ಬ್ರೇಕಿಂಗ್ ನ್ಯೂಸ್
22-12-23 10:30 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.22: ಬಿಜೆಪಿ ಸರಕಾರದ ಅವಧಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯಿಂದ ವಿಧಿಸಲಾಗಿರುವ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯಲು ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಅನ್ನುವುದು ಬರೀ ಬೋಗಸ್. ಬಟ್ಟೆ, ಉಡುಪು, ಜಾತಿ ಆಧಾರದ ಮೇಲೆ ಜನರನ್ನು ವಿಭಜಿಸುವುದು, ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಶಿಕ್ಷಣ ಇಲಾಖೆಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
2021ರ ಫೆಬ್ರವರಿ ತಿಂಗಳಲ್ಲಿ ಪಿಯು ತರಗತಿಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ಆಗಿನ ಬಿಜೆಪಿ ಸರಕಾರ ನಿಷೇಧಿಸಿ ಆದೇಶ ಹೊರಡಿಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಎಲ್ಲರೂ ಸಮಾನರು ಅನ್ನುವ ನೆಲೆಯಲ್ಲಿ ಸರಕಾರಿ ಪಿಯು ಕಾಲೇಜಿನ ತರಗತಿಯೊಳಗೆ ಸಮವಸ್ತ್ರ ಹೊರತುಪಡಿಸಿ ಯಾವುದೇ ಹೆಚ್ಚುವರಿ ಬಟ್ಟೆಗಳನ್ನು ಧರಿಸುವುದು ಸರಿಯಲ್ಲ. ಆಯಾ ಕಾಲೇಜಿನಲ್ಲಿ ವಿಧಿಸುವ ಸಮವಸ್ತ್ರ ಮಾತ್ರ ಧರಿಸಬೇಕು ಎಂದು ಶಿಕ್ಷಣ ಇಲಾಖೆ ಮೂಲಕ ಆದೇಶ ಮಾಡಲಾಗಿತ್ತು.
ಆನಂತರ, ಹೈಕೋರ್ಟ್ ಕೂಡ ರಾಜ್ಯ ಸರಕಾರದ ಆದೇಶವನ್ನು ಎತ್ತಿ ಹಿಡಿದಿತ್ತು. ಹಿಜಾಬ್ ಧರಿಸುವುದು ಮುಸ್ಲಿಮರ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ ಎಂದು ಕೋರ್ಟ್ ಹೇಳಿದ್ದಲ್ಲದೆ, ರಾಜ್ಯ ಸರಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ದೂರುಗಳನ್ನು ವಜಾ ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿಯೂ ತಕರಾರು ಅರ್ಜಿ ಸಲ್ಲಿಸಲಾಗಿತ್ತು. ಇಬ್ಬರು ನ್ಯಾಯಾಧೀಶರ ಪೀಠ ಪ್ರತ್ಯೇಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ತೀರ್ಪು ನೀಡಿದ್ದರು.
ನ್ಯಾ.ಹೇಮಂತ್ ಗುಪ್ತಾ ನೀಡಿದ ತೀರ್ಪಿನಲ್ಲಿ ಸಮಾನತೆಯನ್ನು ಎತ್ತಿಹಿಡಿಯುವುದಕ್ಕಾಗಿ ಹಿಜಾಬ್ ನಿಷೇಧ ಮಾಡಲಾಗಿದೆ. ಇದರಿಂದ ತರಗತಿಯಲ್ಲಿ ಜಾತ್ಯತೀತ ಮೌಲ್ಯವನ್ನು ಎತ್ತಿಹಿಡಿದಂತಾಗುತ್ತದೆ. ಹಿಜಾಬ್ ನಿಷೇಧ ಮಾಡಿರುವುದು ತಪ್ಪಲ್ಲ ಎಂದು ಹೇಳಿದ್ದರು. ಆದರೆ, ನ್ಯಾ.ಸುಧಾಂಶು ಧುಲಿಯಾ ನೀಡಿದ ತೀರ್ಪಿನಲ್ಲಿ, ಹಿಜಾಬ್ ಧರಿಸಬೇಕೇ ಬೇಡವೇ ಅನ್ನುವುದು ಅವರವರಿಗೆ ಬಿಟ್ಟದ್ದು. ಅದು ಆಯ್ಕೆಯ ವಿಷಯವಾಗಿರುತ್ತದೆ. ತನ್ನ ಆಯ್ಕೆಯ ವಸ್ತ್ರಗಳನ್ನು ಧರಿಸುವುದು ಮೂಲಭೂತ ಹಕ್ಕು ಎಂದು ತೀರ್ಪು ನೀಡಿದ್ದರು. ಆನಂತರ, ಹಿಜಾಬ್ ನಿಷೇಧ ವಿಷಯ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆಯಾಗಿತ್ತು.
2022ರ ಡಿಸೆಂಬರ್ 28ರಂದು ಮೊದಲ ಬಾರಿಗೆ ಉಡುಪಿಯ ಪಿಯು ಕಾಲೇಜಿನಲ್ಲಿ ಆರು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಬರಲು ಬಿಡಬೇಕೆಂದು ಪ್ರತಿಭಟನೆ ಆರಂಭಿಸಿದ್ದರು. ಇದೇ ಪ್ರತಿಭಟನೆ ಆಬಳಿಕ ಇಡೀ ರಾಜ್ಯಕ್ಕೆ ವಿಸ್ತರಿಸಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ಸರಕಾರ ಮಾತ್ರ ವಿದ್ಯಾರ್ಥಿಗಳ ಸಮಾನತೆ ದೃಷ್ಟಿಯಿಂದ ಹಿಜಾಬ್ ನಿಷೇಧ ಎಂದು ವಾದಿಸಿತ್ತು.
ಪ್ರಧಾನಿ @narendramodi ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ಒಡೆಯುವ ಕೆಲಸವನ್ನು @BJP4India ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ.#Hijab pic.twitter.com/EIHU5V7zas
— Siddaramaiah (@siddaramaiah) December 22, 2023
Karnataka Chief Minister K Siddaramaiah Friday said he has directed withdrawal of the hijab ban order in the state that was imposed by the previous BJP government led by Basavaraj Bommai.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm