ಬ್ರೇಕಿಂಗ್ ನ್ಯೂಸ್
15-12-23 03:18 pm HK News Desk ಕರ್ನಾಟಕ
ಮೈಸೂರು, ಡಿ 15: ಸಂಸತ್ತಿನಲ್ಲಿ ಸ್ಮೋಕ್ ಬಾಂಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಳಿಕೊರರಿಗೆ ಪಾಸ್ ನೀಡಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ವಿವಾದಿತ ಫ್ಲೆಕ್ಸ್ ಅಳವಡಿಸಲಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೈಸೂರಿನ ಮಹಾರಾಜ ವೃತ್ತದ ಬಳಿ ಫ್ಲೆಕ್ಸ್ ಅಳವಡಿಸಿದ್ದು, ಪ್ರತಾಪ್ ಸಿಂಹ ದೇಶದ್ರೋಹಿ ಎಂದು ಬರೆಯಲಾಗಿದೆ. ಫ್ಲೆಕ್ಸ್‌ನಲ್ಲಿ ಬಾಂಬ್ ಹಾಗೂ ಪಾಸ್ ಹಿಡಿದು ನಿಂತಿರುವ ರೀತಿಯ ತಿರುಚಿದ ಫೋಟೋವನ್ನು ಅಳವಡಿಸಲಾಗಿದೆ.
ಸಂಸದ ಸ್ಥಾನದಿಂದ ಪ್ರತಾಪ್ ಸಿಂಹ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ ಚಳುವಳಿ ನಡೆಸಲಾಗುತ್ತಿದೆ. ಸಂಸತ್ ಭವನಕ್ಕೆ ದುಷ್ಕರ್ಮಿಗಳಿಗೆ ನುಗ್ಗಲು ಪಾಸ್ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಪ್ರತಿಭಟಸಿದೆ.
ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಸಿಬ್ಬಂದಿ ಪ್ರತಾಪ್ ಸಿಂಹ ವಿವಾದಿತ ಫ್ಲೆಕ್ಸ್ ಅನ್ನು ತೆರವುಗೊಳಿಸಲು ಮುಂದಾಗಿದೆ. ಈ ವೇಳೆ ಹಿಂದುಳಿದ ಜಾಗೃತ ವೇದಿಕೆ ಸದಸ್ಯರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ.
ಫ್ಲೆಕ್ಸ್ ನಲ್ಲಿ ಸಂಸದರನ್ನು ಒಬ್ಬ ಭಯೋತ್ಪಾದಕನಂತೆ ತೋರಿಸಿ ತಾಲಿಬಾನ್ ಉಗ್ರರು ತಲೆಗೆ ಸುತ್ತುವ ಶಮ್ಲಾವನ್ನು ಪ್ರತಾಪ್ ತಲೆಗೆ ಸುತ್ತಿ ಕೈಗಳಲ್ಲಿ ಬಾಂಬ್ ಗಳನ್ನು ಚಿತ್ರಿಸಲಾಗಿದೆ. ಅವರನ್ನು ಸಂಸತ್ ಸ್ಥಾನದಿಂದ ವಜಾಗೊಳಿಸುವಂತೆ ಜಾಗೃತ ವೇದಿಕೆ ಸಹಿ ಅಭಿಯಾನ ಶುರುಮಾಡಿರುವುದನ್ನು ಫ್ಲೆಕ್ಸ್ ನಲ್ಲಿ ಬರೆಯಲಾಗಿದೆ. ಪೊಲೀಸರು ಫ್ಲೆಕ್ಸ್ ಅನ್ನು ಮಹಾರಾಜ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಿದ ಬಳಿಕ ಪಾಲಿಕೆ ಸಿಬ್ಬಂದಿ ಅದನ್ನು ಅಲ್ಲಿಂದ ತೆಗೆದುಕೊಂಡು ಹೋಗಿದೆ.
A controversial flex has been erected in Mysuru against MP Pratap Simha for issuing passes to the attackers in connection with the smoke bomb case in Parliament.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm