ಬ್ರೇಕಿಂಗ್ ನ್ಯೂಸ್
15-12-23 10:35 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15: ರಾಜ್ಯದ ರೈತರಿಗೆ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು ಸಹಕಾರಿ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮಧ್ಯಮ ಅವಧಿ, ದೀರ್ಘಾವಧಿ ಸಾಲ ಕಟ್ಟಿದರೆ ಅದರ ಮೇಲಿನ ಬಡ್ಡಿಯನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು ಎದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರದ ಬಡ್ಡಿ ಮನ್ನಾ ಲಾಭ ಅವಧಿ ಪೂರ್ವದಲ್ಲಿ ಸಾಲ ಮರುಪಾವತಿ ಮಾಡಿದ ರೈತರಿಗೆ ಮಾತ್ರ ಅನ್ವಯವಾಗಲಿದೆ.
ಸಹಕಾರ ಬ್ಯಾಂಕುಗಳಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯವರು 2018 ರ ತಮ್ಮ ಪ್ರಣಾಳಿಕೆಯಲ್ಲಿ ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರಿಕೃತ ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದ ವರೆಗಿನ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದರಾ? ನಯಾಪೈಸೆ ಬಿಡುಗಡೆ ಮಾಡಿದರಾ? ಯಡಿಯೂರಪ್ಪನವರು 2019 ರ ಆಗಸ್ಟ್‌ನಲ್ಲಿ ಅತಿವೃಷ್ಟಿ ಕಾರಣಕ್ಕೆ ಬೆಳೆ ಹಾನಿಯಾಗಿತ್ತು. ಆಗ ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಏನು ಹೇಳಿದರು ಗೊತ್ತಾ? “ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ” ಎಂದು ಹೇಳಿದ್ದರು. ಆದರೆ ನಾವೇನು ಈ ಬಾರಿ ಪ್ರಣಾಳಿಕೆಯಲ್ಲಿ ರೈತರ ಸಾಲಮನ್ನಾ ಬಗ್ಗೆ ಹೇಳಿಲ್ಲ. ಸಾಲ ಕಟ್ಟುವ ರೈತರಿಗೆ ಪ್ರೋತ್ಸಾಹ ನೀಡುವುದಕ್ಕಾಗಿ ಬಡ್ಡಿ ಮನ್ನಾ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Chief Minister Siddaramaiah on Friday announced that the government would waive off interest on medium and long crop loans disbursed by cooperative banks to farmers. The government was doing this in spite of the ruling Congress making no such promises in its manifesto before the assembly polls in May this year, he added, on the last day of the winter assembly session in Belagavi.
22-05-25 01:09 pm
HK News Desk
Bagalkot, Monkey Visits Animal Hospital: ಬಾಗಲ...
22-05-25 12:41 pm
Ola News, Suicide, Bangalore: ಓಲಾ ಕಂಪನಿಯ ಎಐ ವ...
21-05-25 09:16 pm
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
22-05-25 02:22 pm
HK News Desk
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm