ಬ್ರೇಕಿಂಗ್ ನ್ಯೂಸ್
20-12-23 11:14 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.20: ದೇಶದಲ್ಲಿಯೇ ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಟೆಸ್ಟಿಂಗ್ ಮಾಡಲಾಗ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಕೋವಿಡ್ ಮುಂಜಾಗೃತಾ ಕ್ರಮಗಳ ಕುರಿತಂತೆ ಕೇಂದ್ರ ಆರೋಗ್ಯ ಸಚಿವರು ಕರೆದಿದ್ದ ಸಭೆಯಲ್ಲಿ ವರ್ಚುವಲ್ ಮೂಲಕ ಬೆಂಗಳೂರಿನಿಂದ ಪಾಲ್ಗೊಂಡಿದ್ದ ಸಚಿವ ದಿನೇಶ್ ಗುಂಡೂರಾವ್, ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಸಭೆ ಬಳಿಕ ಮಾತನಾಡಿದ ಸಚಿವರು, ರಾಜ್ಯದಲ್ಲಿ ಈಗಾಗಲೇ 1020 ಕೋವಿಡ್ ಟೆಸ್ಟ್ ಗಳನ್ನ ಮಾಡಲಾಗಿದೆ. ಒಂದೇ ದಿನದಲ್ಲಿ 772 ಕೋವಿಡ್ ಟೆಸ್ಟ್ ಗಳನ್ನ ನಡೆಸಲಾಗಿದೆ. ಶನಿವಾರದ ವೇಳೆಗೆ ಪ್ರತಿನಿತ್ಯ 5 ಸಾವಿರ ಕೋವಿಡ್ ಟೆಸ್ಟ್ ಗಳನ್ನ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದರು. ಸದ್ಯಕ್ಕೆ ರಾಜ್ಯದಲ್ಲಿ ಆತಂಕ ಪಡುವಂತಹ ಸ್ಥಿತಿ ನಿರ್ಮಾಣವಾಗಿಲ್ಲ. ಜೆ.ಎನ್.1 ಒಮೆಕ್ರಾನ್ ತಳಿಯ ರೂಪಾಂತರಿಯಾಗಿದ್ದು, ವೇಗವಾಗಿ ಹರಡುತ್ತದೆ ಎಂಬುದು ಇತರ ರಾಷ್ಟ್ರಗಳಲ್ಲಿಯ ಪರಿಸ್ಥಿತಿ ಅವಲೋಕಿಸಿದಾಗ ಕಂಡುಬಂದಿದೆ. ಆದರೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ದೇಶದಲ್ಲಿಯೇ ಒಟ್ಟು ಜೆ.ಎನ್.1 ಈವರೆಗೆ 21 ಪ್ರಕರಣಗಳಷ್ಟೆ ಪತ್ತೆಯಾಗಿವೆ. ಆರೋಗ್ಯ ಇಲಾಖೆಯಿಂದ ಅಗತ್ಯ ತಯಾರಿಯನ್ನ ಮಾಡಿಕೊಳ್ಳಲಾಗ್ತಿದೆ ಎಂದರು.
ಕೇರಳ ಗಡಿ ಪ್ರದೇಶಗಳಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ಗಳನ್ನ ಮಾಡಲು ಸೂಚಿಸಲಾಗಿದೆ. ಜನಸಂದಡಿ ಇರುವ ಪ್ರದೇಶಗಳಲ್ಲಿ ಜನರು ಮಾಸ್ಕ್ ಧರಿಸಿಕೊಂಡು ದಿನನಿತ್ಯದ ವ್ಯವಹಾರಗಳನ್ನ ನಡೆಸುವಂತೆ ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಲಹೆ ನೀಡಿದರು. ಸಾರಿ ಮತ್ತು ಐಎಲ್ ಐ ಪ್ರಕರಣಗಳಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಮಾಡಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದ್ದು, ಖಾಸಗಿ ಆಸ್ಪತ್ರೆಯವರು ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸಬೇಕು ಎಂದು ಸಚಿವ ಗುಂಡೂರಾವ್ ಹೇಳಿದರು.
ಕೇರಳದಲ್ಲಿ ಪ್ರತಿನಿತ್ಯ ಸರಾಸರಿ ಶೇ 20 ರಷ್ಟು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗ್ತಿವೆ. ರಾಜ್ಯದಲ್ಲಿ ಈ ಪ್ರಮಾಣ ಶೇ 2.44 ರಷ್ಟಿದೆ. ಪಾಸಿಟಿವಿಟಿ ದರ ರಾಜ್ಯದಲ್ಲಿ ಕಡಿಮೆಯಿದೆ. ಹೆಚ್ಚಿನ ಕೋವಿಡ್ ಟೆಸ್ಟ್ ಗಳನ್ನ ನಡೆಸಿದಾಗ ನಮಗೆ ಹೆಚ್ಚು ಮಾಹಿತಿ ಸಿಗಲಿದೆ ಎಂದರು.
ಪ್ರತಿನಿತ್ಯ 1500 ಕೋವಿಡ್ ಟೆಸ್ಟ್
ಕೇಂದ್ರ ಆರೋಗ್ಯ ಸಚಿವರ ಸಭೆ ಬಳಿಕ, ಸಂಜೆ ಆರೋಗ್ಯ ಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್ ಗಳ ಜೊತೆಗೆ ಐಸಿಯು ಬೆಡ್ ಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಹೆಚ್ಚು ಜನಜಂಗುಳಿ ಇರುವ ಭಾಗದಲ್ಲಿ ಮಾಸ್ಕ್ ಧರಿಸಿ ಎಂಬ ಸಲಹೆಯನ್ನ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿಯಲ್ಲಿ ಪ್ರಸ್ತಾಪಿಸುವಂತೆ ಸೂಚನೆ ನೀಡಿದರು.
ಜೀನೋಮ್ ಸೀಕ್ವೆನ್ಸಿಂಗ್ ಅನ್ನ ನಡೆಸಲು ರಾಜ್ಯ ಸರ್ಕಾರವೇ ನಿರ್ಧರಿಸಿದೆ. ಈ ಬಗ್ಗೆ ಕೇಂದ್ರದ ಮಾರ್ಗಸೂಚಿ ಇಲ್ಲದಿದ್ದರೂ, ಜೀನೋಮ್ ಸೀಕ್ವೆನ್ಸಿಂಗ್ ಅಗತ್ಯವಾಗಿದೆ. ಇದರಿಂದ ಕೋರೊನಾ ರೋಪಾಂತರಿ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯಲಿದೆ. ಸಿಕ್ವೆನ್ಸಿಂಗ್ ನಡೆಸಲು 50 ಸ್ಯಾಂಪಲ್ಸ್ ಬೇಕಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗ್ತಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು. ನ್ಯೂ ಇಯರ್ ಸೆಲಬ್ರೆಷನ್ ಸಂದರ್ಭದಲ್ಲಿ ನಿರ್ಬಂಧ ಹಾಕುವ ಬಗ್ಗೆ ಸದ್ಯಕ್ಕೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪವಿಲ್ಲ. ಶನಿವಾರದ ವೇಳೆಗೆ ಒಂದಿಷ್ಟು ಟೆಸ್ಟ್ ಮಾಡಿದಾಗ ಕೇಸಸ್ ಗಳು ಹೆಚ್ಚಾಗಬಹುದು. ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ತೇವೆ
Karnataka Health Minister Dinesh Gundu Rao has said that karnataka is conducting the highest number of COVID-19 tests in the country. Union Health Minister Dinesh Gundu Rao, who attended the meeting convened by the Union Health Minister on COVID-19 precautionary measures from Bengaluru virtually, briefed about the measures taken to control the spread of COVID-19.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm