ಬ್ರೇಕಿಂಗ್ ನ್ಯೂಸ್
09-12-23 05:33 pm HK News Desk ಕರ್ನಾಟಕ
ಕೊಡಗು, ಡಿ 09: ಕೇರಳ ಮೂಲದ ಕುಟುಂಬವೊಂದು ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಖಾಸಗಿ ರೆಸಾರ್ಟ್‌ನಲ್ಲಿ ಮಗುವನ್ನು ಕೊಂದು ಗಂಡ, ಹೆಂಡತಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇರಳದ ಕೊಲ್ಲಂನಿಂದ ಮಡಿಕೇರಿಗೆ ಆಗಮಿಸಿದ್ದ ಕುಟುಂಬ ಇದಾಗಿದೆ. ಆದರೆ, ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕಾರಣ ಇನ್ನೂ ತಿಳಿದುಬಂದಿಲ್ಲ. ವಿನೋದ್ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಕುಟುಂಬದವರಿಗೆ ಈಗಾಗಲೇ ಮಾಹಿತಿಯನ್ನು ನೀಡಿದ್ದು, ಕೇರಳದಿಂದ ಆಗಮಿಸುತ್ತಿದ್ದಾರೆ. ಕುಟುಂಬದವರು ಸ್ಥಳಕ್ಕೆ ಆಗಮಿಸುವವರೆಗೂ ಮೃತದೇಹವನ್ನು ಅಲ್ಲಿಯೇ ಇಡಲಾಗುವುದು. ಅವರು ಬಂದ ಬಳಿಕಷ್ಟೇ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸೇರಿ ಮುಂದಿನ ಪ್ರಕ್ರಿಯೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಗುವನ್ನು ಉಸಿರು ಕಟ್ಟಿಸಿ ಕೊಂದು ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆದರೆ, ಶುಕ್ರವಾರ ರೆಸಾರ್ಟ್‌ಗೆ ಬಂದಿದ್ದ ದಂಪತಿ. ಶನಿವಾರ ಬೆಳಗ್ಗೆ ಚೆಕ್‌ಔಟ್ ಮಾಡುವುದಾಗಿ ಸಿಬ್ಬಂದಿಗೆ ಹೇಳಿದ್ದರು. ಹೀಗಾಗಿ ಬೆಳಗ್ಗೆಯಾದರೂ ಚೆಕ್‌ಔಟ್ ಮಾಡಲು ಬಾರದ ಕಾರಣ ರೆಸಾರ್ಟ್ ಸಿಬ್ಬಂದಿ ರೂಂಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸದ ಕಾರಣ, ಅನುಮಾನ ಬಂದು ಕೊಠಡಿಯತ್ತ ಬಂದಿದ್ದಾರೆ. ಆಗ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
Kerala couple commit suicide inside Madikeri resort after killing their baby
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm