ಬ್ರೇಕಿಂಗ್ ನ್ಯೂಸ್
28-12-23 05:35 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 28: ಫೆ.28ರೊಳಗೆ ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ 60%ರಷ್ಟು ಕನ್ನಡ ಭಾಷೆ ಬಳಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಈ ಸಂಬಂಧ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅಂಗಡಿ-ಮುಂಗಟ್ಟುಗಳ ಮುಂಭಾಗ ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಉನ್ನತ ಮಟ್ಟದ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ 10.03.23ರಂದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2023ರಲ್ಲಿ ಕಾಯ್ದೆ ರೂಪಿಸಿತ್ತು. ಈ ಕಾಯ್ದೆಗೆ ರಾಜ್ಯಪಾಲರು ಕೂಡ ಅಂಕಿತ ಹಾಕಿದ್ದಾರೆ. ಆದರೆ ರೂಲ್ ಫ್ರೇಮ್ ಆಗಿರಲಿಲ್ಲ. ಅದರಂತೆ ಸೆಕ್ಷನ್ 17(6)ರಂತೆ ಸರ್ಕಾರದ ಅಥವಾ ಸ್ಥಳೀಯ ಪದಾಧಿಕಾರಿಗಳ ಅನುಮೋದನೆಯೊಂದಿಗೆ ವಾಣಿಜ್ಯ, ಕೈಗಾರಿಕೆ, ಅಂಗಡಿ, ಸಮಾಲೋಚನಾ ಕೇಂದ್ರಗಳು, ಹೊಟೇಲ್‌ಗಳು ಹೆಸರುಗಳನ್ನು ಪ್ರದರ್ಶಿಸುವ ಬೋರ್ಡ್‌ನ ಅರ್ಧ ಭಾಗ ಕನ್ನಡದಲ್ಲಿ ಇರಬೇಕು ಎಂದಿದೆ. ಈ ಕಾಯ್ದೆಯಲ್ಲಿ 50:50ರ ಅನುಪಾತದಲ್ಲಿ ಕನ್ನಡ, ಆಂಗ್ಲ ಭಾಷೆ ಬಳಕೆಯ ನಿಯಮವಿದೆ ಎಂದು ವಿವರಿಸಿದರು.
ಈ ಹಿಂದೆ ನಮ್ಮ ಸರ್ಕಾರ ಇದ್ದಾಗ 60:40 ಅನುಪಾತದಲ್ಲಿ ಕನ್ನಡ, ಆಂಗ್ಲ ಭಾಷೆ ಬಳಕೆ ಮಾಡುವ ಬಗ್ಗೆ ನಿಯಮ ಇತ್ತು. 24.03.2018ರಲ್ಲಿ ಈ ಸಂಬಂಧ ನಾವು ಸುತ್ತೋಲೆ ಹೊರಡಿಸಿ, ನಾಮಫಲಕದ 60%ರಷ್ಟು ಭಾಗದಲ್ಲಿ ಕನ್ನಡ ಬಳಸಲು ಹೇಳಲಾಗಿತ್ತು. ಆದರೆ ಹೊಸ ಕಾಯ್ದೆಯಲ್ಲಿ 50:50 ಕನ್ನಡ, ಆಂಗ್ಲ ಬಳಕೆ ಮಾಡುವ ನಿಯಮ ಇತ್ತು. ಈಗ 50:50 ಬದಲು 60:40 ಕನ್ನಡ, ಆಂಗ್ಲ ಭಾಷೆ ಬಳಕೆ ಮಾಡಲು ಕಾನೂನಿಗೆ ತಿದ್ದುಪಡಿ ತರಲು ಸೂಚನೆ ನೀಡಿದ್ದೇನೆ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸೂಚನೆ ನೀಡಿದ್ದೇನೆ ಎಂದರು.
2024ರ ಫೆ.28ರೊಳಗೆ, ಈ ತಿದ್ದುಪಡಿ ಕಾಯ್ದೆಯಂತೆ ಕಾನೂನು ಪಾಲಿಸುವಂತೆ ಸೂಚನೆ ನೀಡಿದ್ದೇನೆ ಎಂದು ಇದೇ ವೇಳೆ ತಿಳಿಸಿದರು. ಈ ಕಾಯ್ದೆಯ ನಿಯಮ 17(8)ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲಾ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರಬೇಕು. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು. ಈ ಕಾಯ್ದೆ ಇಡೀ ರಾಜ್ಯಕ್ಕೆ ಅನ್ವಯಿಸುತ್ತದೆ.
ಈ ಕಾಯ್ದೆ ಬಗ್ಗೆ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ನಿಯಮವೂ ರೂಪಿಸಿಲ್ಲ. ಹೀಗಾಗಿ ತಿದ್ದುಪಡಿಯೊಂದಿಗೆ ನಿಯಮ ರೂಪಿಸುವಂತೆ ಸೂಚನೆ ನೀಡಲಾಗಿದೆ. ಕಾನೂನು ಜಾರಿ ವಿಳಂಬವಾಗಿರುವುದು ನಿಜ. ಇನ್ನು ವಿಳಂಬವಾಗದಂತೆ ಸೂಚನೆ ನೀಡಿದ್ದೇನೆ. ಅಂಗಡಿ ಮುಂಗಟ್ಟುಗಳು ನಿಯಮ ಪಾಲಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಾಂತಿಯುತ ಪ್ರತಿಭಟನೆಗೆ ಸರ್ಕಾರದ ವಿರೋಧ ಇಲ್ಲ. ಅದಕ್ಕೆ ಸರ್ಕಾರ ಅಡ್ಡಿಪಡಿಸಲ್ಲ. ಆದರೆ ಕಾನೂನು ವಿರುದ್ಧವಾಗಿ ನಡೆದರೆ ಸರ್ಕಾರ ಅದನ್ನು ಸಹಿಸಲ್ಲ. 2022ರಲ್ಲಿ ಹೈಕೋರ್ಟ್ ಆದೇಶದಂತೆ ಪ್ರತಿಭಟನೆ ಕೇವಲ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಮಾಡುವಂತೆ ತೀರ್ಪು ನೀಡಿದೆ. ರಾಜ್ಯದ ಹಿತದೃಷ್ಟಿಯಿಂದ ಪ್ರತಿಭಟನೆ ಮಾಡಿದರೆ ನಾವು ವಿರೋಧ ಮಾಡಲ್ಲ. ಆದರೆ ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳುತ್ತ
ಹಾಗಾಗಿ ಯಾವುದೇ ಸಂಘಟನೆಗಳು ಕಾನೂನು ರೀತಿಯಲ್ಲಿ ನಡೆದುಕೊಳ್ಳಬೇಕು. ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಎಲ್ಲಾ ಹೋರಾಟಗಾರರಿಗೆ, ಸಂಘಟನೆಗಳಿಗೆ ನಾನು ಮನವಿ ಮಾಡುತ್ತೇನೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ. ನಾವು ಕನ್ನಡ ಪರವಾಗಿದ್ದೇವೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯ ಇಲ್ಲ. ಆತಂಕಪಡದ ರೀತಿಯಲ್ಲಿ ನಾವು ಕಾನೂನು ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದರು.
ಯಾವುದೇ ಕೈಗಾರಿಕೆ, ಅಂಗಡಿ, ಸಂಸ್ಥೆ ಮತ್ತು ವಾಣಿಜ್ಯ ಸಂಸ್ಥೆಯ ಮಾಲೀಕ ಅಥವಾ ಅದರ ಉಸ್ತುವಾರಿ ವ್ಯಕ್ತಿಗಳು ಈ ಅಧಿನಿಯಮದ ಪ್ರಕರಣ 17ರ (6) ರಿಂದ (10) ರವರೆಗಿನ ಉಪಪ್ರಕರಣಗಳ ಉಪಬಂಧಗಳನ್ನು ಪಾಲಿಸಲು ವಿಫಲವಾದರೆ ದಂಡ ವಿಧಿಸಲಾಗುತ್ತದೆ.
ಮೊದಲನೆಯ ಅಪರಾಧಕ್ಕಾಗಿ ರೂ.5,000 ವರೆಗೆ ದಂಡ ವಿಧಿಸಲಾಗುತ್ತದೆ. ಎರಡನೆಯ ಅಪರಾಧಕ್ಕಾಗಿ ರೂ.10,000ವರೆಗೆ ದಂಡ ಹಾಕಲಾಗುತ್ತದೆ ನಂತರದ ಪ್ರತಿಯೊಂದು ಅಪರಾಧಕ್ಕಾಗಿ ರೂ.20,000 ವರೆಗೆ ದಂಡ ವಿಧಿಸಲಾಗುತ್ತದೆ. ಜೊತೆಗೆ ಪರವಾನಗಿಯನ್ನೂ ಸಹ ರದ್ದುಗೊಳಿಸಲಾಗುತ್ತದೆ.
ಯಾವುದೇ ಕ್ರಮ ಕೈಗೊಳ್ಳುವ ಮುಂಚೆ ಅಧಿನಿಯಮದ ಉಲ್ಲಂಘನೆಗಾಗಿ ಕಾರಣ ಕೇಳುವ ನೋಟಿಸ್ ನೀಡಲಾಗುತ್ತದೆ. ನೋಟಿಸಿನ ದಿನಾಂಕದಿಂದ ಹದಿನೈದು ದಿನಗಳೊಳಗೆ ಈ ಅಧಿನಿಯಮದ ಉಪಬಂಧಗಳ ಪಾಲನೆಗಾಗಿ ಅವಕಾಶ ಒದಗಿಸಲಾಗುತ್ತದೆ. ಕಾರಣ ಕೇಳುವ ನೋಟಿಸಿನ ಅನುಸರಣೆ ಮಾಡಲು ವಿಫಲವಾದಲ್ಲಿ ಮೇಲ್ಕಂಡ ಅಪರಾಧ ಮತ್ತು ದಂಡನೆಗೆ ಗುರಿಯಾಗುತ್ತಾರೆ ಎಂದು ತಿಳಿಸಲಾಗಿದೆ.
Rakshana vedike members vandalise signboards across Bengalore, CM Siddaramaiah, Narayana Gowda. 20 thousand fine will be imposed if there is no 60 percent kannada in the sign boards said CM Siddaramaiah.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm