ಬ್ರೇಕಿಂಗ್ ನ್ಯೂಸ್
08-12-23 08:31 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.8: ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮಾವೇಶದಲ್ಲಿ ಐಸಿಸ್ ಉಗ್ರರ ಜೊತೆಗೆ ನಂಟಿರುವವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂಬ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದು ಇದೀಗ ಅವರಿಗೇ ಮುಳುವಾಗಿ ಪರಿಣಮಿಸಿದೆ. ಯತ್ನಾಳ್ ಹೇಳಿಕೆ ಸಂಚಲನ ಮೂಡಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಯತ್ನಾಳ್ ವಿರುದ್ಧ ತಿರುಗಿಬಿದ್ದಿದ್ದಾರೆ. ಮುಸ್ಲಿಂ ಧರ್ಮಗುರುಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಇರುವ ಫೋಟೊಗಳನ್ನು ಟ್ವಿಟರ್ ನಲ್ಲಿ ಷೇರ್ ಮಾಡಿ ತಿರುಗೇಟು ನೀಡಿದ್ದಾರೆ.
ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ವಿರುದ್ದ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ. ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಪೋಟೊಗಳು ಸ್ಪಷ್ಟವಾಗಿ ಹೇಳುತ್ತಿವೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಅಧ್ಯಕ್ಷತೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿರುವುದರಿಂದ ಯತ್ನಾಳ್ ಅವರು ಕೆರಳಿ ಕೆಂಡವಾಗಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ದ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ನನ್ನ ಪೋಟೋವನ್ನು ತೋರಿಸಿ ಆರೋಪ ಮಾಡಿದ್ದಾರೆ. ಈ ಆರೋಪದ ನಂತರ ಮೌಲ್ವಿ ಅವರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧದ ವಿವರವೂ ಹೊರಬರಲಿದೆ ಎನ್ನುವುದು ಅವರಿಗೆ ಖಂಡಿತ ಗೊತ್ತಿತ್ತು. ಅವೆಲ್ಲವೂ ಬಯಲಾಗಿ ಪ್ರಧಾನಿ ಮತ್ತು ಬಿಜೆಪಿ ನಾಯಕರು ಮುಜುಗರಕ್ಕೀಡಾಗಲಿ ಎನ್ನುವ ದುರುದ್ದೇಶದಿಂದ ನನ್ನ ವಿರುದ್ದ ಆರೋಪ ಮಾಡುವ ಆಟ ಆಡಿದ್ದಾರೆ ಎಂದು ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಮಿಯವರೂ ಕೂಡ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿಯವರು ತನ್ನ ವಿರುದ್ದದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲ್ವಿ ತನ್ವೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಸ್ ಜೊತೆ ಸಂಬಂಧ ಇದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಮತ್ತು ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು. ಇದು ಎರಡೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ದ ಪುಂಖಾನುಪುಂಖವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡಿಗೆ ಎರಡು ಸಾವಿರ ಕೋಟಿ ರೂಪಾಯಿ ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಈ ರೀತಿ ಬಹಿರಂಗವಾಗಿ ತಮ್ಮ ಪಕ್ಷದ ಉನ್ನತ ನಾಯಕರ ವಿರುದ್ದವೇ ಆರೋಪ ಮಾಡುತ್ತಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಬಾಯಿಬಲದ ಹಿಂದೆ ಇರುವ ಶಕ್ತಿ ಯಾವುದು? ಬಿಜೆಪಿಯಲ್ಲಿರುವ ಯಾವ ‘ಜೀ’’ ಗಳ ಬಲದಿಂದ ಸ್ವಪಕ್ಷೀಯರ ವಿರುದ್ದ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಬಯಲಾಗಬೇಕಾಗಿದೆ ಎನ್ನುವ ಮೂಲಕ ಪರೋಕ್ಷವಾಗಿ ಸಂತೋಷ್ ಜೀ ಕಡೆಗೆ ಬೊಟ್ಟು ಮಾಡಿದ್ದಾರೆ.
ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ವ್ಯಾಪಾರಿ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ. ಯತ್ನಾಳ್ ಅವರ ಆರೋಪದಂತೆ ತನ್ವೀರ್ ಹಾಶ್ಮಿ ಅವರಿಗೆ ಐಸಿಸ್ ಜೊತೆ ಸಂಬಂಧ ಇರುವುದಾಗಿದ್ದರೆ ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್ ಅವರಿಗೆ ಅದು ಗೊತ್ತಿರಲಿಲ್ಲವೇ? ಗೊತ್ತಿದ್ದೂ ಸುಮ್ಮನಿರಲು ಕಾರಣವೇನು? ಇಷ್ಟು ಸಮಯದ ನಂತರ ಇಂತಹ ಆರೋಪ ಮಾಡಲು ಕಾರಣಗಳೇನು ಎನ್ನುವುದನ್ನು ಕೂಡಾ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಸಿಎಂ ಸಿದ್ದರಾಮಯ್ಯ ಟ್ವಿಟರ್ ಮೂಲಕ ಒತ್ತಾಯಿಸಿದ್ದಾರೆ.
Despite BJP MLA Basanagouda Patil Yatnal using a photo of me with Maulvi Tanveer Hashmi to levy accusations against me, it is slowly becoming evident that his real target is Prime Minister @narendramodi. It is suggested by photographs shared in the media that not only other BJP… pic.twitter.com/bwPIUi8tI8
— Siddaramaiah (@siddaramaiah) December 8, 2023
Yatnal ISIS remarks, allegations is to take revenge against Prime Minister Narendra Modi says CM Siddaramaiah on twitter. Angered and frustrated after losing the positions of the state BJP president and the Leader of the Opposition, Yatnal appears to have made these allegations against me with the actual intent of taking revenge against Prime Minister Narendra Modi and Amit Shah. Following this allegation, the details of PM Narendra Modi's connection with Maulvi will also come to light, which Yatnal was undoubtedly aware of. The nature of these accusations suggests an attempt to create embarrassment for the Prime Minister and other BJP leaders.
25-07-25 04:07 pm
Bangalore Correspondent
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
25-07-25 04:40 pm
HK News Desk
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
25-07-25 06:05 pm
Mangalore Correspondent
Udupi: ಸೊಸೈಟಿಗೆ ಅಡಿಟ್ ಮಾಡಿಕೊಡಲು ಲಂಚ ಬೇಡಿಕೆ ;...
25-07-25 02:25 pm
Terrorist Yasin Bhatkal, Mangalore: 2008ರ ಉಳ್...
24-07-25 10:26 pm
Dharmasthala Case, Investigation, Advocate,...
24-07-25 05:27 pm
Mangalore Indiana Hospital: ಮಂಗಳೂರಿನಲ್ಲಿ ಪ್ರಥ...
24-07-25 11:30 am
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am