ಬ್ರೇಕಿಂಗ್ ನ್ಯೂಸ್
27-11-23 10:08 pm Bangalore Correspondent ಕರ್ನಾಟಕ
ಬೆಂಗಳೂರು, ನ 27: ಬೆಳ್ಳಂ ಬೆಳಗ್ಗೆ ಸಿಎಂ ಗೃಹ ಕಚೇರಿ ಕೃಷ್ಣಾದ ಮುಂದೆ ಸರದಿ ಸಾಲಿನಲ್ಲಿ ನಿಂತ ಜನರ ಸಾಲು. ಕೈಯಲ್ಲಿ ಮನವಿ ಪತ್ರಗಳನ್ನು ಹಿಡಿದುಕೊಂಡು ಪರಿಹಾರದ ನಿರೀಕ್ಷೆಯಲ್ಲಿದ್ದ ಹಿರಿಯರು. ನಡೆಯಲು ಸಾಧ್ಯವಾಗದೆ ಗಾಲಿ ಖುರ್ಚಿಯಲ್ಲಿ ಬಂದು ಸಿಎಂ ಭೇಟಿ ಮಾಡಿ ಸಮಸ್ಯೆ ತೋಡಿಕೊಂಡ ವಿಶೇಷ ಚೇತನರು. ಎಲ್ಲರ ಸಮಸ್ಯೆಗಳನ್ನು ಆಲಿಸಿ ಕೆಲವಕ್ಕೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿಎಂ ಸಿದ್ದರಾಮಯ್ಯ
ನವೀನ್ ಎಂಬ ಉಪನ್ಯಾಸಕರೊಬ್ಬರು ಕಿಡ್ನಿ ಸಮಸ್ಯೆ ಎದುರಿಸುತ್ತಿರುವ ಐದು ವರ್ಷದ ಮಗುವನ್ನು ಜನತಾ ದರ್ಶನಕ್ಕೆ ಕರೆತಂದು ಕನಕಪುರಕ್ಕೆ ವರ್ಗಾವಣೆ ಮಾಡುವಂತೆ ಸಿಎಂ ಬಳಿ ಮನವಿ ಮಾಡಿದರು. ತಮ್ಮ ಐದು ವರ್ಷದ ಮಗು ಕಿಡ್ನಿ ಸಿಂಡ್ರೋಮ್ ನಿಂದ ಬಳಲುತ್ತಿದೆ. ಆದರೆ ನಮ್ಮನ್ನು ಅರಸೀಕೆರೆ ಶಾಲೆಗೆ ವರ್ಗಾವಣೆ ಮಾಡಲಾಗಿದೆ. ಕನಕಪುರಕ್ಕೆ ವರ್ಗಾಯಿಸುವಂತೆ ಮನವಿ ಮಾಡಿದರು. ಸದ್ಯ ಕನಕಪುರದಲ್ಲಿ ಹುದ್ದೆ ಖಾಲಿ ಇದ್ದು, ವೈದ್ಯಕೀಯ ಪ್ರಕರಣಗಳಲ್ಲಿ ತಮ್ಮ ಹುಟ್ಟೂರಿಗೆ ವರ್ಗಾವಣೆ ತೆಗೆದುಕೊಳ್ಳುವ ನಿಯಮ ಇದೆ. ಅದರಂತೆ ಕನಕಪುರಕ್ಕೆ ವರ್ಗಾವಣೆ ಮಾಡಿಕೊಡುವಂತೆ ಕೋರಿದರು. ಬಹಳಷ್ಟು ಸಮಸ್ಯೆ ಇದೆ. ಕನಕಪುರಕ್ಕೆ ವರ್ಗಾಯಿಸಿದರೆ ಮಗುವಿಗೆ ಉತ್ತಮ ಚಿಕಿತ್ಸೆ ಕೊಡಿಸಬಹುದು ಎಂದು ಮನವಿ ಮಾಡಿದರು. ಈ ಸಮಸ್ಯೆ ಆಲಿಸಿದ ಸಿಎಂ ಸಿದ್ದರಾಮಯ್ಯ ಕ್ರಮ ತೆಗೆದುಕೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮಧ್ಯಾಹ್ನದ ಊಟದ ಬಿಡುವಿನಲ್ಲಿ ಊಟಕ್ಕೆ ಎಂದು ಮನೆಗೆ ತೆರಳಲು ಎದ್ದ ಮುಖ್ಯಮಂತ್ರಿಗಳು, ಬಳಿಕ ಅಹವಾಲು ಸಲ್ಲಿಸಲು ಬಂದಿರುವವರ ಸಂಖ್ಯೆ ಇನ್ನೂ ಸಿಕ್ಕಾಪಟ್ಟೆ ಇದೆ ಎಂದು ತಿಳಿದು, ಅಹವಾಲು ಸ್ವೀಕರಿಸುವ ಟೇಬಲ್ಗೇ ಊಟ ತರಿಸಿಕೊಂಡು ಅಲ್ಲೇ ಕುಳಿತು ಊಟ ಮಾಡಿದರು.
3,812 ಅರ್ಜಿಗಳ ಸ್ವೀಕಾರ:
ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟಾರೆ 3812 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ 2862 ಅರ್ಜಿಗಳನ್ನು ಈಗಾಗಲೇ ಐಪಿಜಿಆರ್‌ಎಸ್ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, 950 ಅರ್ಜಿಗಳನ್ನು ನೇರವಾಗಿ ಸ್ವೀಕರಿಸಲಾಗಿದೆ. ಇವುಗಳನ್ನೂ ಸಹ ಐಪಿಜಿಆರ್‌ಎಸ್ ತಂತ್ರಾಂಶದಲ್ಲಿ ನೋಂದಾಯಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಹಾಸನ ಜಿಲ್ಲೆಯ ಮಹೇಂದ್ರ ಅವರ ಪತ್ನಿ ಸರ್ಕಾರಿ ಉದ್ಯೋಗದಲ್ಲಿದ್ದಾರೆ. ಅವರಿಗೆ ಸ್ಥಳೀಯ ಅಧಿಕಾರಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂದು ಮಹೇಂದ್ರ ಎಂಬುವವರು ದೂರಿದರು. ಸಿಎಂ ಅವರನ್ನು ಪದೇ ಪದೇ ಅಂಕಲ್ ಎಂದು ಕರೆದ ಈ ವ್ಯಕ್ತಿ, ಅವರ ಅಂಧ ಪತ್ನಿಗೆ ತೊಂದರೆ ಕೊಡುವ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಸುಮಾರು ಐದು ನಿಮಿಷಗಳ ಕಾಲ ಅವರ ಸಮಸ್ಯೆ ಆಲಿಸಿದ ಸಿಎಂ ಪರಿಹಾರದ ಭರವಸೆ ನೀಡಿದರು.
Karnataka Chief Minister Siddaramaiah is hosting a day-long Janata Darshan on Monday, November 27, on the premises of the Chief Minister’s home office Krishna in Bengaluru. Thousands of people from across the state have gathered to express their grievances directly to the CM.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 03:24 pm
Mangalore Correspondent
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm