ಬ್ರೇಕಿಂಗ್ ನ್ಯೂಸ್
08-12-23 10:23 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 08: ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತ ಪಡಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ‘ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳೆ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬದ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಮೋದಿ ಬರೆದುಕೊಂಡಿದ್ದಾರೆ.
ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಾಳೆ ಮಧ್ಯಾನ್ಹ ಮೆರವಣಿಗೆ ಮೂಲಕ ಸೋಲದೇವನಹಳ್ಳಿಯ ತೋಟಕ್ಕೆ ತೆರಳಿ, ಅಲ್ಲಿ ಮಣ್ಣು ಮಾಡುವ ಮೂಲಕ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ಅವರ ಕುಟುಂಬದೊಂದಿಗೆ ಮಾತನಾಡಲಾಗಿದೆ. ಲೀಲಾವತಿ ಅಂತಿಮ ದರ್ಶನದ ಭದ್ರತೆಗೆ 500 ಪೊಲೀಸರ ನಿಯೋಜನೆ ಮಾಡಲಾಗಿದೆ. ಎಸ್ಪಿ, ಹೆಚ್ಚವರಿ ಎಸ್ಪಿ ನೇತೃತ್ವದಲ್ಲಿ 6 ಮಂದಿ ಡಿವೈಎಸ್ಪಿ, 15 ಮಂದಿ ಇನ್ಸೆಪೆಕ್ಟರ್ಸ್ ಹೆಚ್ಚುವರಿಯಾಗಿ ಕೆಎಸ್ಆರ್ಪಿ ತುಕಡಿಗಳ ನಿಯೋಜನೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ’ ಎಂದರು.
ಲೀಲಾವತಿ ಅವರು ಅಂತಿಮ ದರ್ಶನಕ್ಕೆ ಇಪ್ಪತ್ತು ಸಾವಿರದಷ್ಟು ಜನರು ಬರುವ ಸಾಧ್ಯತೆ ಇದ್ದು, ಅದರಂತೆ ಸಾರ್ವಜನಿಕ ದರ್ಶನಕ್ಕೆ ಬರುವವರಿಗೆ ಯಾವುದೇ ರೀತಿಯಾಗಿ ಅಡೆತಡೆಗಳು ಆಗದಂತೆ ಸಿದ್ದತೆ ಮಾಡಿಕೊಳ್ಳಲಾಗಿದೆಯಂತೆ. ವಿವಿಐಪಿಗಳಿಗೆ ಹಾಗೂ ಸಿನಿಮಾ ನಟ ನಟಿಯರಿಗೆ ದರ್ಶನಕ್ಕಾಗಿ ಪ್ರತ್ಯೇಕವಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ…
— Narendra Modi (@narendramodi) December 8, 2023
Prime Minister Narendra Modi has condoled the death of kannada film actress Leelavathi.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 09:38 pm
HK News Desk
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm