ಬ್ರೇಕಿಂಗ್ ನ್ಯೂಸ್
28-12-23 01:07 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.28: ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ನಡೆದ ಪ್ರತಿಭಟನೆ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳಿಗೆ ಆಗ್ರಹಿಸಿ ನಡೆಸಲಾದ ಚಳವಳಿಗೆ ಸಂಬಂಧಿಸಿ ಬಂಧಿತರಾದ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಜನರನ್ನು ದೇವನಹಳ್ಳಿಯಲ್ಲಿ ನ್ಯಾಯಾಧೀಶರ ಮುಂದೆ ಇಂದು ಬೆಳಗ್ಗೆ ಹಾಜರುಪಡಿಸಲಾಗಿತ್ತು. ನಾರಾಯಣಗೌಡರು ಸೇರಿದಂತೆ ಎಲ್ಲರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು ಎಲ್ಲಾ ಬಂಧಿತರನ್ನು ಪರಪ್ಪನ ಅಗ್ರಹಾರ ಕಾರಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಬಂಧನದ ಬೆನ್ನಲ್ಲೇ ಎಲ್ಲಾ ಸಚಿವರ ನಿವಾಸ ಮುಂದೆ ಪ್ರತಿಭಟನೆ ನಡೆಸುವಂತೆ ನಾರಾಯಣಗೌಡರು ಕರೆ ಕೊಟ್ಟಿದ್ದಾರೆ. ಬೆಳಗ್ಗೆಯಿಂದ ಊಟ ನೀಡಿಲ್ಲ, ಔಷಧಿಯನ್ನು ನೀಡಿಲ್ಲ. ನನ್ನ ಮೊಬೈಲ್ ಕಸಿದು ನೋವುಂಟು ಮಾಡಿದ್ದಾರೆ. ನಮ್ಮ ಮೇಲೆ ದಬ್ಬಾಳಿಕೆ ಮಾಡಿ ಕಾರ್ಯಕರ್ತರನ್ನ ಬಂಧನ ಮಾಡಿದ್ದಾರೆ ಎಂದು ನಾರಾಯಣಗೌಡರು ಆರೋಪಿಸಿದರು.
ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ಜೈಲಿಗೆ ಹಾಕಲು ಕರೆದುಕೊಂಡು ಹೋಗುವ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ನಾರಾಯಣ ಗೌಡರು ಇದೊಂದು ಮುಠ್ಠಾಳ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರವೇ ನಾರಾಯಣ ಗೌಡ ವಿರುದ್ಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ. ಹೆದ್ದಾರಿ ತಡೆ, ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, (IPC 353) ರಡಿ ಪ್ರಕರಣವನ್ನು ನಾರಾಯಣ ಗೌಡ ಸೇರಿ ಸಂಘಟನೆಯ ಇನ್ನಿತರ ಕಾರ್ಯಕರ್ತರ ಮೇಲೆ ದಾಖಲು ಮಾಡಿಕೊಳ್ಳಲಾಗಿದೆ. ನಾರಾಯಣ ಗೌಡರ ಜತೆ 29 ಮಂದಿಯನ್ನು ಜೈಲಿಗೆ ಹಾಕಲಾಗಿದೆ.
ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ಆರೋಪ ದಾಖಲಾಗಿದೆ. ನಾರಾಯಣ ಗೌಡ ಸೇರಿ 6 ಮಂದಿ ವಿರುದ್ದ ಪಿಎಸ್ ಐ ಲಿತೀನ್ ದೂರಿನನ್ವಯ ಚಿಕ್ಕಜಾಲ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬುಧವಾರ ಇಂಗ್ಲಿಷ್ ನಾಮಫಲಕಗಳ ವಿರುದ್ಧ ಹೋರಾಟ ಮಾಡಿದ ಕರವೇ ನಾರಾಯಣಗೌರನ್ನ ಅರೆಸ್ಟ್ ಮಾಡಿ ಯಲಹಂಕದ ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಗಿತ್ತು. ಡಿಸಿಪಿ ಲಕ್ಷ್ಮಿಪ್ರಸಾದ್ ನೇತೃತ್ವದಲ್ಲಿ ನಾರಾಯಣಗೌಡ ಸೇರಿದಂತೆ 20ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಮೆಡಿಕಲ್ ಟೆಸ್ಟ್ ಮಾಡಲಾಗಿತ್ತು. ನಾರಾಯಣಗೌಡರನ್ನ ಅರೆಸ್ಟ್ ಮಾಡೋ ಮೊದಲು ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ನಾರಾಯಣಗೌಡರನ್ನ ಅರೆಸ್ಟ್ ಮಾಡಿದ್ರೆ ನಾವು ಸುಮ್ಮನೆ ಇರಲ್ಲ. ಅರೆಸ್ಟ್ ಮಾಡಿದ್ರೆ ಪರಿಸ್ಥಿತಿ ಬೇರೆ ತರ ಇರುತ್ತೆ. ನಾಡಲ್ಲಿ ಬೆಂಕಿ ಹತ್ಕೊಂಡು ಉರಿಯುತ್ತೆ ಎಂದಿದ್ದರು.
ಜೈಲಿಗೆ ಹಾಕಿದ್ರೆ ನಾವು ಸುಮ್ಮನಿರಲ್ಲ. ಒಬ್ಬ ಸಚಿವನೂ ಬಂದು ನಮ್ಮ ಕೂಗನ್ನು ಕೇಳಲಿಲ್ಲ. ಸಚಿವರು ಅಯೋಗ್ಯರು. ಸಚಿವರ ಮನೆಮುಂದೆ ಧಿಕ್ಕಾರ ಕೂಗಿ ಪ್ರಾಣತ್ಯಾಗ ಮಾಡ್ತೇವೆ ಎಂದು ಕಿಡಿಕಾರಿದರು. ಇದೇ ವೇಳೆ ಬಿಎಂಟಿಸಿ ಬಸ್‍ನಲ್ಲಿ ಮೆಡಿಕಲ್ ಟೆಸ್ಟ್ ಗೆ ಕರೆದುಕೊಂಡು ಹೋಗುವಾಗ ಕರವೇ ಕಾರ್ಯಕರ್ತರು ಬಸ್‍ನ ತಡೆದು ಗಾಜನ್ನು ಪುಡಿ ಪುಡಿ ಮಾಡಿದರು. ಇದೇ ವೇಳೆ ನಾರಾಯಣಗೌಡ ಅವರು ಇಂದು ರಾಜ್ಯಾದ್ಯಂತ ಹೋರಾಟಕ್ಕೆ ಕರೆಕೊಟ್ಟಿದ್ದು, ಇಂದು ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಸಿಎಂ ಹಾಗೂ ಸಚಿವರ ಮನೆ ಮುಂದೆ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಮಾಡುವ ಸಾಧ್ಯತೆಗಳಿವೆ.
T.A. Narayana Gowda, president, of Karnataka Rakshana Vedike, who led protests against non-Kannada signboards that degenerated into vandalism on December 27, was arrested with 29 of his associates. They were produced before a magistrate on December 28 morning. They were shifted to Parappana Agrahara Central Prison after the magistrate remanded them into judicial custody.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 12:26 pm
Mangalore Correspondent
Thokottu, Mangalore: ತೊಕ್ಕೊಟ್ಟು ನಾಗರಿಕರ ಎಪ್ಪತ...
18-07-25 10:11 pm
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm