Elephant Arjuna death, Kota Srinivas Poojary: ಆನೆ ಅರ್ಜುನ ಬಲಿ ; ಅರಣ್ಯ ಇಲಾಖೆ ವಿರುದ್ಧ ಶ್ರೀನಿವಾಸ ಪೂಜಾರಿ ಕಿಡಿ, ಸಾವಿನ ಬಗ್ಗೆ ಸಮಗ್ರ ತನಿಖೆಗೆ ಆಗ್ರಹ 

05-12-23 12:19 pm       HK News Desk   ಕರ್ನಾಟಕ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಖ್ಯಾತಿಯ ಅರ್ಜುನ ಆನೆ ಬಲಿಯಾಗಿರುವುದಕ್ಕೆ ಅರಣ್ಯ ಇಲಾಖೆ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಗರಂ ಆಗಿದ್ದಾರೆ.

ಬೆಳಗಾವಿ, ಡಿ 05: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಖ್ಯಾತಿಯ ಅರ್ಜುನ ಆನೆ ಬಲಿಯಾಗಿರುವುದಕ್ಕೆ ಅರಣ್ಯ ಇಲಾಖೆ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಗರಂ ಆಗಿದ್ದಾರೆ.

ಇದೊಂದು ಆತಂಕದ ವಿಚಾರ. ಸರ್ಕಾರ ಅರ್ಜುನ ಸಾವಿನ ಬಗ್ಗೆ ತನಿಖೆ ಮಾಡಬೇಕು. ಅರವಳಿಕೆ ಪುಂಡಾನೆಗೆ ಬದಲು ಅರ್ಜುನಿಗೆ ಬಿತ್ತು ಅಂತ ಆರೋಪ ಇದೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆ ಸೆರೆಗೆ ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಕಾಡಾನೆ ದಾಳಿಯಿಂದ ಅರ್ಜುನ ಆನೆ ಮೃತಪಟ್ಟಿತು.

ನಾಲ್ಕು ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರು ಕಾರ್ಯಾಚರಣೆ ಆರಂಭಿಸಿದ್ದರು. ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿತ್ತು. ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅರ್ಜುನ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.

ಅರ್ಜುನ ಆನೆ ಸಾವಿನ ಬಗ್ಗೆ ಸ್ಥಳದಲ್ಲೇ ಇದ್ದ ಮಾವುತರು ಮತ್ತು ಕಾವಾಡಿಗರು ನೀಡಿರುವ ಹೇಳಿಕೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅರವಳಿಕೆ ಕಾಡಾನೆಗೆ ತಾಗುವ ಬದಲು ಅರ್ಜುನನಿಗೆ ತುಗಲಿತ್ತು ಎಂದು ಆರೋಪಿಸಿದ್ದಾರೆ.

Dasara Elephant Arjuna death, Kota Srinivas Poojary demamds clear investigation.