ಬ್ರೇಕಿಂಗ್ ನ್ಯೂಸ್
17-12-23 01:53 pm HK News Desk ಕರ್ನಾಟಕ
ಬೆಂಗಳೂರು, ಡಿ.17: ಅಮೆರಿಕಾ, ಬ್ರಿಟನ್, ಚೀನಾ, ಫ್ರಾನ್ಸ್ ದೇಶಗಳಲ್ಲಿ ಕಂಡುಬಂದಿದ್ದ ಕೊರೊನಾದ ಉಪತಳಿ ಜೆಎನ್ 1 ಭಾರತದಲ್ಲೂ ಕಂಡುಬಂದಿದೆ. ಕೇರಳದಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ.
ಜೆಎನ್ 1 ರೂಪಾಂತರಿಯು ಓಮಿಕ್ರಾನ್ ಸಬ್ ವೇರಿಯಂಟ್ ಬಿಎ 2.86 ವಂಶಕ್ಕೆ ಸೇರಿದ್ದಾಗಿದೆ. ಇದನ್ನು ಪಿರೋಲಾ ಎಂದು ಕರೆಯಲಾಗುತ್ತದೆ. ಇದು ಅಪಾಯಕಾರಿಯೇ, ಇಲ್ಲವೇ ಎನ್ನುವುದು ಇನ್ನೂ ನಿರ್ಧರಿತವಾಗಿಲ್ಲ. ಆದರೆ ಶರವೇಗದಲ್ಲಿ ಹಬ್ಬುತ್ತಿದೆ. ಕೇರಳದ ಕಣ್ಣೂರಿನಲ್ಲಿ 80 ವರ್ಷದ ವೃದ್ಧರೊಬ್ಬರು ಕೋವಿಡ್‌ಗೆ ಬಲಿ ಆಗಿದ್ದಾರೆ. ಎರಡು ದಿನಗಳಲ್ಲಿ 2ನೇ ಸಾವಾಗಿರುವುದು ಕಳವಳಕ್ಕೆ ಕಾರಣವಾಗಿದೆ.
ವೃದ್ಧ ಸಾವನ್ನಪ್ಪಿದ ಕಣ್ಣೂರಿನ ಪಾನೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕ ಸಭೆ, ಸಮಾರಂಭಗಳ ಮೇಲೆ ನಿರ್ಬಂಧಗಳನ್ನು ಹೇರಲಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರವೂ ಅಲರ್ಟ್ ಆಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ನಡೆಸಿ, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ಸಚಿವರು ಪ್ರತಿಕ್ರಿಯಿಸಿ, ಮಂಗಳವಾರ ಸಭೆ ಕರೆದಿದ್ದು ಆನಂತರ ಸರ್ಕಾರಕ್ಕೆ ಸಲಹೆಗಳನ್ನ ನೀಡಲಾಗುತ್ತದೆ. ಎಲ್ಲರೂ ಎಚ್ಚರಿಕೆಯಿಂದ ಇರೋಣ. ಅನಾಹುತ ಆಗುವುದಕ್ಕೆ ಬಿಡಬಾರದು ಎಂದಿದ್ದಾರೆ. ಗಡಿ ಭಾಗಗಳನ್ನು ಸೀಲ್ ಮಾಡೋದು, ರೈಲ್ವೇ ವಿಮಾನ ನಿಲ್ದಾಣಗಳಲ್ಲಿ ಸದ್ಯಕ್ಕೆ ತಪಾಸಣೆ ಮಾಡೋದು ಅಗತ್ಯವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆಗಳನ್ನ ಹೆಚ್ಚು ಮಾಡುತ್ತೇವೆ. ರಾಜ್ಯ, ಜಿಲ್ಲಾ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆಗೆ ಸಿದ್ಧತೆ ನಡೆದಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಹೇಳಿಕೆ ನೀಡಿರುವ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, ಕೊರೊನಾ ಉಪತಳಿಯ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಎರಡು ತಿಂಗಳ ಹಿಂದೆ ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ಈ ತಳಿ ಭಾರತೀಯರೊಬ್ಬರಲ್ಲಿ ಪತ್ತೆಯಾಗಿತ್ತು. ಆನಂತರ, ಭಾರತದ ಬೇರೆ ಕಡೆಯಲ್ಲೂ ಪತ್ತೆಯಾಗಿದೆ. ಕೇರಳದಲ್ಲಿಯೂ ಸೋಂಕು ಪತ್ತೆಯಾಗಿದ್ದು ಗಾಬರಿ ಪಡುವ ಅಗತ್ಯವಿಲ್ಲ. ಕೇರಳದಲ್ಲಿ ಆರೋಗ್ಯ ವ್ಯವಸ್ಥೆ ಉತ್ತಮ ಇದೆ. ಜಿನೋಮಿಕ್ ಸೀಕ್ವೆನ್ಸಿಂಗ್ ಮೂಲಕ ಇದನ್ನು ಪತ್ತೆಹಚ್ಚಬಹುದು. ಯಾರೂ ಚಿಂತಿತರಾಗಬೇಕಿಲ್ಲ ಎಂದಿದ್ದಾರೆ.
On December 8, Kerala found a case of COVID-19 sub-variant JN.1, PTI reported citing officials. A 79-year-old woman's sample had tested positive for influenza-like illness (ILI) on November 18, and that she had recovered from COVID-19. According to the reports, over 90 per cent of COVID-19 cases in India right now are mild and are being treated at home.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm