ಬ್ರೇಕಿಂಗ್ ನ್ಯೂಸ್
12-12-23 04:57 pm HK News Desk ಕರ್ನಾಟಕ
ದಾವಣಗೆರೆ, ಡಿ.12: ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕಪ್ಪ ಹಾಗೂ ಅವರ ಮಗ ಸಚಿವ ಮಲ್ಲಿಕಾರ್ಜುನ್ ಅವರಿಗೆ ಸಂಕಷ್ಟ ಎದುರಾಗಿದೆ. ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಕುಕ್ಕರ್ ಹಂಚಿಕೆ ಮಾಡಿದ ಆರೋಪದಲ್ಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಚುನಾವಣೆ ಸಮಯದಲ್ಲಿ ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಅವರ ಫೋಟೋಗಳನ್ನು ಅಂಟಿಸಿ ಕುಕ್ಕರ್, ಸೀರೆಯನ್ನು ಹಂಚಿಕೆ ಮಾಡಲಾಗಿತ್ತು. ಈ ಬಗ್ಗೆ ಇಬ್ಬರ ವಿರುದ್ಧವೂ ಅಂದಿನ ಎಸ್ಪಿ ಸಿ.ಬಿ.ರಿಷ್ಯಂತ್ ದೂರು ದಾಖಲಿಸಿದ್ದರು. ದೂರು ದಾಖಲಾಗಿ 6 ತಿಂಗಳು ಕಳೆದ್ರೂ ಪೊಲೀಸರು ನ್ಯಾಯಾಲಯಕ್ಕೆ ಚಾರ್ಟ್ ಸಲ್ಲಿಸಿಲ್ಲ. ಪೊಲೀಸರ ನಿರ್ಲಕ್ಷ್ಯ, ಚಾರ್ಜ್ ಶೀಟ್ ಹಾಕದ ಹಿನ್ನೆಲೆ ಪರಾಜಿತ ಅಭ್ಯರ್ಥಿ ಸುಬಾನ್ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸುಭಾನ್ ಖಾನ್, ದಾವಣಗೆರೆ ದಕ್ಷಿಣ ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿಯಾಗಿದ್ದು ಅವರು ಸಲ್ಲಿಸಿದ ರಿಟ್ ಅರ್ಜಿ ಕೈಗೆತ್ತಿಕೊಂಡ ಹೈಕೋರ್ಟ್, ಮುಖ್ಯ ಚುನಾವಣಾಧಿಕಾರಿ, ದಾವಣಗೆರೆ ಜಿಲ್ಲಾಧಿಕಾರಿ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್ ಅವರಿಗೆ ನೊಟೀಸ್ ನೀಡಿದೆ.
ಚುನಾವಣೆ ವೇಳೆ ಶಾಮನೂರು, ಮಲ್ಲಿಕಾರ್ಜುನ್ ಭಾವಚಿತ್ರ ಇರುವ ಕುಕ್ಕರ್ ವಿತರಿಸಿದ ಬಗ್ಗೆ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾದರೆ ತಂದೆ, ಮಗನಿಗೆ ಸಂಕಷ್ಟ ಎದುರಾಗಲಿದ್ದು ಪ್ರಜಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆಯಿದೆ.
Senior Congress MLA Dr Shamanur Shivashankappa and his son Mallikarjun are in trouble. The high court has issued a notice for allegedly distributing cookers in violation of the model code of conduct during the elections.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm