Mysore, CM Siddaramaiah, Hijab Ban: ಹಿಜಾಬ್ ಹಿಂತೆಗೆಯುತ್ತೇನೆಂದಿಲ್ಲ, ಸರ್ಕಾರದಲ್ಲಿ ಚರ್ಚೆ ಮಾಡ್ತೀನಿ ; ಹಿಜಾಬ್ ವಾಪಸ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ 

23-12-23 04:57 pm       HK News Desk   ಕರ್ನಾಟಕ

ಹಿಜಾಬ್ ಜಾರಿ ವಿಚಾರಕ್ಕೆ ಭಾರೀ ಆಕ್ರೋಶ ಕೇಳಿಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಹಿಂತೆಗೆಯುತ್ತೇವೆಂದು ಹೇಳಿಲ್ಲ‌. ಆ ಬಗ್ಗೆ ಸರಕಾರದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ಹೇಳಿದ್ದಾರೆ.‌ 

ಮೈಸೂರು, ಡಿ.23: ಹಿಜಾಬ್ ಜಾರಿ ವಿಚಾರಕ್ಕೆ ಭಾರೀ ಆಕ್ರೋಶ ಕೇಳಿಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಹಿಂತೆಗೆಯುತ್ತೇವೆಂದು ಹೇಳಿಲ್ಲ‌. ಆ ಬಗ್ಗೆ ಸರಕಾರದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ಹೇಳಿದ್ದಾರೆ.‌ 

ಹಿಜಾಬ್ ನಿಷೇಧ ವಾಪಸ್ ಪಡೆಯಲು ಸರ್ಕಾರ ಚಿಂತನೆ ನಡೆಸುತ್ತಿದೆ ಅಂತ ಹೇಳಿದ್ದೇನೆ ಅಷ್ಟೇ. ಯಾವ ಶೈಕ್ಷಣಿಕ ವರ್ಷದಿಂದ ಜಾರಿ ಅಂತ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುತ್ತೇನೆ ಎಂದಿದ್ದಾರೆ. 

ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಸಮಸ್ಯೆಗಳ ಬಗ್ಗೆ ಜನರು ನನ್ನ ಬಳಿ ಹೇಳಿಕೊಳ್ಳುತ್ತಿದ್ದರು. ಆ ಬಗ್ಗೆ ಉತ್ತರ ನೀಡುತ್ತಿದ್ದಾಗಲೇ ಹಿಜಾಬ್ ಕುರಿತಂತೆ ಪ್ರಶ್ನೆ ಕೇಳಿದರು. ನಾವು ಹಿಜಾಬ್ ಬ್ಯಾನ್ ವಾಪಸ್ ಬಗ್ಗೆ ಚಿಂತನೆ ಮಾಡಿದ್ದೇವೆ ಎಂದು ಹೇಳಿದ್ದೆ. ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಬಗ್ಗೆ ಶುಕ್ರವಾರ ರಾತ್ರಿ ಟ್ವೀಟ್ ಪೋಸ್ಟ್ ಮಾಡಿದ್ದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Karnataka chief minister Siddaramaiah on Saturday clarified that his government is contemplating lifting the ban on hijab but has not taken the final decision yet.