ಬ್ರೇಕಿಂಗ್ ನ್ಯೂಸ್
02-12-23 10:16 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.2: ಶ್ರೀ ಗುರು ರಾಘವೇಂದ್ರ ಸಹಕಾರ ಸಂಘದ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಹಕರ ಠೇವಣಿ ಹಣ ಸೇರಿದಂತೆ ಬ್ಯಾಂಕಿನ ಹಣವನ್ನ ದುರುಪಯೋಗ ಪಡಿಸಿದ ಆರೋಪದಲ್ಲಿ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಯುಬಿ ವೆಂಕಟೇಶ್ ಒತ್ತಾಯಿಸಿದ್ದರು.
ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂಪಾಯಿ ಠೇವಣಿ ಇಟ್ಟಿದ್ದರು. ಸಾಲಗಾರರು, ಸಂಸ್ಥೆಯ ಆಡಳಿತ ಮಂಡಳಿ ಮತ್ತು ಉದ್ಯೋಗಿಗಳೊಂದಿಗೆ ಶಾಮೀಲಾಗಿ ನಕಲಿ ಠೇವಣಿ ಹಾಗೂ ನಿಶ್ಚಿತ ಠೇವಣಿಗಳ ಆಧಾರದಲ್ಲಿ ಭಾರಿ ಮೊತ್ತದ ಸಾಲ ಪಡೆದು ಮರು ಪಾವತಿಸದೆ ವಂಚಿಸಿದ್ದರು.
ಸಂಸ್ಥೆಯಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದಲ್ಲಿ ಠೇವಣಿ ಇಟ್ಟಿದ್ದರು. ಆದರೆ, ಸಂಸ್ಥೆಯ ಆಡಳಿತ ಮಂಡಳಿಯು ಸಾಲಗಾರರಿಂದ ಸೂಕ್ತ ಶ್ಯೂರಿಟಿ ಪಡೆಯದೆ ಸಾಲ ನೀಡಿತ್ತು. ಜತೆಗೆ ನಕಲಿ ಖಾತೆಗಳನ್ನು ಸೃಷ್ಟಿಸಿ ಸಾಲ ಮಂಜೂರು ಮಾಡಿತ್ತು.
ಪ್ರಕರಣದಲ್ಲಿ ಸಂಸ್ಥೆಯ ಅಧ್ಯಕ್ಷ ಸೇರಿದಂತೆ 4 ಮಂದಿಯನ್ನು ಬಂಧಿಸಲಾಗಿತ್ತು. ಅದಕ್ಕೂ ಮೊದಲು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಬಡ್ಡಿ ಠೇವಣಿದಾರರ ರಕ್ಷಣೆ ಕಾಯಿದೆ-2004 ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳಡಿ ಸಂಸ್ಥೆ ಹಾಗೂ ಇತರರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಳಿಕ ಇ.ಡಿ. ಅಧಿಕಾರಿಗಳು 2020ರಲ್ಲಿ ಪಿಎಂಎಲ್‌ಎ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.
The Karnataka government has ordered a CBI probe into the irregularities committed by Sri Guru Raghavendra Co-operative Society. Congress MLC U B Venkatesh had demanded a CBI probe into the alleged misappropriation of bank funds, including deposits of customers.
22-05-25 01:09 pm
HK News Desk
Bagalkot, Monkey Visits Animal Hospital: ಬಾಗಲ...
22-05-25 12:41 pm
Ola News, Suicide, Bangalore: ಓಲಾ ಕಂಪನಿಯ ಎಐ ವ...
21-05-25 09:16 pm
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm