ಬ್ರೇಕಿಂಗ್ ನ್ಯೂಸ್
04-12-23 05:50 pm HK News Desk ಕರ್ನಾಟಕ
ಮೈಸೂರು, ಡಿ 04: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಲಕ್ಷಾಂತರ ಮಂದಿಯ ಮನೆಸೂರೆಗೊಂಡಿದ್ದ ಆನೆ ಅರ್ಜುನ ಅಸುನೀಗಿದ್ದಾನೆ.
ಹಾಸನ ಜಿಲ್ಲೆಯಲ್ಲಿ ಆನೆ ಸೆರೆ ಕಾರ್ಯಾಚರಣೆ ನಡೆಯುವಾಗ ಒಂಟಿ ಸಲಗದೊಂದಿಗೆ ನಡೆದ ಸಂಘರ್ಷದಲ್ಲಿ ತಿವಿತಕ್ಕೊಳಗಾಗಿ ಅರ್ಜುನ ಆನೆ ಮೃತಪಟ್ಟಿದೆ.
64 ವರ್ಷದ ಅರ್ಜುನ ಆನೆ ಮೈಸೂರು ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಬಳ್ಳೆ ಶಿಬಿರದಲ್ಲಿತ್ತು. ದಸರೆಯಿಂದ ನಾಲ್ಕು ವರ್ಷದ ಹಿಂದೆ ನಿವೃತ್ತಿ ನೀಡಲಾಗಿತ್ತು. ಅಂಬಾರಿ ಹೊರದೆ ಇದ್ದರೂ ದಸರೆಯಲ್ಲಿ ಭಾಗಿಯಾಗುತ್ತಿತ್ತು. ನಂತರ ಆನೆ, ಹುಲಿ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳಲಾಗುತ್ತಿತ್ತು. ಈಗ ಆನೆ ಸೆರೆ ಕಾರ್ಯಾಚರಣೆ ವೇಳೆ ಹಾಸನ ಜಿಲ್ಲೆ ಎಸಳೂರು ಬಳಿ ಸೋಮವಾರ ಮಧ್ಯಾಹ್ನ ಮೃತಪಟ್ಟಿದೆ.
ಹತ್ತು ದಿನದಿಂದ ಹಾಸನ ಜಿಲ್ಲೆಯಲ್ಲಿ ಆನೆಗಳ ಸೆರೆ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೂ ಐದು ಆನೆಗಳನ್ನು ಸೆರೆ ಹಿಡಿಯಲಾಗಿದೆ. ಎಲ್ಲಾ ಕಾರ್ಯಾಚರಣೆಯಲ್ಲಿ ಅರ್ಜುನ ಆನೆ ಇತ್ತು. ಸೋಮವಾರ ಬೆಳಗ್ಗೆ ಸಕಲೇಶಪುರ ತಾಲ್ಲೂಕು ಎಸಳೂರಿನಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆ ಶುರುವಾಗಿದ್ದು, ಈ ವೇಳೆ ದುರಂತ ನಡೆದಿದೆ.
ಅತ್ಯಂತ ಬಲಶಾಲಿಯಾದ ಅರ್ಜುನ ಒಂಬತ್ತು ಬಾರಿ ಅಂಬಾರಿ ಹೊತ್ತಿದ್ದ. ಪುಂಡಾನೆಗಳನ್ನು ಪಳಗಿಸುವಲ್ಲಿಯೂ ಅರ್ಜುನ ನಿಸ್ಸೀಮನಾಗಿದ್ದ. ಈ ಹಿಂದೆ ಬಲರಾಮನ ನಿವೃತ್ತಿಯ ನಂತರ 2012ರಿಂದ ಜಂಬೂಸವಾರಿಯಲ್ಲಿ ಅಂಬಾರಿಯನ್ನು ಹೊರಲು ಆರಂಭಿಸಿದ್ದ. ಅದಕ್ಕೂ ಹಿಂದೆ ಒಮ್ಮೆ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದ. 2012ರಿಂದ 2019ರವರಗೆ ಒಟ್ಟು 8 ಬಾರಿ ಅಂಬಾರಿ ಹೊತ್ತಿರುವ ಅರ್ಜುನ ಗಾತ್ರದಲ್ಲಿ ಬಲಭೀಮನಾಗಿ ಎಲ್ಲರ ಗಮನ ಸೆಳೆದಿದ್ದ. ಗಜಪಡೆಯೊಂದಿಗೆ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಅರ್ಜುನ ತುಂಟಾಟ ಆಡುತ್ತಾ ತಾಲೀಮಿನಲ್ಲಿ ಶಿಸ್ತಿನ ಹೆಜ್ಜೆ ಹಾಕುತ್ತಿದ್ದ ಅರ್ಜುನನ್ನು ಈಗ ಮಾವುತ ವಿನು ನೋಡಿಕೊಳ್ಳುತ್ತಿದ್ದರು.
ಅರ್ಜುನ ಎಲ್ಲಾ ಆನೆಗಳಿಗಿಂತ ಹೆಚ್ಚು ಅಂದರೆ ಅಂದಾಜು 5725 ಕೆ.ಜಿ. ತೂಕ ಹೊಂದಿದ್ದ. ಈ ಮೂಲಕ ಅಂಬಾರಿ ಹೊತ್ತು ತಾನು ಶಕ್ತಿ ಶಾಲಿ ಎಂಬುದನ್ನು ನಿರೂಪಿಸಿದ್ದ. 2019ರವರೆಗೆ ಸುಸೂತ್ರವಾಗಿ ಅಂಬಾರಿ ಹೊತ್ತು ಗಮನ ಸೆಳೆದಿದ್ದ.
ಈ ಹಿಂದೆ ಈತನ ಉಸ್ತುವಾರಿಯನ್ನು ಮಾವುತ ದೊಡ್ಡಮಾಸ್ತಿ ನೋಡಿ ಕೊಳ್ಳುತ್ತಿದ್ದರು. ಅವರ ನಿಧನದ ಬಳಿಕ ವಿನು ಅವರು ಮಾವುತರಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದರು. ಹೆಚ್.ಡಿ.ಕೋಟೆಯ ಬಳ್ಳೆ ಶಿಬಿರದ ಅರ್ಜುನ 2.80 ಮೀಟರ್ ಎತ್ತರ, 3.75 ಮೀಟರ್ ಉದ್ದ ಹೊಂದಿದ್ದ. ಈತನನ್ನು 1968ರಲ್ಲಿ ಖೆಡ್ಡಾ ವಿಧಾನದಲ್ಲಿ ಕಾಕನಕೋಟೆ ಅರಣ್ಯ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು. ಒಂಬತ್ತು ಅಂಬಾರಿ ಹೊತ್ತಿದ್ದರೂ ಜಂಬೂಸವಾರಿಯಲ್ಲಿ ಹಲವು ವರ್ಷಗಳ ಕಾಲ ಭಾಗವಹಿಸುತ್ತಾ ಬಂದಿರುವುದು ವಿಶೇಷವಾಗಿದೆ.
ಹಲವು ವರ್ಷಗಳ ಹಿಂದೆ ನಡೆದ ಆ ಒಂದು ಘಟನೆ ಅರ್ಜುನನಿಗೆ ನೋವು ತಂದಿತ್ತು. ಗಜಮಜ್ಜನಕ್ಕೆಂದು ಮೃಗಾಲಯದ ಬಳಿಯಿರುವ ಕಾರಂಜಿ ಕೆರೆಗೆ ಗಜಪಡೆಯನ್ನು ಕರೆದೊಯ್ಯಲಾಗಿತ್ತು. ಗಜಮಜ್ಜನದ ಬಳಿಕ ಕೆರೆಯಿಂದ ದಡಕ್ಕೆ ಹತ್ತಿಸುವ ವೇಳೆ ಅರ್ಜುನನ ಮುಂದೆ ಹೋಗುತ್ತಿದ್ದ ಇನ್ನೊಂದು ಆನೆಯ ಕಾವಡಿ ಜಾರಿ ಕೆಳಗೆ ಬಿದ್ದ. ಆ ಸಂದರ್ಭ ನೀರಿನಿಂದ ಮೇಲೆ ಬಂದ ಅರ್ಜುನನ ಕಾಲಿಗೆ ಆಕಸ್ಮಿಕವಾಗಿ ಸಿಕ್ಕಿ ಆತ ಸಾವನ್ನಪ್ಪಿದ್ದ. ಅದೊಂದು ಕಹಿ ಘಟನೆ ನಡೆದಿತ್ತು.
2019ರಲ್ಲಿ ನಾಲ್ಕು ಜನರನ್ನು ತಿಂದಿದ್ದ ಹುಲಿಯನ್ನು ಸೆರೆ ಹಿಡಿಯಲು ಅರ್ಜುನನ್ನು ಬಳಸಿಕೊಂಡು ಮೂರು ದಿನ ಕಾರ್ಯಾಚರಣೆ ನಡೆಸಿ ಹುಲಿಯ ಹೆಜ್ಜೆಗುರುತು ಆಧರಿಸಿ ಹುಲಿಯನ್ನು ಹಿಡಿಯಲಾಗಿತ್ತು. ಇದಕ್ಕೆ ಮೆಚ್ಚಿ ಸರಕಾರ ಅರ್ಜುನ ಮತ್ತು ಮಾವುತ ವಿನುಗೆ ಪ್ರಶಸ್ತಿ ಪತ್ರ ನೀಡಿತ್ತು. ಇಷ್ಟೆಲ್ಲಾ ಕೀರ್ತಿ ಹೊಂದಿದ್ದ ಅರ್ಜುನ ಇಂದು ಪುಂಡ ಕಾಡಾನೆಯೊಂದರ ದಾಳಿಗೆ ಸಿಲುಕಿ ದುರ್ಮರಣಕ್ಕೆ ಈಡಾಗಿರುವುದು ನೋವಿನ ಸಂಗತಿ.
The majestic elephant Arjuna, who carried the ‘Golden Howdah’ for eight years as part of the grand finale of ‘Naada Habba’ Mysore Dasara died on Monday, December 4, after a fight with a wild jumbo near Yeslur village of Sakleshpur taluk in Hassan district.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm