 1930.