Bangalore, Auto driver hacked: ಆಟೋ ಚಾಲಕನಿಗೆ 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ; ಹಳೇ ವೈಷಮ್ಯಕ್ಕೆ ಯುವಕನ ಬರ್ಬರ ಹತ್ಯೆ ಶಂಕೆ 

07-12-23 12:01 pm       Bangalore Correspondent   ಕರ್ನಾಟಕ

ಸ್ನೇಹಿತರ ಜತೆ ರಸ್ತೆ ಬದಿ ನಿಂತು ಮಾತನಾಡುತ್ತಿದ್ದ ಆಟೋ ಚಾಲಕನಿಗೆ 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಟಿಂಬರ್‌ ಯಾರ್ಡ್‌ ಲೇಔಟ್‌ ನಲ್ಲಿ ನಡೆದಿದೆ.

ಬೆಂಗಳೂರು, ಡಿ 07: ಸ್ನೇಹಿತರ ಜತೆ ರಸ್ತೆ ಬದಿ ನಿಂತು ಮಾತನಾಡುತ್ತಿದ್ದ ಆಟೋ ಚಾಲಕನಿಗೆ 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಟಿಂಬರ್‌ ಯಾರ್ಡ್‌ ಲೇಔಟ್‌ ನಲ್ಲಿ ನಡೆದಿದೆ.

ಬ್ಯಾಟರಾಯನಪುರದ ಎಂಟಿಸಿ ಲೇಔಟ್‌ ನಿವಾಸಿ ಅರುಣ್‌ (24) ಕೊಲೆಯಾದ ಆಟೋ ಚಾಲಕ.

ಆಟೋ ಚಾಲಕನಾಗಿ ಅರುಣ್‌ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಟಿಂಬರ್‌ ಯಾರ್ಡ್‌ ಲೇಔಟ್‌ನಲ್ಲಿ ಸ್ನೇಹಿತರ ಜತೆ ರಸ್ತೆ ಬದಿ ಮಾತನಾಡುತ್ತ ನಿಂತಿದ್ದ. ಈ ವೇಳೆ 2-3 ಬೈಕ್‌ಗಳಲ್ಲಿ ಬಂದ ಆರೇಳು ಮಂದಿ ದುಷ್ಕರ್ಮಿಗಳು ಏಕಾಏಕಿ ಅರುಣ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಈ ವೇಳೆ ಆತನ ಸ್ನೇಹಿತರು ಪ್ರಾಣ ಭಯದಿಂದ ಸ್ಥಳದಿಂದ ತಪ್ಪಿಸಿಕೊಂಡು ಓಡಿದ್ದಾರೆ. ಆಗ ಕೆಳಗೆ ಬಿದ್ದ ಅರುಣ್‌ಗೆ ದುಷ್ಕರ್ಮಿಗಳು 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದಾರೆ.

ಕೃತ್ಯದ ಮಾದರಿ ಗಮನಿಸಿದರೆ ಹಳೇ ದ್ವೇಷದಿಂದಲೇ ಕೃತ್ಯ ಎಸಗಿದ್ದಾರೆ ಎಂಬುದು ಗೊತ್ತಾಗಿದೆ. ಜತೆಗೆ ಅರುಣ್‌ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರಿಂದ ಈ ಆಯಾಮದಲ್ಲೂ ತನಿಖೆ ನಡೆಸಲಾಗುತ್ತದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

An auto driver was hacked to death by an unidentified gang of assailants in Timber Layout, Byatarayanapura, on wednesday night.  The incident occurred at around 10.30 p.m. when Arun, 24, also a resident of the same area, was hanging around with other auto drivers.