ಬ್ರೇಕಿಂಗ್ ನ್ಯೂಸ್
29-12-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.29: 12 ವರ್ಷಗಳ ಹಿಂದಿನ ಚೆಕ್ ಬೌನ್ಸ್ ಪ್ರಕರಣದಲ್ಲಿ ಕರ್ನಾಟಕದ ಜನಪ್ರತಿನಿಧಿ ನ್ಯಾಯಾಲಯವು ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬರೋಬ್ಬರಿ 6.96 ಕೋಟಿ ರೂ. ದಂಡ ವಿಧಿಸಿದೆ. ತಪ್ಪಿದರೆ 6 ತಿಂಗಳ ಸೆರೆವಾಸ ಅನುಭವಿಸಬೇಕು ಎಂದು ಹೇಳಿದೆ.
2011ರಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದ್ದು ಮಧು ಬಂಗಾರಪ್ಪ ಅವರೇ ಸ್ಥಾಪಿಸಿದ್ದ ಆಕಾಶ್ ಆಡಿಯೋ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಆ ಸಂಸ್ಥೆಯಿಂದ ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆಗೆ 6 ಕೋಟಿ, 96 ಲಕ್ಷದ 60 ಸಾವಿರ ರೂ. ಸಂದಾಯವಾಗಬೇಕಿತ್ತು. ಹಲವಾರು ದಿನಗಳಿಂದ ಬಾಕಿ ಇರಿಸಿದ್ದ ಹಣಕ್ಕಾಗಿ ಮಧು ಬಂಗಾರಪ್ಪ ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿದ್ದರಿಂದ ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಪ್ರಕರಣ ದಾಖಲಿಸಿತ್ತು. ಸುದೀರ್ಘ ವಿಚಾರಣೆ ಬಳಿಕ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಹೊರಬಿದ್ದಿದೆ.
ಮಧು ಬಂಗಾರಪ್ಪ ಒಟ್ಟು 6 ಕೋಟಿ, 96 ಲಕ್ಷದ 70 ಸಾವಿರ ರೂ. ದಂಡವನ್ನಾಗಿ ಕಟ್ಟಬೇಕು. ಅದರಲ್ಲಿ 6 ಕೋಟಿ 96 ಲಕ್ಷದ 60 ಸಾವಿರ ರೂ. ರಾಜೇಶ್ ಎಕ್ಸ್ ಪೋರ್ಟ್ಸ್ ಅವರಿಗೆ ನೀಡಬೇಕು. ಉಳಿದ 10 ಸಾವಿರ ರೂ.ಗಳನ್ನು ಸರ್ಕಾರಕ್ಕೆ ದಂಡದ ರೂಪದಲ್ಲಿ ಕಟ್ಟಬೇಕು ಎಂದು ಹೇಳಿದೆ. ಈ ಎಲ್ಲಾ ಪ್ರಕ್ರಿಯೆಗಳಿಗೆ ತಪ್ಪಿದರೆ 6 ತಿಂಗಳ ಕಾರಾಗೃಹ ವಾಸ ಅನುಭವಿಸಬೇಕು ಎಂದು ತೀರ್ಪು ಹೇಳಿದೆ.
A court here has convicted Karnataka's minister for School Education and Literacy Madhu Bangarappa in a cheque bounce case. The special court for cases involving MPs/MLAs directed him to pay a fine amount of Rs 6.96 crore to the complainant, Rajesh Exports, and the remaining Rs.10,000 to be appropriated to the State.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm