ಬ್ರೇಕಿಂಗ್ ನ್ಯೂಸ್
13-12-23 08:08 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 13: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಸಿಎಂ ”ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ.
ಇಪ್ಪತ್ತೆರಡು ವರ್ಷಗಳ ಹಿಂದೆ (2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ.
ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ.
ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಪ್ರತಾಪ್ ಸಿಂಹರನ್ನು ವಶಕ್ಕೆ ಯಾಕೆ ಪಡೆದಿಲ್ಲ? ಎಂದು ಪ್ರಶ್ನಿಸಿದೆ. ಜತೆಗೆ ಅವರನ್ನು ಸಂಸತ್ ಸ್ಥಾನದಿಂದ ವಜಾಗೊಳಿಸಬೇಕು ಎಂದೂ ಆಗ್ರಹಿಸಿದೆ.
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ…
— Siddaramaiah (@siddaramaiah) December 13, 2023
"ಸಂಸತ್ತಿಗೆ ನುಗ್ಗಿದ ಘಾತುಕರು ಪಾಸ್ ಪಡೆದಿದ್ದು ಪ್ರತಾಪ್ ಸಿಂಹ ಅವರಿಂದ. ಈ ದಾಳಿಕೊರರು ಪ್ರತಾಪ್ ಸಿಂಹ ಅವರ ಆಪ್ತ ವಲಯದವರೇ? ಪ್ರತಾಪ್ ಸಿಂಹರಿಂದಲೂ ಈ ದಾಳಿಯ ಷಡ್ಯಂತ್ರ ನಡೆದಿತ್ತೇ? ಈ ಎಲ್ಲಾ ಸಂಗತಿಗಳ ತನಿಖೆ ನಡೆಸಲು ಇದುವರೆಗೂ ಪ್ರತಾಪ್ ಸಿಂಹ ಅವರನ್ನು ವಶಕ್ಕೆ ಪಡೆದಿಲ್ಲವೇಕೆ?" ಎಂದು ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ಖಾರವಾಗಿ ಪ್ರಶ್ನಿಸಿದೆ.
“ದೇಶದಲ್ಲಿ ಭದ್ರತಾ ಲೋಪವಷ್ಟೇ ಅಲ್ಲ, ತನಿಖೆಯ ಲೋಪವೂ ನಡೆಯುತ್ತಿರುವುದೇಕೆ?” ಎಂದು ಕಾಂಗ್ರೆಸ್ ಕೇಳಿದೆ.
ಇದಲ್ಲದೆ, “ಹಿಂದೆ 2001ರಲ್ಲಿ ಇದೇ ದಿನ ಸಂಸತ್ ಭವನದ ಮೇಲೆ ಉಗ್ರರ ದಾಳಿಯಾಗಿತ್ತು. ಆಗಲೂ ಬಿಜೆಪಿ ಆಡಳಿತವಿತ್ತು. ಈಗ ಸಂಸತ್ ಭವನದ ಒಳಗೆಯೇ ಭದ್ರತಾ ಲೋಪವಾಗಿದೆ. ಪುಲ್ವಾಮದಲ್ಲಿ ಯೋಧರನ್ನು ರಕ್ಷಿಸಲಾಗಲಿಲ್ಲ, ಸಂಸತ್ತಿನಲ್ಲಿ ಸಂಸದರನ್ನೂ ರಕ್ಷಿಸಲು ವಿಫಲವಾಗಿದೆ,” ಎಂದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.
“ಈ ದಾಳಿಯಲ್ಲಿ ಪ್ರತಾಪ್ ಸಿಂಹರ ಹೆಸರು ಮೇಲ್ನೋಟದಲ್ಲೇ ಕಂಡುಬಂದಿದೆ. ಸ್ಪೀಕರ್ ಓಂ ಬಿರ್ಲಾ ಅವರು ಸಂಸದ ಪ್ರತಾಪ್ ಸಿಂಹ ಅವರನ್ನು ಈ ಕೂಡಲೇ ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ, ತನಿಖೆ ನಡೆಸಬೇಕು,” ಎಂದು ಕಾಂಗ್ರೆಸ್ ಒತ್ತಾಯಿಸಿದೆ.
“300 ಕೆಜಿ ಆರ್‌ಡಿಎಕ್ಸ್ ಯಾವುದೇ ಅಡೆತಡೆ ಇಲ್ಲದೆ ಕಾಶ್ಮೀರದೊಳಗೆ ಬರುತ್ತದೆ. ಸ್ಪೋಟಕ ವಸ್ತು ಯಾವುದೇ ಅಡೆತಡೆ ಇಲ್ಲದೆ ಸಂಸತ್ತಿನೊಳಗೆ ಬರುತ್ತದೆ. ಸಂಸತ್ತನ್ನೇ ಕಾಯಲಾಗದ ಚೌಕಿದಾರ್‌ನಿಗೆ ದೇಶ ಕಾಯಲು ಸಾಧ್ಯವೇ?” ಎಂದು ಪ್ರಶ್ನೆ ಎತ್ತಿರುವ ಕೈ ಪಕ್ಷ, “ಈ ಮಟ್ಟಿಗೆ ಭದ್ರತಾ ಲೋಪವಾಗಿದ್ದು ಹೇಗೆ? ಯಾಕೆ? ಈ ಸಂಸತ್ ದಾಳಿಯ ಹಿಂದೆ ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆ,” ಎಂದು ದೂರಿದೆ.
Karnataka Chief Minister Siddaramaiah on Monday termed the attack on Parliament House, which has shocked the entire country, as "condemnable" and "extremely shocking".
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm