ಬ್ರೇಕಿಂಗ್ ನ್ಯೂಸ್
17-12-23 06:55 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 17: ವಂಟಮೂರಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಮಾತಿನ ಸಮರ ಮುಂದುವರಿದಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಏನಾಗಿದೆ ಎಂಬುವುದು ಜನರಿಗೆ ಗೊತ್ತು ವಾಗ್ದಾಳಿ ನಡೆಸಿದ್ದಾರೆ.
ಯಾರ ಕಾಲದಲ್ಲಿ ಎಷ್ಟು ಕ್ರೈಂ ಕೇಸ್ ಆಗಿವೆಯೋ ವರದಿ ನೋಡಲಿ:
ಸಿದ್ದರಾಮಯ್ಯ ಬಿಜೆಪಿ ನಾಯಕರ ಆರೋಪಗಳಿಗೆ ಗದಗದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ವಂಟಮೂರಿ ಪ್ರಕರಣ ಗೊತ್ತಾದ ತಕ್ಷಣವೇ ಗೃಹ ಸಚಿವರು ಮಹಿಳೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕ 9 ವರ್ಷದ ಹುಡುಗಿ ಮೇಲೆ ರೇಪ್ ಮಾಡಿ ಜೈಲು ಸೇರಿದ್ದಾನೆ. ಇದಕ್ಕೆ ಜೆ.ಪಿ. ನಡ್ಡಾ ಮತ್ತು ಬಿಜೆಪಿ ನಾಯಕರು ಏನು ಹೇಳುತ್ತಾರೆ? ಇಂತಹ ಎಂಎಲ್ಎ ಇಟ್ಟುಕೊಂಡವರು, ಹೆಣ್ಣುಮಕ್ಕಳು ಮೇಲೆ ದೌರ್ಜನ್ಯ ಮಾಡುವವರು ಬಿಜೆಪಿಯವವರು. ಅವರಿಗೆ ನಮ್ಮ ಬಗ್ಗೆ ಮಾತನಾಡಲು ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದ್ದಾರೆ
ನ್ಯಾಷನಲ್ ಕ್ರೈಂ ಬ್ಯೂರೋ ವರದಿ ನೋಡಲಿ, ಯಾರ ಕಾಲದಲ್ಲಿ ಎಷ್ಟು ಪ್ರಕರಣ ಆಗಿವೆ ಅಂತ ಗೊತ್ತಾಗುತ್ತೆ. ಯಾರ ಮೇಲೆ ದೌರ್ಜನ್ಯ ಆದರೂ ಅವರ ಮೇಲೆ ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ವಂಟಮೂರಿ ಘಟನೆ ಅನಾಗರಿಕ ಘಟನೆ, ಇದು ನಾಗರಿಕ ಸಮಾಜದಲ್ಲಿ ನಡೆಯಬಾರದು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಅವಧಿಯಲ್ಲಿ ಕೊಲೆ, ರೇಪ್ ಕೇಸ್ ಹೆಚ್ಚು:
ಪ್ರಲ್ಹಾದ್ ಜೋಶಿ ವಂಟಮೂರಿ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂಬ ಸಿಎಂ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ಸಿದ್ದರಾಮಯ್ಯ ಅವರು ಬೆಳಗಾವಿ ಘಟನೆಯನ್ನು, ಇತರೆ ರಾಜ್ಯದ ಘಟನೆಗಳಿಗೆ ಹೋಲಿಸಬಾರದು. ಮಣಿಪುರಿ ಘಟನೆಗೂ, ಬೆಳಗಾವಿ ವಿಚಾರಕ್ಕೆ ಅಜಗಜಾಂತರ ವ್ಯತ್ಯಾಸ ಇದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ, ಅದಕ್ಕೂ ಮೊದಲು ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಣಿಪುರ ಘಟನೆ ಆದ ಮೇಲೂ ಕೇಂದ್ರ ಸರ್ಕಾರ ಕೈ ಕಟ್ಟಿ ಕುಳಿತಿಲ್ಲ. ಈ ಹಿಂದೆ ಇಂತಹ ಘಟನೆ ಆದಾಗ ಒಬ್ಬೇ ಒಬ್ಬ ಗೃಹಸಚಿವ ಮಣಿಪುರಕ್ಕೆ ಹೋಗಿರಲಿಲ್ಲ. ಅಮಿತ್ ಷಾ ಮೂರು ದಿನ ಹೋಗಿ ಅಲ್ಲೆ ಇದ್ದರು. ಕೇಂದ್ರದ ಗೃಹ ರಾಜ್ಯಮಂತ್ರಿ 24 ದಿನ ಅಲ್ಲೆ ಇದ್ದರು. ಇಲ್ಲಿ ನಡೆದ ಘಟನೆ ಸಾಮಾನ್ಯ ರಾಜ್ಯಗಳಲ್ಲಿ ಆಗಿರುವ ಘಟನೆಗಳು. ರಾಜಸ್ಥಾನದಲ್ಲಿ ಹೆಚ್ಚು ಕೊಲೆ, ರೇಪ್ ಕೇಸ್ ಕಾಂಗ್ರೆಸ್ ಅವಧಿಯಲ್ಲಿ ಆಗಿವೆ. ಕೊಲೆ, ಅತ್ಯಾಚಾರ ನಂಬರ್ ಒನ್ ರಾಜಸ್ಥಾನ ಇತ್ತು. ದೇಶದ ಒಟ್ಟು ಕ್ರೈಂಗಳಲ್ಲಿ ಶೇ.16 ಕ್ರೈಂ ರಾಜಸ್ಥಾನದಲ್ಲಿ ಆಗಿದೆ. ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅಲ್ಲಿ ಇಂತಹ ಘಟನೆಗಳು ಜಾಸ್ತಿ ಆಗಿದೆ ಎಂದು ಟೀಕಿಸಿದ್ದಾರೆ.
A war of words continues between bjp and Congress leaders over the incident in which a Vantamuri woman was stripped and assaulted. BJP leaders alleged that the number of crime cases in the state has increased under the Congress government.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm