Bangalore School Bomb Mail: ಬಾಂಬ್ ಮೇಲ್ ; ಟೈಪ್ ಮಾಡಿದ್ದನ್ನ ನೋಡಿದ್ರೆ ಹೈ ಲೆವೆಲ್ ಟೆರರಿಸ್ಟ್ ರೀತಿ ಕಾಣತ್ತದೆ ಎಂದ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮೂಲ‌ ಪತ್ತೆ ಹಚ್ಚುವವರೆಗೂ ಬಿಡೋದಿಲ್ಲ ಎಂದ  ಗೃಹ ಸಚಿವ

01-12-23 05:49 pm       Bangalore Correspondent   ಕರ್ನಾಟಕ

ರಾಜಧಾನಿಯ ವಿವಿಧ ಶಾಲೆಗಳಿಗೆ ಇಂದು ಬಾಂಬ್ ಇಟ್ಟಿರುವುದಾಗಿ ಆಗಂತುಕರು ಬೆದರಿಕೆ ಹಾಕಿದ್ದಾರೆ. 15ಕ್ಕೂ ಹೆಚ್ಚು ಶಾಲೆಗಳ ಆಡಳಿತ ಮಂಡಳಿಯ ಇ-ಮೇಲ್​ಗೆ ಬೆದರಿಕೆ ಸಂದೇಶ ರವಾನಿಸಲಾಗಿದೆ.

ಬೆಂಗಳೂರು, ಡಿ 01: ರಾಜಧಾನಿಯ ವಿವಿಧ ಶಾಲೆಗಳಿಗೆ ಇಂದು ಬಾಂಬ್ ಇಟ್ಟಿರುವುದಾಗಿ ಆಗಂತುಕರು ಬೆದರಿಕೆ ಹಾಕಿದ್ದಾರೆ. 15ಕ್ಕೂ ಹೆಚ್ಚು ಶಾಲೆಗಳ ಆಡಳಿತ ಮಂಡಳಿಯ ಇ-ಮೇಲ್​ಗೆ ಬೆದರಿಕೆ ಸಂದೇಶ ರವಾನಿಸಲಾಗಿದೆ.

 ಈ ಕುರಿತು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಪ್ರತಿಕ್ರಿಯಿಸಿ, ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಹಾಗೂ ಸ್ಕ್ವೈಡ್‌ಗಳನ್ನು ಕಳುಹಿಸಿ ತಪಾಸಣೆ ನಡೆಸಲಾಗುತ್ತದೆ. ಕಟ್ಟೆಚ್ಚರ ವಹಿಸುವಂತೆ ಸಚಿವರು ನಿರ್ದೇಶಿಸಿದ್ದಾರೆ. ಬೆದರಿಕೆ ಬಂದಿರುವ ಶಾಲೆಗಳಲ್ಲಿ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಕಳೆದ ವರ್ಷ ಕೂಡಾ ಬೆದರಿಕೆ ಬಂದಿತ್ತು. ಆಗ ನಮ್ಮ ಸಿಬ್ಬಂದಿ ಎಚ್ಚೆತ್ತುಕೊಂಡು ಆರೋಪಿಗಳನ್ನು ಪತ್ತೆ ಮಾಡಿದ್ದರು. ಅವುಗಳೆಲ್ಲವೂ ಹುಸಿ ಬೆದರಿಕೆ ಕರೆಗಳಾಗಿದ್ದವು. ಈ ಪ್ರಕರಣವನ್ನೂ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.

Special squad to be set up in Karnataka to check moral policing: Home  minister G Parameshwara | India News - Times of India

ಮೂಲ‌ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ:

 ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ನಗರ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇನೆ. ಬಾಂಬ್ ಬೆದರಿಕೆಯ ಇಮೇಲ್ ಬಗ್ಗೆ ಪರಿಶಿಲೀಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೂಲ‌ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ. ತುಮಕೂರಿನಿಂದ ಬೆಂಗಳೂರಿಗೆ ವಾಪಸ್ ಆದ ನಂತರ ಇಲಾಖೆಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಪೋಷಕರು ಮತ್ತು ಮಕ್ಕಳು ಆತಂಕಪಡುವುದು ಬೇಡ ಎಂದು ತಿಳಿಸಿದ್ದಾರೆ.

Not In A Hurry': Karnataka Deputy CM DK Shivakumar As Kumaraswamy Remarks  'Let Him Be

ಡಿಸಿಎಂ ಶಿವಕುಮಾರ್​ಪ್ರತಿಕ್ರಿಯಿಸಿ, ಹಿರಿಯ ಪೊಲೀಸ್​ ಅಧಿಕಾರಿಗಳು ಸದಾಶಿವ ನಗರದ ನೀವ್ ಸ್ಕೂಲ್​​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ತನಿಖೆ ನಡೆಸಲು ಸೂಚಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ:

ಬಸವೇಶ್ವರನಗರದ ಎನ್ಎಎಫ್ಎಲ್ ಶಾಲೆಗೆ ಭೇಟಿ ನೀಡಿದ ಬಳಿಕ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಪೊಲೀಸ್ ಕಮೀಷನರ್ ಜೊತೆ ಮಾತನಾಡಿದ್ದೇನೆ. ಟೈಪ್ ಮಾಡಿದ್ದನ್ನು ನೋಡಿದರೆ ಹೈ ಲೆವೆಲ್ ಟೆರರಿಸ್ಟ್ ರೀತಿ ಕಾಣುತ್ತಿದೆ. ಇವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಇಲ್ಲಿ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಬಂದಿದ್ದು, ಏನೂ ಸಿಕ್ಕಿಲ್ಲ. ಸದ್ಯ 15 ಶಾಲೆಗೆ ಬಾಂಬ್ ಮೇಲ್ ಬಂದಿದೆ. ಜನರಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ನಾನು ಕೂಡ ಭೇಟಿ ಮಾಡಿದ್ದೇನೆ ಎಂದರು.

BJP R Ashok says mail shows high level terrorist suspected on  bomb mail to schools in Bangalore. Home Minister has ordered for high level probe in this case.